ಯೆರೆಮೀಯ 44:3 - ಕನ್ನಡ ಸತ್ಯವೇದವು C.L. Bible (BSI)3 ಅಲ್ಲಿನವರು ತಮಗೂ ನಿಮಗೂ ಮತ್ತು ನಿಮ್ಮ ಪೂರ್ವಜರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ಪೂಜಿಸುವುದಕ್ಕೆ ತವಕಪಟ್ಟರು. ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದರು. ಆದ್ದರಿಂದಲೇ ಆ ಸ್ಥಳಗಳು ಹಾಳಾದವು, ನಿರ್ಜನಪ್ರದೇಶಗಳಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಹಾ, ಅಲ್ಲಿನವರು ತಮಗೂ, ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವುದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದ್ದರಿಂದ ಆ ಸ್ಥಳಗಳು ಹಾಳಾದವು, ಅಲ್ಲಿ ಯಾರೂ ವಾಸಿಸರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಹಾ, ಅಲ್ಲಿನವರು ತಮಗೂ ನಿಮಗೂ ನಿಮ್ಮ ಪಿತೃಗಳಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡಿಸಿದ್ದರಿಂದ ಆ ಸ್ಥಳಗಳು ಹಾಳಾದವು. ಅಲ್ಲಿ ಯಾರೂ ವಾಸಿಸರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅಲ್ಲಿ ವಾಸಿಸುವ ಜನರು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಸ್ಥಳಗಳನ್ನು ನಾಶಮಾಡಲಾಯಿತು. ಆ ಜನರು ಬೇರೆ ದೇವರುಗಳಿಗೆ ಬಲಿಯನ್ನು ಅರ್ಪಿಸಿದ್ದಾರೆ. ಆದ್ದರಿಂದ ನನಗೆ ಕೋಪ ಬಂದಿದೆ. ಹಿಂದೆ ನಿಮ್ಮ ಜನರು ಮತ್ತು ನಿಮ್ಮ ಪೂರ್ವಿಕರು ಆ ದೇವರುಗಳನ್ನು ಪೂಜಿಸಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ನೀವೂ ನಿಮ್ಮ ಪೂರ್ವಜರೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ, ಧೂಪ ಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ. ಅವುಗಳಲ್ಲಿ ವಾಸಮಾಡುವವನು ಯಾರೂ ಇಲ್ಲ. ಅಧ್ಯಾಯವನ್ನು ನೋಡಿ |