Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:7 - ಕನ್ನಡ ಸತ್ಯವೇದವು C.L. Bible (BSI)

7 “ಹೀಗಿರಲು, ಸೇನಾಧೀಶ್ವರ ಸ್ವಾಮಿಯೂ ಇಸ್ರಯೇಲಿನ ದೇವರೂ ಆದ ಸರ್ವೇಶ್ವರ ಈಗ ಹೇಳುವುದನ್ನು ಕೇಳಿ: ‘ಈ ದೊಡ್ಡ ಕೇಡನ್ನು ನಿಮಗೆ ನೀವೆ ಬರಮಾಡಿಕೊಳ್ಳುವುದು ಸರಿಯೆ? ಈ ದುರಾಚಾರದ ನಿಮಿತ್ತ ಜುದೇಯದ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು. ನಿಮ್ಮಲ್ಲಿ ಯಾರೂ ಉಳಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗಿರಲು ಸೇನಾಧೀಶ್ವರಸ್ವಾಮಿಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ, ಈ ದೊಡ್ಡ ಕೇಡನ್ನು ನಿಮಗೆ ನೀವೇ ಉಂಟುಮಾಡಿಕೊಳ್ಳುವುದೇಕೆ? ಈ ದುರಾಚಾರದ ನಿಮಿತ್ತ ಯೆಹೂದದಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗಿರಲು ಸೇನಾಧೀಶ್ವರಸ್ವಾವಿುಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ - ಈ ದೊಡ್ಡ ಕೇಡನ್ನು ನಿಮಗೆ ನೀವೇ ಉಂಟುಮಾಡಿಕೊಳ್ಳುವದೇಕೆ? ಈ ದುರಾಚಾರದ ನಿವಿುತ್ತ ಯೆಹೂದದಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ವಿಗ್ರಹಗಳ ಪೂಜೆಮಾಡಿ ನಿಮ್ಮನ್ನು ನೀವೇ ಏಕೆ ತೊಂದರೆಗೀಡು ಮಾಡಿಕೊಳ್ಳುವಿರಿ? ಈ ದುರಾಚಾರದ ನಿಮಿತ್ತ ನೀವು ಯೆಹೂದ ಕುಟುಂಬದಿಂದ ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು ಮತ್ತು ಕೂಸುಗಳನ್ನು ಅಗಲಿಸುತ್ತಿದ್ದೀರಿ. ಯೆಹೂದ ಕುಲದಿಂದ ಯಾರೂ ಉಳಿಯದಂತೆ ಮಾಡುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಆದ್ದರಿಂದ ಈಗ ಇಸ್ರಾಯೇಲಿನ ದೇವರೂ, ಸರ್ವಶಕ್ತರಾಗಿರುವ ಯೆಹೋವ ದೇವರೂ ಹೇಳುವುದೇನೆಂದರೆ: ಏಕೆ ನಿಮಗೆ ಉಳಿದಿರುವವರನ್ನು ಮಿಗಿಸದ ಹಾಗೆ ನೀವು ಗಂಡಸರನ್ನೂ, ಹೆಂಗಸರನ್ನೂ, ಮಗುವನ್ನೂ, ಮೊಲೆ ಕೂಸನ್ನೂ ಯೆಹೂದದೊಳಗಿಂದ ಕಡಿದುಬಿಟ್ಟು, ನಿಮ್ಮ ಪ್ರಾಣಗಳಿಗೆ ದೊಡ್ಡ ಕೇಡನ್ನು ಮಾಡಿಕೊಳ್ಳುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:7
28 ತಿಳಿವುಗಳ ಹೋಲಿಕೆ  

ನಿನ್ನ ಯೋಜನೆಗಳಿಂದ ನಿನ್ನ ಮನೆತನಕ್ಕೆ ಅಪಕೀರ್ತಿ ತಂದುಕೊಂಡಿರುವೆ. ಹಲವಾರು ನಾಡುಗಳನ್ನು ನಿರ್ಮೂಲಮಾಡಿ ನಿನ್ನ ವಂಶಕ್ಕೆ ವಿನಾಶವನ್ನು ಬರಮಾಡಿಕೊಂಡಿರುವೆ.


ರಥವನ್ನೂ ಸಾರಥಿಯನ್ನೂ ಸ್ತ್ರೀಪುರುಷರನ್ನೂ ಬಾಲವೃದ್ಧರನ್ನೂ.


ಆ ಧೂಪಾರತಿಗಳು ಸರ್ವೇಶ್ವರನ ಸನ್ನಿಧಿಗೆ ತರಲಾದವುಗಳು. ಈ ಕಾರಣ ಪವಿತ್ರವಾದುವು. ಆದುದರಿಂದ ಅವುಗಳನ್ನು ತಗಡುಗಳಾಗಿ ತಟ್ಟಿ ಬಲಿಪೀಠಕ್ಕೆ ಮುಚ್ಚಳವನ್ನಾಗಿ ಮಾಡಿಸು. ಹೀಗೆ ಅವು ಇಸ್ರಯೇಲರಿಗೆ ನೆನಪು ಹುಟ್ಟಿಸುವ ಗುರುತುಗಳಾಗುವುವು,” ಎಂದು ಹೇಳಿದರು.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.


ಕಂಬನಿಗರೆದು ಇಂಗಿಹೋಗಿದೆ ಕಣ್ಣು ಕುದಿಯುತ್ತಿದೆ ನನ್ನೊಳಗೆ ಕರುಳು ! ನನ್ನ ಜನತೆಯೆಂಬ ಯುವತಿ ಹಾಳಾಗಿ ಮಕ್ಕಳು ಹಾದಿಬೀದಿಗಳಲ್ಲಿ ಮೂರ್ಛೆಹೋಗಿ ನನ್ನ ಕರುಳು ಕರಗಿಹೋಗಿದೆ ನೀರಾಗಿ.


ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಆ ಜುದೇಯದ ಅಳಿದುಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಅಲ್ಲಿಂದ ತಪ್ಪಿಸಿಕೊಂಡು ಜುದೇಯಕ್ಕೆ ಹಿಂದಿರುಗಿದರು. ಕೆಲವು ನಿರಾಶ್ರಿತರನ್ನು ಬಿಟ್ಟರೆ ಯಾವನೂ ಹಿಂತಿರುಗುವುದಿಲ್ಲ’.”


ಏಕೆಂದರೆ ಮೃತ್ಯು ನಮ್ಮ ಕಿಟಕಿಗಳನ್ನು ಏರಿಬಂದಿದೆ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿಬಿಟ್ಟಿದೆ ಬೀದಿಗಳಲ್ಲಿ ಮಕ್ಕಳೂ ಕಡಿದುಬಿದ್ದರು ಚೌಕಗಳಲ್ಲಿ ಯುವಕರೂ ಇಲ್ಲವಾದರು.


ಇವರು ಮಾಡುತ್ತಿರುವ ಕೇಡು ನನಗೋ? ಲಜ್ಜೆಯಿಂದ ಮುಖಮುಚ್ಚಿಕೊಳ್ಳುವಷ್ಟು ಕೇಡನ್ನು ತಮಗೆ ತಾವೇ ತಂದುಕೊಳ್ಳುತ್ತಿದ್ದಾರಲ್ಲವೆ?” ಎನ್ನುತ್ತಾರೆ ಸರ್ವೇಶ್ವರ.


ಶಿಸ್ತನ್ನು ನಿರಾಕರಿಸುವವನು ತನ್ನನ್ನೇ ತೃಣೀಕರಿಸುತ್ತಾನೆ; ಬುದ್ಧಿವಾದವನ್ನು ಅಂಗೀಕರಿಸುವವನು ಜ್ಞಾನ ಹೊಂದುತ್ತಾನೆ.


ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು, ಶಿಶುಗಳನ್ನು ಹಾಗು ಎತ್ತು, ಕುರಿ, ಕತ್ತೆ, ಒಂಟೆ ಇವುಗಳನ್ನೂ ಉಳಿಸದೆ ಕೊಂದುಹಾಕು ಎಂದು ಹೇಳುತ್ತಾರೆ ಸೇನಾಧೀಶ್ವರರಾದ ಸರ್ವೇಶ್ವರ,” ಎಂದನು.


ಹೇಗೂ ಪುರುಷರೆಲ್ಲರನ್ನೂ ಮದುವೆಯಾದ ಸ್ತ್ರೀಯರನ್ನೂ ನಿರ್ಮೂಲಮಾಡುವುದು ನಿಮ್ಮ ಕೆಲಸ,” ಎಂದು ಆಜ್ಞಾಪಿಸಿ ಕಳುಹಿಸಿದರು.


ಅಲ್ಲಿದ್ದ ಗಂಡಸರು, ಹೆಂಗಸರು, ಯುವಕರು, ಮುದುಕರು, ದನ ಕುರಿ, ಕತ್ತೆ ಇವುಗಳನ್ನೆಲ್ಲಾ ನಿಶ್ಯೇಷವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು.


ಹೊರಗೆ ಕತ್ತಿ, ಒಳಗೆ ಭಯಭೀತಿ ಇವರಲ್ಲಿರುವುವು. ಯುವಕ ಯುವತಿಯರು, ಮಕ್ಕಳು ಮುದುಕರು ಕತ್ತಿಕಠಾರಿಗಳಿಗೆ ತುತ್ತಾಗುವರು ಇವರೆಲ್ಲರು.


ಪ್ರವಾಸಿಗಳಾಗಿ ನೀವು ಬಂದಿರುವ ಈಜಿಪ್ಟಿನಲ್ಲಿ ಅನ್ಯದೇವತೆಗಳಿಗೆ ಧೂಪಾರತಿ ಎತ್ತುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುತ್ತಿದ್ದೀರಿ. ಆದ್ದರಿಂದ ನೀವೂ ನಿರ್ಮೂಲರಾಗಿ ಎಲ್ಲ ಭೂರಾಜ್ಯಗಳ ಶಾಪ, ನಿಂದೆ, ದೂಷಣೆಗಳಿಗೆ ಗುರಿಯಾಗುವಿರಿ.


ನಿಮ್ಮನ್ನು ನೀವೇ ಮೋಸಮಾಡಿಕೊಳ್ಳುತ್ತಿದ್ದೀರಿ. ನೀವೇ ನನ್ನ ಬಳಿಗೆ ಬಂದು ‘ನಮ್ಮ ದೇವರಾದ ಸರ್ವೇಶ್ವರನನ್ನು ನಮಗಾಗಿ ಪ್ರಾರ್ಥಿಸು. ನಮ್ಮ ದೇವರಾದ ಸರ್ವೇಶ್ವರ ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು. ಅದರಂತೆ ನಾವು ನಡೆಯುತ್ತೇವೆ,’ ಎಂಬುದಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ನೀವೇ ಕಳುಹಿಸಿದಿರಿ.


ಆಗ ಜುದೇಯದ ಅರಸ ಹಿಜ್ಕೀಯನು ಮತ್ತು ಯೆಹೂದ್ಯರೆಲ್ಲರು, “ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಬದಲಿಗೆ ಆ ಅರಸ ಭಯಭಕ್ತಿಯಿಂದ ಸರ್ವೇಶ್ವರನ ದಯೆಯನ್ನು ಬೇಡಿಕೊಂಡ. ಆಗ ಸರ್ವೇಶ್ವರ ವಿಧಿಸಬೇಕೆಂದಿದ್ದ ದಂಡನೆಯನ್ನು ವಿಧಿಸದೆ ಮನಸ್ಸನ್ನು ಬದಲಾಯಿಸಿಕೊಂಡರಲ್ಲವೆ? ಇವನನ್ನು ಕೊಂದುಹಾಕುವುದರಿಂದ ನಾವು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿಕೊಳ್ಳುತ್ತೇವೆ,” ಎಂದರು.


ಆದರೆ ಸರ್ವೇಶ್ವರ ಸ್ವಾಮಿಯೇ ಹೇಳುವಂತೆ ನೀವು ಅವರಿಗೆ ಕಿವಿಗೊಡದೆ ನಿಮ್ಮ ಕೈಕೃತಿಗಳಾದ ವಿಗ್ರಹಗಳಿಂದ ಅವರನ್ನು ಕೆಣಕಿ ನಿಮಗೇ ಕೇಡನ್ನು ತಂದುಕೊಂಡಿದ್ದೀರಿ.


ನನಗೆ ತಪ್ಪುಮಾಡುವವನು ತನ್ನಾತ್ಮಕ್ಕೇ ಕೇಡುಮಾಡುತ್ತಾನೆ ನನ್ನನ್ನು ಹಗೆಮಾಡುವವರೆಲ್ಲರು ಮೃತ್ಯುವನ್ನು ಪ್ರೀತಿಸುತ್ತಾರೆ.


ಇಂಥವರು ಹೊಂಚುಹಾಕುವುದು ಸ್ವಹತ್ಯಕ್ಕೇ, ಬಲೆ ಒಡ್ಡುವುದು ಸ್ವಂತ ಪ್ರಾಣನಾಶಕ್ಕೆ.


ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ ಶಿಶುಬಾಲಕರನ್ನೂ ದನಕುರಿಕತ್ತೆಗಳನ್ನೂ ಕತ್ತಿಯಿಂದ ಸಂಹರಿಸಿದನು.


ನಾವು ಚಿಕ್ಕಂದಿನಿಂದ ನೋಡಿರುವಂತೆ ನಮ್ಮ ಪಿತೃಗಳು ದುಡಿದದ್ದನ್ನೂ ಅವರ ದನಕುರಿಗಳನ್ನೂ ಅವರ ಗಂಡುಹೆಣ್ಣು ಮಕ್ಕಳನ್ನೂ ಬಾಳ್ ದೇವತೆ ಕಬಳಿಸುತ್ತಾ ಬಂದಿದೆ.


ಸುತ್ತಮುತ್ತಲೂ ದಿಗಿಲು ಹುಟ್ಟಿಸುವ ನನ್ನ ಹಗೆಗಳನ್ನೆ ಕರೆಸಿದೆಯಲ್ಲಾ ಹಬ್ಬಕ್ಕೋ ಎಂಬಂತೆ ! ಸರ್ವೇಶ್ವರನ ಪ್ರಕೋಪದ ದಿನದಂದು ತಪ್ಪಿಸಿಕೊಳ್ಳಲಿಲ್ಲ ಯಾರೂ; ಉಳಿಯಲಿಲ್ಲ ಯಾರೂ. ಶತ್ರು ಸಂಹರಿಸಿಬಿಟ್ಟನಲ್ಲಾ ನಾನು ಸಾಕಿ ಆರೈಕೆ ಮಾಡಿದವರನ್ನೂ !


ಬೇರೆ ದೇವರುಗಳನ್ನು ಹಿಂಬಾಲಿಸಿ, ಅವರನ್ನು ಸೇವಿಸಿ ಪೂಜಿಸಬೇಡಿ. ನಿಮ್ಮ ಕೈ ಕೃತಿಗಳಾದ ವಿಗ್ರಹಗಳನ್ನು ಆರಾಧಿಸಿ, ನನ್ನನ್ನು ರೇಗಿಸಬೇಡಿ. ಆಗ ನಾನು ನಿಮಗೆ ಯಾವ ಕೇಡನ್ನೂ ಮಾಡೆನು.’


ಆಗ ಯೆರೆಮೀಯನು, “ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲರ ದೇವರೂ ಆದ ಸ್ವಾಮಿ ಹೀಗೆನ್ನುತ್ತಾರೆ: ತಾವು ಬಾಬಿಲೋನಿಯದ ಅರಸನ ಪದಾಧಿಕಾರಿಗಳ ಮೊರೆಹೊಕ್ಕರೆ ತಮ್ಮ ಪ್ರಾಣ ಉಳಿಯುವುದು. ಈ ನಗರ ಬೆಂಕಿ ಇಂದ ಸುಟ್ಟುಹೋಗದು, ತಾವೂ ತಮ್ಮ ಮನೆಯವರೂ ಮನೆತನದವರೂ ಬದುಕುವಿರಿ.


ವೃದ್ಧ, ಯುವಕ, ಯುವತಿ, ಮಹಿಳೆ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿ,” ಎಂದು ನನಗೆ ಕೇಳಿಸುವಂತೆ ಅಪ್ಪಣೆಮಾಡಿದರು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು