Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 43:2 - ಕನ್ನಡ ಸತ್ಯವೇದವು C.L. Bible (BSI)

2 ಅದಾದ ಮೇಲೆ ಹೋಷಾಯನ ಮಗ ಅಜರ್ಯನು, ಕಾರೇಹನ ಮಗ ಯೋಹಾನಾನನು, ಹಾಗು ಅಹಂಕಾರಿಗಳಾದ ಜನರೆಲ್ಲರು ಅವನಿಗೆ, “ನಿನ್ನ ಮಾತು ಸುಳ್ಳು, ಈಜಿಪ್ಟಿಗೆ ಹೋಗಿ ವಾಸಮಾಡಬಾರದು ಎಂದು ತಿಳಿಸುವಂತೆ ನಮ್ಮ ದೇವರಾದ ಸರ್ವೇಶ್ವರ ನಿನ್ನನ್ನು ಕಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಮೇಲೆ ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಸೊಕ್ಕೇರಿದವರೆಲ್ಲರೂ ಅವನಿಗೆ, “ನಿನ್ನ ಮಾತು ಸುಳ್ಳು, ‘ಐಗುಪ್ತಕ್ಕೆ ಹೋಗಿ ವಾಸಮಾಡಬಾರದು’ ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಸೊಕ್ಕೇರಿದವರೆಲ್ಲರೂ ಅವನಿಗೆ - ನಿನ್ನ ಮಾತು ಸುಳ್ಳು; ಐಗುಪ್ತಕ್ಕೆ ಹೋಗಿ ವಾಸಮಾಡಬಾರದು ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಮತ್ತು ಇನ್ನೂ ಕೆಲವರು ದುರಹಂಕಾರಿಗಳಾಗಿದ್ದರು ಮತ್ತು ಹಟಮಾರಿಗಳಾಗಿದ್ದರು. ಈ ಜನರು ಯೆರೆಮೀಯನ ಮೇಲೆ ಕೋಪಗೊಂಡು, “ಯೆರೆಮೀಯನೇ, ನೀನು ಸುಳ್ಳು ಹೇಳುತ್ತಿರುವೆ. ನಮ್ಮ ದೇವರಾದ ಯೆಹೋವನು ನಮಗೆ, ‘ನೀವು ಈಜಿಪ್ಟಿಗೆ ವಾಸಮಾಡಲು ಹೋಗಬಾರದು’ ಎಂದು ಹೇಳುವದಕ್ಕಾಗಿ ನಿನ್ನನ್ನು ಕಳುಹಿಸಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಗರ್ವಿಷ್ಠ ಮನುಷ್ಯರೆಲ್ಲರೂ ಮಾತನಾಡಿ ಯೆರೆಮೀಯನಿಗೆ, “ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾಗಿರುವುದಕ್ಕೆ ಈಜಿಪ್ಟಿಗೆ ಹೋಗಬಾರದೆಂದು ಹೇಳುವುದಕ್ಕೆ ನಮ್ಮ ದೇವರಾದ ಯೆಹೋವ ದೇವರು ನಿನ್ನನ್ನು ಕಳುಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 43:2
31 ತಿಳಿವುಗಳ ಹೋಲಿಕೆ  

ಅಂತೆಯೇ, ರಾಜಧಾನಿಯಾದ ಸಮಾರ್ಯಕ್ಕಿಂತ ಇಸ್ರಯೇಲ್ ಹೆಚ್ಚಲ್ಲ. ರಾಜನಾದ ಪೆಕಹನಿಗಿಂತ ಸಮಾರ್ಯ ಹೆಚ್ಚಲ್ಲ. ನಿಮ್ಮ ವಿಶ್ವಾಸ ಸ್ಥಿರವಿಲ್ಲದಿದ್ದರೆ, ನಿಮಗೆ ಸ್ಥಿರತೆ ಇರುವುದಿಲ್ಲ.”


ಇದಲ್ಲದೆ, ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು, ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ, ಅವನಿಗೆ ವಿರುದ್ಧ ದಂಗೆ ಎದ್ದನು. ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಅಭಿಮುಖನಾಗಲೊಲ್ಲದೆ, ಹಟಹಿಡಿದು ಮನಸ್ಸನ್ನು ಕಠಿಣಮಾಡಿಕೊಂಡನು.


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


ಯೆರೆಮೀಯನು ಜನರೆಲ್ಲರನ್ನು ಸಂಬೋಧಿಸಿ ದೇವರಾದ ಸರ್ವೇಶ್ವರ ತನ್ನ ಮುಖಾಂತರ ಅವರಿಗೆ ಹೇಳಿಕಳುಹಿಸಿದ ಮಾತುಗಳನ್ನೆಲ್ಲ ತಿಳಿಸಿದನು.


ಇದಾದ ಬಳಿಕ ಎಲ್ಲ ಸೇನಾಪತಿಗಳು, ಕಾರೇಹನ ಮಗ ಯೋಹಾನಾನನು, ರೋಷಾಯನ ಮಗ ಯೆಜನ್ಯನು, ಹಾಗು ಚಿಕ್ಕವರು ಮೊದಲ್ಗೊಂಡು ದೊಡ್ಡವರ ತನಕ ಎಲ್ಲ ಜನರು ಪ್ರವಾದಿ ಯೆರೆಮೀಯನ ಬಳಿಗೆ ಬಂದರು.


ಹೀಗೆ ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ ನೆಟೋಫದವನಾದ ಏಫಯನ ಮಕ್ಕಳು ಗೆದಲ್ಯನ ಬಳಿಗೆ ಹೋದರು.


ಜನರೇ, ಕಿವಿಗೊಡಿ, ಹೆಮ್ಮೆಪಡಬೇಡಿ, ಸರ್ವೇಶ್ವರನೇ ನಿಮಗೆ ಕೊಡುವ ಆದೇಶ ಇದು :


ಗರ್ವಿಷ್ಠನು ಯಾರೇ ಆಗಿರಲಿ, ಅವನು ಸರ್ವೇಶ್ವರನಿಗೆ ಅಸಹ್ಯ; ಅವನಿಗೆ ದಂಡನೆ ತಪ್ಪದು, ಇದು ಖಂಡಿತ.


ಆಗ ಕಾರೇಹನ ಮಗ ಯೋಹಾನಾನನು ಮತ್ತು ಅವನೊಂದಿಗಿದ್ದ ಸೇನಾಪತಿಗಳೆಲ್ಲರು ತಾವು ನೆತನ್ಯನ ಮಗ ಇಷ್ಮಾಯೇಲನ ಕೈಯಿಂದ ತಪ್ಪಿಸಿ ಗಿಬ್ಯೋನಿನಿಂದ ತಂದಿದ್ದ ಜನರನ್ನು ಅಂದರೆ ಯೋಧರು, ಮಹಿಳೆಯರು, ಮಕ್ಕಳು, ಕಂಚುಕಿಗಳು, ಹೀಗೆ ಇಷ್ಮಾಯೇಲನು ಅಹೀಕಾಮನ ಮಗ ಗೆದಲ್ಯನನ್ನು ಕೊಂದ ಬಳಿಕ ಜನರನ್ನೆಲ್ಲರನ್ನು ಕರೆದುಕೊಂಡು ಹೊರಟರು.


ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು.


ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.


ಬೇಸತ್ತಿದೆ ಮನ ಗರ್ವಿಗಳ ನಿಂದೆಯಿಂದ I ಸುಖಭೋಗಿಗಳು ಮಾಡುವ ಅಪಹಾಸ್ಯದಿಂದ II


ಶಾಪಗ್ರಸ್ತರು ನಿನ್ನ ಆಜ್ಞೆಗಳನು ಮೀರಿದವರು I ನಿನ್ನ ಧಿಕ್ಕಾರಕ್ಕೆ ಗುರಿಯಾಗುವರು ಆ ಗರ್ವಿಷ್ಠರು II


ಕಪಟವಾಡುವ ತುಟಿಗಳನು ಪ್ರಭು ಕಡಿದುಬಿಡಲಿ I ಬಡಾಯಿಕೊಚ್ಚುವ ಜಿಹ್ವೆಯನು ಕತ್ತರಿಸಿಬಿಡಲಿ II


ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯೋ?


ಅದಕ್ಕೆ ಫರೋಹನು, “ 'ಸರ್ವೇಶ್ವರ' ಎಂಬುವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಯೇಲರನ್ನು ಹೋಗಬಿಡಬೇಕೊ? ಆ ಸರ್ವೇಶ್ವರನು ಯಾರೋ ನನಗೆ ಗೊತ್ತಿಲ್ಲ. ಇಸ್ರಯೇಲರನ್ನು ನಾನು ಹೋಗಬಿಡುವುದಿಲ್ಲ,” ಎಂದು ಬಿಟ್ಟನು.


ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳಿಗೆ ಗೊತ್ತುಮಾಡಿದ್ದ ಅಳಿಯಂದಿರಿಗೆ ಸಂಗತಿಯನ್ನು ಹೇಳಿ, “ನೀವೆದ್ದು ಈ ಸ್ಥಳವನ್ನು ಬಿಟ್ಟ ಹೊರಡಿರಿ; ಈ ಊರನ್ನು ಸರ್ವೇಶ್ವರ ಸ್ವಾಮಿ ನಾಶ ಮಾಡಲಿದ್ದಾರೆ” ಎಂದು ಹೇಳಿದನು. ಆ ಅಳಿಯಂದಿರಿಗೆ ಇದೊಂದು ಪರಿಹಾಸ್ಯವಾಗಿ ಕಾಣಿಸಿತು.


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ಬಾಬಿಲೋನಿಯದ ಅರಸನಿಂದ ನಾಡಿನ ರಾಜ್ಯಪಾಲನಾಗಿ ನೇಮಕಗೊಂಡಿದ್ದ ಅಹೀಕಾಮನ ಮಗ ಗೆದಲ್ಯನನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದುಹಾಕಿದ್ದರಿಂದ ಬಾಬಿಲೋನಿಯರಿಗೆ ಆ ಜನರು ಅಂಜಿದ್ದರು.


ಅದಕ್ಕೆ ಅವರು ಯೆರೆಮೀಯನಿಗೆ, “ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮೂಲಕ ನಮಗೆ ಕಳಿಸುವ ಮಾತಿನಂತೆ ನಾವು ನಡೆಯದಿದ್ದರೆ, ಆ ಸರ್ವೇಶ್ವರನೇ ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು, ನಮ್ಮನ್ನು ಖಂಡಿಸಲಿ.


ನಿಮ್ಮನ್ನು ನೀವೇ ಮೋಸಮಾಡಿಕೊಳ್ಳುತ್ತಿದ್ದೀರಿ. ನೀವೇ ನನ್ನ ಬಳಿಗೆ ಬಂದು ‘ನಮ್ಮ ದೇವರಾದ ಸರ್ವೇಶ್ವರನನ್ನು ನಮಗಾಗಿ ಪ್ರಾರ್ಥಿಸು. ನಮ್ಮ ದೇವರಾದ ಸರ್ವೇಶ್ವರ ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು. ಅದರಂತೆ ನಾವು ನಡೆಯುತ್ತೇವೆ,’ ಎಂಬುದಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ನೀವೇ ಕಳುಹಿಸಿದಿರಿ.


“ಸರ್ವೇಶ್ವರನ ಹೆಸರಿನಲ್ಲಿ ನೀನು ನಮಗೆ ನುಡಿದ ಮಾತನ್ನು ನಾವು ಕೇಳಲೊಲ್ಲೆವು.


ಯಕೋಬ ಕುಲದವರಿಗೆ‍ ಶಾಪದ ಸಂದೇಶ ಒಂದನ್ನು ಸರ್ವೇಶ್ವರ ಕಳುಹಿಸಿರುವರು. ಅದು ಇಸ್ರಯೇಲರ ಮೇಲೆ ಎರಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು