Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:10 - ಕನ್ನಡ ಸತ್ಯವೇದವು C.L. Bible (BSI)

10 ಅವರು ಇಂದಿನವರೆಗೂ ಪಶ್ಚಾತ್ತಾಪಪಡಲಿಲ್ಲ. ನನಗೆ ಭಯಪಡಲಿಲ್ಲ. ನಿಮಗೂ ನಿಮ್ಮ ಪೂರ್ವಜರಿಗೂ ನಾನು ನೇಮಿಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಇಂದಿನವರೆಗೂ ತಗ್ಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ನೇಮಿಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ಇಂದಿನವರೆಗೂ ತಗ್ಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ನಿಮ್ಮ ಪಿತೃಗಳಿಗೂ ನೇವಿುಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇಂದಿನವರೆಗೂ ಯೆಹೂದದ ಜನ ತಮ್ಮನ್ನು ವಿನೀತರನ್ನಾಗಿ ಮಾಡಿಕೊಂಡಿಲ್ಲ. ಅವರು ನನ್ನ ಬಗ್ಗೆ ಎಳ್ಳಷ್ಟು ಗೌರವವನ್ನು ತೋರಿಸಿಲ್ಲ. ಆ ಜನರು ನನ್ನ ಉಪದೇಶಗಳಂತೆ ನಡೆದುಕೊಂಡಿಲ್ಲ. ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಧರ್ಮೋಪದೇಶಗಳನ್ನು ಅವರು ಪಾಲಿಸಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈ ದಿನದವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ. ನಾನು ನಿಮ್ಮ ಮುಂದೆಯೂ, ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನಿಯಮದಲ್ಲಿ ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:10
38 ತಿಳಿವುಗಳ ಹೋಲಿಕೆ  

ಭಯದಿಂದ ನಡೆದುಕೊಳ್ಳುವವನು ಭಾಗ್ಯವಂತನು; ಕಠಿಣ ಹೃದಯನು ಕೇಡಿಗೆ ತುತ್ತಾಗುವನು.


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ದೇವರ ಪರಾಕ್ರಮಕ್ಕೆ ತಗ್ಗಿ ನಮ್ರರಾಗಿ ನಡೆದುಕೊಳ್ಳಿ. ಆಗ ಅವರು ನಿಮ್ಮನ್ನು ಸಕಾಲದಲ್ಲಿ ಮೇಲಕ್ಕೆತ್ತುವರು;


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಲಜ್ಜೆಯ ಗಂಧವೂ ಅವರಿಗಿಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ.


ಅದು ಸರಿಯೆ. ಅವರ ಅವಿಶ್ವಾಸದ ಕಾರಣದಿಂದ ಅವರನ್ನು ಕಡಿದುಹಾಕಲಾಯಿತು. ನೀನು ದೃಢವಾಗಿ ನಿಂತಿರುವುದಾದರೋ ವಿಶ್ವಾಸದ ಪ್ರಯುಕ್ತವೇ. ಆದ್ದರಿಂದ ಗರ್ವಪಡಬೇಡ. ಭಯಭಕ್ತಿಯಿಂದಿರು.


ಆದರೆ ಮತ್ತೊಬ್ಬ ಅಪರಾಧಿ ಅವನನ್ನು ಖಂಡಿಸುತ್ತಾ, “ನಿನಗೆ ದೇವರ ಭಯಬೇಡವೇ? ನೀನು ಸಹ ಇದೇ ಶಿಕ್ಷೆಗೆ ಗುರಿಯಾಗಿರುವೆ;


ಶತಾಧಿಪತಿ ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದುದೆಲ್ಲವನ್ನೂ ಕಂಡು ಭಯಭ್ರಾಂತರಾದರು. “ಸತ್ಯವಾಗಿಯೂ ಈತ ದೇವರ ಪುತ್ರನೇ ಸರಿ,” ಎಂದರು.


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


“ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು.


ಅರಸನೇ ಆಗಲಿ, ಅವನ ಸೇವಕರಲ್ಲಿ ಯಾರೇ ಆಗಲಿ, ಸುರುಳಿಯ ಮಾತುಗಳನ್ನೆಲ್ಲಾ ಕೇಳಿಯೂ ಭಯಪಡಲಿಲ್ಲ. ದುಃಖಸೂಚನೆಗಾಗಿ ತಮ್ಮ ಬಟ್ಟೆಯನ್ನು ಹರಿದುಕೊಳ್ಳಲಿಲ್ಲ.


ಜನಾಂಗಗಳ ಒಡೆಯಾ, ಅರಸರೇ, ನಿಮಗೆ ಅಂಜದೆ ಇರುವವರಾರು? ಹೌದು, ನೀವು ಭಯಭಕ್ತಿಗೆ ಪಾತ್ರರು ರಾಷ್ಟ್ರಗಳ ಜ್ಞಾನಿಗಳಲ್ಲೂ ರಾಜಪರಂಪರೆಯಲ್ಲೂ ಯಾವನೂ ಇಲ್ಲ ನಿಮಗೆ ಸಮಾನನು.


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಪ್ರೀತಿ ಸತ್ಯತೆಗಳಿಂದ ಪಾಪನಿವಾರಣೆ; ಸರ್ವೇಶ್ವರನ ಭಯಭಕ್ತಿಯಿಂದ ಹಾನಿ ನಿವಾರಣೆ.


ಬುದ್ಧಿವಂತನು ಕೇಡಿಗೆ ಅಂಜಿ ಓರೆಯಾಗುವನು; ಬುದ್ಧಿಹೀನನು ಸೊಕ್ಕಿನಿಂದ ಅದರತ್ತ ಧಾವಿಸುವನು.


ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.


ಮುರಿದ ಮನವೇ ದೇವನೊಲಿವ ಯಜ್ಞವು I ನೊಂದು ಬೆಂದ ಮನವನಾತ ಒಲ್ಲೆಯೆನನು II


ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ I ಉದ್ಧಾರಕನಾತನು ಮನಸ್ಸು ಕುಗ್ಗಿದವರಿಗೆ II


ಈ ನಾಡಿನ ಮತ್ತು ಇದರ ನಿವಾಸಿಗಳ ಬಗ್ಗೆ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡೆ; ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದೆ; ಆದ್ದರಿಂದ ನಿನ್ನನ್ನು ಲಕ್ಷಿಸಿದೆನು


ಅವನು ದೇವರಿಗೆ ಮಾಡಿದ ಪ್ರಾರ್ಥನೆ, ಅದಕ್ಕೆ ದೊರೆತ ಸದುತ್ತರ ಹಾಗು ಅವನು ದೀನಮನಸ್ಕನಾಗುವುದಕ್ಕೆ ಮುಂಚೆ ಮಾಡಿದ ಅಪರಾಧ, ದ್ರೋಹಗಳು, ಹಾಗು ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಅಶೇರಸ್ತಂಭ ವಿಗ್ರಹ, ಇವುಗಳನ್ನು ನಿಲ್ಲಿಸಿದ್ದು, ಇವುಗಳು ದರ್ಶಿಗಳ ಚರಿತ್ರೆಯಲ್ಲಿ ಲಿಖಿತವಾಗಿವೆ.


ಆದರೆ ಆ ಕಷ್ಟದಲ್ಲಿ ಮನಸ್ಸೆ ತನ್ನ ದೇವರಾದ ಸರ್ವೇಶ್ವರನ ಪ್ರಸನ್ನತೆಯನ್ನು ಬೇಡಿಕೊಂಡನು; ತನ್ನ ಪಿತೃಗಳ ದೇವರ ಮುಂದೆ ತನ್ನನ್ನೇ ಬಹಳವಾಗಿ ತಗ್ಗಿಸಿಕೊಂಡು ಅವರನ್ನು ಪ್ರಾರ್ಥಿಸಿದನು.


ಆಗ ಹಿಜ್ಕೀಯನ ಗರ್ವ ಇಳಿಯಿತು; ಜೆರುಸಲೇಮಿನವರೊಡನೆ ಅವನು ದೀನಮನಸ್ಕನಾದನು. ಈ ಕಾರಣ ಅವನ ಜೀವಮಾನದಲ್ಲಿ ಸರ್ವೇಶ್ವರನ ಕೋಪ ಅವರ ಮೇಲೆ ಬರಲಿಲ್ಲ.


‘ನಾನು ಈ ನಾಡನ್ನೂ ನಿವಾಸಿಗಳನ್ನೂ ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುದನ್ನು ನೀನು ಕೇಳಿದಾಗ, ದುಃಖಪಟ್ಟು ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


“ಅಹಾಬನು ನನ್ನ ಮುಂದೆ ತನ್ನನ್ನೇ ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ಹೀಗೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡಿಸುವುದಿಲ್ಲ. ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಬರಮಾಡುವೆನು,” ಎಂದು ಹೇಳಿದರು.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, "ಹಿಬ್ರಿಯರ ದೇವರಾಗಿರುವ ಸರ್ವೇಶ್ವರನ ಮಾತುಗಳಿವು: ‘ಎಲ್ಲಿಯವರೆಗೆ ನೀನು ನನಗೆ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸ ಹೋಗಲು ನನ್ನ ಜನರಿಗೆ ಅಪ್ಪಣೆ ಕೊಡು.


ಆದರೂ ತಾವಾಗಲಿ ತಮ್ಮ ಪರಿವಾರದವರಾಗಲಿ ದೇವರಾದ ಸರ್ವೇಶ್ವರನಿಗೆ ಭಯಪಡುವುದಿಲ್ಲವೆಂದು ಬಲ್ಲೆನು,” ಎಂದನು.


ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯೋ?


ಪಾಲಿಸಲಿಲ್ಲ ಅವರು ದೇವರ ನಿಬಂಧನೆಯನು I ಅನುಸರಿಸಲಿಲ್ಲ ಆತನ ಧರ್ಮಶಾಸ್ತ್ರವನು II


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಅವರಿಗೆ ಲಜ್ಜೆಯ ಗಂಧವೂ ಇಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದರು.


“ಅವರಿಗೆ ನೀನು ಹೇಳಬೇಕಾದುದು ಇದು: ‘ಸರ್ವೇಶ್ವರ ಹೀಗೆನ್ನುತ್ತಾರೆ - ನೀವು ನನಗೆ ಕಿವಿಗೊಡದೆ ಹೋದರೆ, ನಾನು ನಿಮ್ಮ ಮುಂದಿಟ್ಟಿರುವ ಧರ್ಮಶಾಸ್ತ್ರದ ಪ್ರಕಾರ ನಡೆಯದೆಹೋದರೆ,


ಅವರು ಈ ನಾಡನ್ನು ಸೇರಿದರು, ಅದನ್ನು ಅನುಭವಿಸಿದರು. ಆದರೆ ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ಧರ್ಮಶಾಸ್ತ್ರದ ಅನುಸಾರ ನಡೆಯಲಿಲ್ಲ. ನೀವು ಆಜ್ಞಾಪಿಸಿದವುಗಳಲ್ಲಿ ಒಂದನ್ನೂ ಮಾಡಲಿಲ್ಲ. ಆದಕಾರಣ ನೀವು ಈ ಕೇಡನ್ನೆಲ್ಲ ಅವರ ಮೇಲೆ ಬರಮಾಡಿದ್ದೀರಿ.


ನೀವು ಸರ್ವೇಶ್ವರ ಸ್ವಾಮಿಯ ಮಾತನ್ನು ಕೇಳದೆ, ಅವರ ಧರ್ಮಶಾಸ್ತ್ರವನ್ನೂ ನಿಬಂಧನೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸದೆ, ಪಾಪಮಾಡಿ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದರಿಂದಲೇ ಇಂಥಾ ವಿಪತ್ತು ನಿಮಗೆ ಸಂಭವಿಸಿದೆ.”


ಕೊಟ್ಟವರಾರು ಯಕೋಬನ್ನು ಸುಲಿಗೆಗೆ, ಇಸ್ರಯೇಲನ್ನು ಕೊಳ್ಳೆಗೆ? ಯಾವ ಸರ್ವೇಶ್ವರನಿಗೆ ದ್ರೋಹಮಾಡಿದ್ದೇವೋ ಆತನೇ ಅಲ್ಲವೇ? ಜನರು ಆತನ ಮಾರ್ಗದಲ್ಲಿ ನಡೆಯದೇ, ಆತನ ಉಪದೇಶವನ್ನು ಕೇಳದೆಹೋದರಲ್ಲವೆ?


ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು