ಯೆರೆಮೀಯ 44:16 - ಕನ್ನಡ ಸತ್ಯವೇದವು C.L. Bible (BSI)16 “ಸರ್ವೇಶ್ವರನ ಹೆಸರಿನಲ್ಲಿ ನೀನು ನಮಗೆ ನುಡಿದ ಮಾತನ್ನು ನಾವು ಕೇಳಲೊಲ್ಲೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತುಗಳನ್ನು ಕೇಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತನ್ನು ಕೇಳಲೊಲ್ಲೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ನೀನು ನಮಗೆ ತಿಳಿಸಿದ ಯೆಹೋವನ ಸಂದೇಶವನ್ನು ಕೇಳಿಸಿಕೊಳ್ಳುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಯೆಹೋವ ದೇವರ ಹೆಸರಿನಿಂದ ನೀನು ನಮಗೆ ನುಡಿದ ಮಾತನ್ನು ಕೇಳಲೊಲ್ಲೆವು. ಅಧ್ಯಾಯವನ್ನು ನೋಡಿ |
ಇದಲ್ಲದೆ ಯೆರೆಮೀಯನು ಆ ಎಲ್ಲ ಜನರಿಗೆ ಮುಖ್ಯವಾಗಿ ಮಹಿಳೆಯರಿಗೆ, ಹೀಗೆ ಹೇಳಿದನು: “ಈಜಿಪ್ಟಿನಲ್ಲಿರುವ ಯೆಹೂದ್ಯರೇ, ನಿಮ್ಮೆಲ್ಲರಿಗೆ ಸರ್ವೇಶ್ವರ ಹೀಗೆನ್ನುತ್ತಾರೆ - ‘ಗಗನದೊಡತಿಗೆ ಧೂಪಾರತಿ ಎತ್ತಿ ಪಾನನೈವೇದ್ಯವನ್ನು ಸುರಿಯುತ್ತೇವೆ. ಅದಕ್ಕಾಗಿ ಮಾಡಿಕೊಂಡ ಹರಕೆಯನ್ನು ಖಂಡಿತವಾಗಿ ತೀರಿಸುತ್ತೇವೆ ಎಂಬುದಾಗಿ ನೀವೂ ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿದ್ದೀರಿ, ಕೈಯಿಂದ ನೆರವೇರಿಸಿದ್ದೀರಿ! ಸರಿಸರಿ, ನಿಮ್ಮ ಹರಕೆಗಳನ್ನು ತೀರಿಸಿರಿ, ಅವುಗಳನ್ನು ಬಿಡದೆ ನೆರವೇರಿಸಿರಿ!