Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:20 - ಕನ್ನಡ ಸತ್ಯವೇದವು C.L. Bible (BSI)

20 ಆಗ ಯೆರೆಮೀಯನು ಆ ಗಂಡಸರಿಗೆ, ಮಹಿಳೆಯರಿಗೆ ಹಾಗು ತನಗೆ ಉತ್ತರಕೊಟ್ಟ ಎಲ್ಲ ಜನರಿಗೆ ಹೀಗೆಂದು ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಯೆರೆಮೀಯನು ಗಂಡಸರಿಗೂ, ಹೆಂಗಸರಿಗೂ ಅಂತು ತನಗೆ ಆ ಉತ್ತರಕೊಟ್ಟ ಎಲ್ಲಾ ಜನರಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಯೆರೆಮೀಯನು ಗಂಡಸರಿಗೂ ಹೆಂಗಸರಿಗೂ ಅಂತು ತನಗೆ ಆ ಉತ್ತರಕೊಟ್ಟ ಎಲ್ಲಾ ಜನರಿಗೂ ಹೀಗೆ ಹೇಳಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ಯೆರೆಮೀಯನು ತನಗೆ ಉತ್ತರ ಕೊಟ್ಟ ಆ ಎಲ್ಲಾ ಸ್ತ್ರೀಪುರುಷರೊಂದಿಗೆ ಮಾತನಾಡಿ ಹೀಗೆ ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಯೆರೆಮೀಯನು ಜನರೆಲ್ಲರಿಗೂ, ಗಂಡಸರಿಗೂ, ಹೆಂಗಸರಿಗೂ, ತನಗೆ ಉತ್ತರ ಕೊಟ್ಟಿದ್ದ ಜನರೆಲ್ಲರಿಗೂ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:20
6 ತಿಳಿವುಗಳ ಹೋಲಿಕೆ  

ಮಹಿಳೆಯರು, “ಗಗನದೊಡತಿಗೆ ಧೂಪಾರತಿ ಎತ್ತಿ, ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರದಂಥ ಹೋಳಿಗೆಗಳನ್ನು ಮಾಡಿ ಪಾನದ್ರವ್ಶವನ್ನು ಅರ್ಪಿಸುತ್ತಿದ್ದುದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಿರಲಿಲ್ಲವೆ?” ಎಂದರು.


ನೀವು, ನಿಮ್ಮ ಪೂರ್ವಜರು, ನಿಮ್ಮ ಅರಸರು, ಅಧಿಕಾರಿಗಳು, ಜನಸಾಮಾನ್ಯರು ಮತ್ತು ನೀವೆಲ್ಲರು ಜುದೇಯದ ಊರುಗಳಲ್ಲೂ ಜೆರುಸಲೇಮಿನ ಬೀದಿಗಳಲ್ಲೂ ಎತ್ತಿದ ಧೂಪಾರತಿ ಸರ್ವೇಶ್ವರನ ನೆನಪಿನಲ್ಲಿ ಇದೆ ಅಲ್ಲವೆ? ಅದನ್ನು ಅವರು ಮರೆತುಬಿಟ್ಟಿದ್ದಾರೆಯೇ?


ಹೇಗೆಂದರೆ, ‘ಸಿರಿಯಾ ರಾಜರ ದೇವತೆಗಳು ಅವರಿಗೆ ಜಯವನ್ನನುಗ್ರಹಿಸಿವೆ; ಅಂತೆಯೇ ನಾನೂ ಅವುಗಳಿಗೆ ಬಲಿಸಮರ್ಪಿಸಿದರೆ ನನಗೂ ಜಯವಾಗುವುದು’, ಎಂದುಕೊಂಡನು; ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಬಲಿಕೊಟ್ಟನು. ಆದರೆ ಆ ದೇವತೆಗಳಿಂದ ಅವನಿಗೂ ಎಲ್ಲ ಇಸ್ರಯೇಲರಿಗೂ ಕೇಡು ಉಂಟಾಯಿತು.


ಅವರು ನನಗೆ ಹೀಗೆ ಹೇಳಿದರು, “ನರಪುತ್ರನೇ, ನನಗೆ ವಿಮುಖರಾಗಿ ದ್ರೋಹಮಾಡಿದ ಜನಾಂಗದವರಾದ ಇಸ್ರಯೇಲರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನ್ನನ್ನು ಪ್ರತಿಭಟಿಸುತ್ತಲೇ ಬಂದಿದ್ದಾರೆ.


ಅವರು ಕೇಳಲಿ ಅಥವಾ ಬಿಡಲಿ ನೀನು ನನ್ನ ವಾಕ್ಯವನ್ನು ಅವರಿಗೆ ನುಡಿಯಲೇಬೇಕು. ಅವರು ದ್ರೋಹಿಗಳೇ ಸರಿ.


ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯಫಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು