ಯೆರೆಮೀಯ 45:1 - ಕನ್ನಡ ಸತ್ಯವೇದವು C.L. Bible (BSI)1 ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದನು. ಆಗ ಪ್ರವಾದಿ ಯೆರೆಮೀಯನು ಸರ್ವೇಶ್ವರನ ಆಜ್ಞೆಯ ಪ್ರಕಾರ ಈ ವಾಕ್ಯವನ್ನು ಬಾರೂಕನಿಗೆ ನುಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ ಈ ವಾಕ್ಯವನ್ನು ಅವನಿಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋಯಾಕೀಮನು ಯೋಷೀಯನ ಮಗ. ಯೆಹೋಯಾಕೀಮನು ಯೆಹೂದದ ರಾಜನಾದ ನಾಲ್ಕನೇ ವರ್ಷದಲ್ಲಿ ಪ್ರವಾದಿಯಾದ ಯೆರೆಮೀಯನು ನೇರೀಯನ ಮಗನಾದ ಬಾರೂಕನಿಗೆ ಹೀಗೆ ಹೇಳಿದನು. ಬಾರೂಕನು ಅದನ್ನು ಒಂದು ಸುರುಳಿಯ ಮೇಲೆ ಬರೆದನು. ಯೆರೆಮೀಯನು ಬಾರೂಕನಿಗೆ ಹೇಳಿದ್ದು ಹೀಗೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ, ಸುರುಳಿಯಲ್ಲಿ ಬರೆದ ಮೇಲೆ ಪ್ರವಾದಿಯಾದ ಯೆರೆಮೀಯನು ಅವನಿಗೆ ಹೇಳಿದ ವಾಕ್ಯವೇನೆಂದರೆ, ಅಧ್ಯಾಯವನ್ನು ನೋಡಿ |