Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:2 - ಕನ್ನಡ ಸತ್ಯವೇದವು C.L. Bible (BSI)

2 “ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: ‘ನಾನು ಜೆರುಸಲೇಮಿಗು ಹಾಗುಜುದೇಯದ ಎಲ್ಲ ಊರುಗಳಿಗು ಬರಮಾಡಿದ ಕೇಡನ್ನು ನೀವೇ ನೋಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಇಸ್ರಾಯೇಲಿನ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ಯೆರೂಸಲೇಮಿಗೂ, ಯೆಹೂದದ ಎಲ್ಲಾ ಊರುಗಳಿಗೂ ಬರಮಾಡಿದ ಕೇಡನ್ನು ನೀವು ನೋಡಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ಯೆರೂಸಲೇವಿುಗೂ ಯೆಹೂದದ ಎಲ್ಲಾ ಊರುಗಳಿಗೂ ಬರಮಾಡಿದ ಕೇಡನ್ನು ನೀವು ನೋಡಿದ್ದೀರಷ್ಟೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುತ್ತಾನೆ, “ನಾನು ಜೆರುಸಲೇಮ್ ನಗರಕ್ಕೂ ಮತ್ತು ಯೆಹೂದದ ಎಲ್ಲಾ ಪಟ್ಟಣಗಳಿಗೂ ತಂದ ಭಯಂಕರವಾದ ಕೇಡನ್ನು ನೀವು ನೋಡಿದ್ದೀರಿ. ಆ ಪಟ್ಟಣಗಳು ಇಂದು ಕೇವಲ ಕಲ್ಲಿನ ಗುಡ್ಡೆಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯೆರೂಸಲೇಮಿನ ಮೇಲೆಯೂ, ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ಕಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:2
25 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ನನ್ನ ಗುರಿಯನ್ನು ಗಮನಿಸಿರಿ - ನಾನು ಅಪ್ಪಣೆಕೊಟ್ಟು, ಶತ್ರುಗಳು ಈ ನಗರಕ್ಕೆ ಮತ್ತೆ ಬರುವಂತೆ ಮಾಡುವೆನು. ಅವರು ಇದರ ವಿರುದ್ಧ ಯುದ್ಧಮಾಡಿ, ಇದನ್ನು ಆಕ್ರಮಿಸಿಕೊಂಡು, ಬೆಂಕಿಯಿಂದ ಸುಟ್ಟುಹಾಕುವರು. ನಾನು ಜುದೇಯದ ನಗರಗಳನ್ನು ನಿರ್ಜನವಾದ ಪಾಳುಭೂಮಿಯನ್ನಾಗಿಸುವೆನು.


ಸರ್ವೇಶ್ವರ : “ಹಾಳು ದಿಬ್ಬಗಳನ್ನಾಗಿಸುವೆನು ಜೆರುಸಲೇಮನ್ನು ನರಿಗಳ ಹಕ್ಕೆಯನ್ನಾಗಿಸುವೆನು ಜುದೇಯ ಪಟ್ಟಣಗಳನ್ನು ಜನರಿಲ್ಲದ ಬೀಳುಭೂಮಿಯನ್ನಾಗಿಸುವೆನು ಅವುಗಳನ್ನು.”


ಅದಕ್ಕೆ ನಾನು: “ಸ್ವಾಮಿ, ಈ ಪರಿಸ್ಥಿತಿ ಎಷ್ಟರ ತನಕ?” ಎಂದು ಕೇಳಿದೆನು. ಅದಕ್ಕೆ ಪ್ರತ್ಯುತ್ತರವಾಗಿ :


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ಗುಹೆಬಿಟ್ಟು ಹೊರಟುಬರುವ ಸಿಂಹದಂತೆ ರಾಷ್ಟ್ರಗಳ ವಿನಾಶಕನೊಬ್ಬನು ಎದ್ದಿದ್ದಾನೆ; ಹೊರಟು ಬರುತ್ತಿದ್ದಾನೆ. ಅವನು ಜುದೇಯ ನಾಡನ್ನು ಹಾಳುಮಾಡುವನು. ಅದರ ಪಟ್ಟಣಗಳು ನಿರ್ಜನ ಪ್ರದೇಶಗಳಾಗುವುವು.


ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”


ಸಿಯೋನ್ ಶ್ರೀ ಪರ್ವತ ಹಾಳಾಯಿತು ಅದು ಅಲೆದಾಡುವ ನರಿಗಳ ಬೀಡಾಯಿತು.


“ಗೋಳಾಡುತ್ತಿರುವೆನು ಈ ವಿಪತ್ತುಗಳಿಂದ; ಸಂತೈಸಿ ಸುಧಾರಿಸುವವನು ಬಲುದೂರವಿರುವುದರಿಂದ ಹರಿಯುತ್ತಿದೆ ಕಂಬನಿ ಧಾರೆಧಾರೆಯಾಗಿ ಕಣ್ಗಳಿಂದ; ವೈರಿಗಳು ಗೆದ್ದು, ನನ್ನ ಕುವರರು ಬಿದ್ದುಹೋಗಿರುವುದರಿಂದ.


ಅಯ್ಯೋ, ಅಂದು ಜನಭರಿತವಾಗಿದ್ದ ನಗರಿ ಇಂದು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ ! ರಾಷ್ಟ್ರಗಳಲ್ಲೆಲ್ಲಾ ಅತಿ ಶ್ರೇಷ್ಠಳಾಗಿದ್ದವಳು ವಿಧವೆ ಆಗಿಬಿಟ್ಟಳಲ್ಲಾ ! ಪ್ರಾಂತ್ಯಗಳಲ್ಲೆಲ್ಲಾ ಬಹಳ ಪ್ರವೀಣಳಾಗಿದ್ದವಳು ದಾಸಿಯಂತೆ ಆಗಿಬಿಟ್ಟಿರುವಳಲ್ಲಾ !


ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.


ಈ ನಾಡೆಲ್ಲ ಹಾಳಾಗಿ ಇದನ್ನು ನೋಡುವವರು ನಿಬ್ಬೆರಗಾಗುವರು. ಇದರ ಜನರು ಎಪ್ಪತ್ತು ವರ್ಷ ಕಾಲ ಬಾಬಿಲೋನಿನ ಅರಸನಿಗೆ ಗುಲಾಮರಾಗಿ ಇರುವರು.


ಜುದೇಯದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಹರ್ಷಾಡಂಬರಗಳು ಕೇಳಿಬರುವುದಿಲ್ಲ. ವಧೂವರರ ಸೊಲ್ಲನ್ನು ನಿಲ್ಲಿಸಿಬಿಡುವೆನು, ನಾಡಿಗೆ ನಾಡೇ ಹಾಳಾಗುವುದು. ಇದು ಸರ್ವೇಶ್ವರನಾದ ನನ್ನ ನುಡಿ.”


ಪಾಳುಬಿದ್ದಿದೆ ನಗರ, ಮುರಿದು ಬಿದ್ದಿದೆ ಪುರದ್ವಾರ.


ನೂಲು, ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರಿಯವನ್ನೂ ಅಹಾಬನ ಮನೆಯನ್ನೂ ನೆಲಸಮ ಮಾಡಿಬಿಟ್ಟೆನಲ್ಲವೆ? ಜೆರುಸಲೇಮನ್ನೂ ಅವುಗಳಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಉಜ್ಜಿ ತಲೆ ಕೆಳಗಾಗಿ ಇಡುವಂತೆ ನಾನು ಜೆರುಸಲೇಮನ್ನು ಉಜ್ಜಿ ತಲೆ ಕೆಳಗಾಗಿ ಮಾಡುವೆನು.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪರವಾಗಿದ್ದು, ಈ ಜನಾಂಗಗಳಿಗೆ ಮಾಡಿದ್ದೆಲ್ಲವನ್ನು ನೀವು ಕಣ್ಣಾರೆ ನೋಡಿದ್ದೀರಿ. ಹೌದು, ನಿಮ್ಮ ಪರವಾಗಿ ಯುದ್ಧಮಾಡಿದಾತ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ.


ಮೋಶೆ ಇಸ್ರಯೇಲರೆಲ್ಲರನ್ನು ಕರೆದು ಹೀಗೆಂದನು, “ಸರ್ವೇಶ್ವರ ಈಜಿಪ್ಟ್ ದೇಶದಲ್ಲಿ ನಿಮ್ಮ ಕಣ್ಣಮುಂದೆ ಫರೋಹನಿಗೂ ಅವನ ಪರಿವಾರದವರಿಗೂ


ಆದರೆ ಅವರು ಬಿಟ್ಟುಹೋದ ಸ್ವಂತ ನಾಡು ಮೊಟ್ಟಮೊದಲು ನಿರ್ಜನವಾಗಬೇಕು; ಅದು ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಅನುಭವಿಸಬೇಕು; ಅವರು ಸರ್ವೇಶ್ವರನ ಆಜ್ಞೆ ಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣ ತಮ್ಮ ಪಾಪದ ಫಲವನ್ನು ಸವಿಯಬೇಕು.


'ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದ್ದೀರಿ. ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತು ಈ ನನ್ನ ಸ್ಥಳಕ್ಕೆ ಸೇರಿಸಿದ್ದೇನೆ. ಇದೆಲ್ಲಾ ನಿಮಗೆ ಗೊತ್ತಿದೆ.


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು; ನಿಮ್ಮ ದೇವಸ್ಥಾನಗಳನ್ನು ನೆಲಸಮ ಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿಯೂ ನೋಡುವುದಿಲ್ಲ.


ನೀವು ಸರ್ವೇಶ್ವರ ಸ್ವಾಮಿಯ ಮಾತನ್ನು ಕೇಳದೆ, ಅವರ ಧರ್ಮಶಾಸ್ತ್ರವನ್ನೂ ನಿಬಂಧನೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸದೆ, ಪಾಪಮಾಡಿ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದರಿಂದಲೇ ಇಂಥಾ ವಿಪತ್ತು ನಿಮಗೆ ಸಂಭವಿಸಿದೆ.”


ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿದ್ದಾರೆ. ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಖಂಡಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾರೆ. ಜೆರುಸಲೇಮಿಗೆ ಆದಂಥ ಕೇಡು ವಿಶ್ವದಲ್ಲಿ ಎಂದೂ ಆಗಲಿಲ್ಲ.


ಈ ಕೆಟ್ಟ ವಂಶದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು. ಇದು ಸರ್ವೇಶ್ವರನಾದ ನನ್ನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು