Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:24 - ಕನ್ನಡ ಸತ್ಯವೇದವು C.L. Bible (BSI)

24-25 ಇದಲ್ಲದೆ ಯೆರೆಮೀಯನು ಆ ಎಲ್ಲ ಜನರಿಗೆ ಮುಖ್ಯವಾಗಿ ಮಹಿಳೆಯರಿಗೆ, ಹೀಗೆ ಹೇಳಿದನು: “ಈಜಿಪ್ಟಿನಲ್ಲಿರುವ ಯೆಹೂದ್ಯರೇ, ನಿಮ್ಮೆಲ್ಲರಿಗೆ ಸರ್ವೇಶ್ವರ ಹೀಗೆನ್ನುತ್ತಾರೆ - ‘ಗಗನದೊಡತಿಗೆ ಧೂಪಾರತಿ ಎತ್ತಿ ಪಾನನೈವೇದ್ಯವನ್ನು ಸುರಿಯುತ್ತೇವೆ. ಅದಕ್ಕಾಗಿ ಮಾಡಿಕೊಂಡ ಹರಕೆಯನ್ನು ಖಂಡಿತವಾಗಿ ತೀರಿಸುತ್ತೇವೆ ಎಂಬುದಾಗಿ ನೀವೂ ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿದ್ದೀರಿ, ಕೈಯಿಂದ ನೆರವೇರಿಸಿದ್ದೀರಿ! ಸರಿಸರಿ, ನಿಮ್ಮ ಹರಕೆಗಳನ್ನು ತೀರಿಸಿರಿ, ಅವುಗಳನ್ನು ಬಿಡದೆ ನೆರವೇರಿಸಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇದಲ್ಲದೆ ಯೆರೆಮೀಯನು ಹೆಂಗಸರಿಗೂ, ಎಲ್ಲಾ ಜನರಿಗೂ ಹೀಗೆ ಹೇಳಿದನು, “ಐಗುಪ್ತದಲ್ಲಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇದಲ್ಲದೆ ಯೆರೆಮೀಯನು ಹೆಂಗಸರಿಗೂ ಎಲ್ಲಾ ಜನರಿಗೂ ಹೀಗೆ ಹೇಳಿದನು - ಐಗುಪ್ತದಲ್ಲಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆಮೇಲೆ ಯೆರೆಮೀಯನು ಆ ಎಲ್ಲಾ ಸ್ತ್ರೀಪುರುಷರೊಂದಿಗೆ ಮಾತನಾಡಿದನು. ಯೆರೆಮೀಯನು ಹೀಗೆ ಹೇಳಿದನು: “ಈಗ ಈಜಿಪ್ಟಿನಲ್ಲಿರುವ ಎಲ್ಲಾ ಯೆಹೂದ್ಯರೇ, ಯೆಹೋವನ ಸಂದೇಶವನ್ನು ಕೇಳಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇದಲ್ಲದೆ, ಯೆರೆಮೀಯನು ಎಲ್ಲಾ ಜನರಿಗೂ, ಎಲ್ಲಾ ಹೆಂಗಸರಿಗೂ, “ಈಜಿಪ್ಟ್ ದೇಶದಲ್ಲಿರುವ ಯೆಹೂದ್ಯರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:24
11 ತಿಳಿವುಗಳ ಹೋಲಿಕೆ  

ಇವರೆಲ್ಲರನ್ನು ಕಾರೇಹನ ಮಗ ಯೋಹಾನಾನನೂ ಸಕಲ ಸೇನಾಪತಿಗಳೂ ಕರೆದುಕೊಂಡು ಈಜಿಪ್ಟಿಗೆ ಹೋಗಿ ತಹಪನೇಸ್ ಎಂಬ ಊರಿಗೆ ಸೇರಿಸಿದರು. ಸರ್ವೇಶ್ವರನ ಮಾತನ್ನು ಅವರು ಕೇಳಲೇ ಇಲ್ಲ.


ಈಜಿಪ್ಟಿನಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರು ಸರ್ವೇಶ್ವರನಾದ ನಾನು ಹೇಳುವ ಮಾತನ್ನು ಕೇಳಿರಿ: ‘ಸರ್ವೇಶ್ವರನಾದ ದೇವರ ಜೀವದಾಣೆ’ ಎಂದು ನನ್ನ ಹೆಸರನ್ನು ಬಾಯಿಂದ ಉಚ್ಚರಿಸಲಿಕ್ಕೆ ಈಜಿಪ್ಟಿನಲ್ಲಿ ಯಾವ ಯೆಹೂದ್ಯನು ಇನ್ನಿರನು ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆ ಇಟ್ಟಿದ್ದೇನೆ.


ಯೆಹೂದ್ಯರಲ್ಲಿ ಅಳಿದು ಉಳಿದವರೇ, ಸರ್ವೇಶ್ವರನ ವಾಕ್ಯವನ್ನು ಈಗ ಕೇಳಿ: ಇಸ್ರಯೇಲಿನ ದೇವರೂ ಸರ್ವೇಶ್ವರರೂ ಆದ ಸರ್ವೇಶ್ವರ ಹೇಳುವುದು ಇದು - ‘ನೀವು ಈಜಿಪ್ಟಿಗೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವುದಾದರೆ,


ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ.


“ಆದ್ದರಿಂದ ಆ ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಗಮನಿಸು: ‘ಇಸ್ರಯೇಲಿಗೆ ವಿರುದ್ಧ ಪ್ರವಾದನೆ ಮಾಡಬೇಡ; ಇಸಾಕನ ಮನೆತನದ ವಿರುದ್ಧ ಮಾತೆತ್ತಬೇಡ; ಎಂದು ನೀನು ಹೇಳುತ್ತೀಯಲ್ಲವೆ?


ಅವರು ಕೇಳಲಿ ಅಥವಾ ಬಿಡಲಿ ನೀನು ನನ್ನ ವಾಕ್ಯವನ್ನು ಅವರಿಗೆ ನುಡಿಯಲೇಬೇಕು. ಅವರು ದ್ರೋಹಿಗಳೇ ಸರಿ.


ಆದಕಾರಣ, ಜೆರುಸಲೇಮಿನ ಜನರನ್ನಾಳುವ ಧರ್ಮನಿಂದಕರೇ, ಸರ್ವೇಶ್ವರ ಸ್ವಾಮಿಯ ಮಾತನ್ನು ಕೇಳಿರಿ.


ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ.


ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳು; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು