ಯೆರೆಮೀಯ 44:27 - ಕನ್ನಡ ಸತ್ಯವೇದವು C.L. Bible (BSI)27 ಇಗೋ, ನಿಮಗೆ ಒಳಿತನ್ನು ಅಲ್ಲ, ಕೇಡನ್ನು ಬರಮಾಡಬೇಕೆಂದು ನಿಮ್ಮ ವಿಷಯದಲ್ಲಿ ಎಚ್ಚರಗೊಂಡಿದ್ದೇನೆ. ಈಜಿಪ್ಟಿನ ಎಲ್ಲ ಯೆಹೂದ್ಯರು ಖಡ್ಗ-ಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗ, ಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನಾನು ಯೆಹೂದದ ಜನರನ್ನು ಗಮನಿಸುತ್ತಿರುವುದು ಅವರನ್ನು ಕಾಪಾಡುವುದಕ್ಕಲ್ಲ. ನಾನು ಅವರನ್ನು ಗಮನಿಸುತ್ತಿರುವುದು ಅವರಿಗೆ ಕೇಡುಮಾಡುವುದಕ್ಕಾಗಿ. ಈಜಿಪ್ಟಿನಲ್ಲಿ ವಾಸಿಸುವ ಯೆಹೂದಿಯರು ಹಸಿವಿನಿಂದ ಸತ್ತುಹೋಗುವರು ಮತ್ತು ಖಡ್ಗಕ್ಕೆ ಬಲಿಯಾಗುವರು. ಅವರು ನಿರ್ನಾಮವಾಗುವವರೆಗೆ ಸಾಯುತ್ತಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನಾನು ಒಳ್ಳೆಯದಕ್ಕಾಗಿ ಅಲ್ಲ; ಕೆಟ್ಟದ್ದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು. ಈಜಿಪ್ಟ್ ದೇಶದಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವವರೆಗೆ ಖಡ್ಗದಿಂದಲೂ ಬರದಿಂದಲೂ ನಾಶವಾಗುವರು. ಅಧ್ಯಾಯವನ್ನು ನೋಡಿ |