Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:18 - ಕನ್ನಡ ಸತ್ಯವೇದವು C.L. Bible (BSI)

18 ಆ ಗಗನದೊಡತಿಗೆ ಧೂಪಾರತಿ ಎತ್ತುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ತರಹದ ಕೊರತೆಗೆ ಗುರಿಯಾಗುತ್ತಿದ್ದೇವೆ, ಖಡ್ಗ-ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ನಾವು ಗಗನದ ಒಡತಿಗೆ ಧೂಪಹಾಕುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ಕೊರತೆಗೂ ಗುರಿಯಾಗಿ ಖಡ್ಗ, ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ನಾವು ಗಗನದ ಒಡತಿಗೆ ಧೂಪಹಾಕುವದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ಕೊರತೆಗೂ ಗುರಿಯಾಗಿ ಖಡ್ಗಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಮೇಲೆ ನಾವು ಸ್ವರ್ಗದ ರಾಣಿಗೆ ನೈವೇದ್ಯ ಅರ್ಪಿಸುವದನ್ನು ಮತ್ತು ಪಾನನೈವೇದ್ಯವನ್ನು ನಿಲ್ಲಿಸಿದೆವು. ಅವಳನ್ನು ಪೂಜಿಸದೆ ಹಾಗೆಲ್ಲ ಮಾಡುವದನ್ನು ನಿಲ್ಲಿಸಿದಂದಿನಿಂದ ನಮಗೆ ಸಮಸ್ಯೆಗಳುಂಟಾದವು. ನಮ್ಮ ಜನರು ಖಡ್ಗ ಮತ್ತು ಹಸಿವುಗಳಿಗೆ ಬಲಿಯಾದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ನಾವು ಗಗನದ ಒಡತಿಗೆ ಧೂಪ ಸುಡುವುದನ್ನೂ, ಪಾನಾರ್ಪಣೆಗಳನ್ನೂ ಅವಳಿಗೆ ಹೊಯ್ಯುವುದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು. ಖಡ್ಗದಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:18
8 ತಿಳಿವುಗಳ ಹೋಲಿಕೆ  

ತಾವು ಹೊರದೂಡಲ್ಪಟ್ಟು ವಾಸಮಾಡುತ್ತಿದ್ದ ಎಲ್ಲಾ ಊರುಗಳಿಂದ ಜುದೇಯಕ್ಕೆ ಹಿಂದಿರುಗಿದರು. ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ಸೇರಿಕೊಂಡರು. ದ್ರಾಕ್ಷಾರಸವನ್ನೂ ಹಣ್ಣುಹಂಪಲುಗಳನ್ನೂ ಹೇರಳವಾಗಿ ಕೂಡಿಸಿಕೊಂಡರು.


ಹೇಗೆಂದರೆ, ‘ಸಿರಿಯಾ ರಾಜರ ದೇವತೆಗಳು ಅವರಿಗೆ ಜಯವನ್ನನುಗ್ರಹಿಸಿವೆ; ಅಂತೆಯೇ ನಾನೂ ಅವುಗಳಿಗೆ ಬಲಿಸಮರ್ಪಿಸಿದರೆ ನನಗೂ ಜಯವಾಗುವುದು’, ಎಂದುಕೊಂಡನು; ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಬಲಿಕೊಟ್ಟನು. ಆದರೆ ಆ ದೇವತೆಗಳಿಂದ ಅವನಿಗೂ ಎಲ್ಲ ಇಸ್ರಯೇಲರಿಗೂ ಕೇಡು ಉಂಟಾಯಿತು.


ಜೆರುಸಲೇಮಿನ ಮನೆಗಳೂ ಜುದೇಯದ ಅರಸರ ಮನೆಗಳೂ, ಅಂದರೆ ಯಾವ ಯಾವ ಮನೆಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಾರತಿ ಎತ್ತಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲ ಹೊಲಸಾಗಿ ತೋಫೆತ್ ಸ್ಥಳಕ್ಕೆ ಸಮಾನವಾಗುವುವು.”


ಅವರ ತಾಯಿ ವೇಶ್ಯೆಯಾಗಿದ್ದಾಳೆ. ಲಜ್ಜೆಗೆಟ್ಟ ಹೆಂಗಸಾಗಿ ವರ್ತಿಸಿದ್ದಾಳೆ. ‘ನನಗೆ ಅನ್ನಪಾನ, ಉಣ್ಣೆ ಉಡಿಗೆ, ಎಣ್ಣೆತೈಲ, ಪಾಯಸಪಾನಕಗಳನ್ನು ಕೊಡುವಂಥ ನಲ್ಲರ ಹಿಂದೆ ಹೋಗುವೆನು’ ಎಂದುಕೊಂಡಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು