Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:1 - ಕನ್ನಡ ಸತ್ಯವೇದವು C.L. Bible (BSI)

1 ರಾಷ್ಟ್ರಗಳ ವಿಷಯವಾಗಿ ಸರ್ವೇಶ್ವರ ಸ್ವಾಮಿ ಪ್ರವಾದಿ ಯೆರೆಮೀಯನಿಗೆ ಅನುಗ್ರಹಿಸಿದ ವಾಣಿ ಇದು: ಈಜಿಪ್ಟನ್ನು ಕುರಿತ ವಾಣಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಜನಾಂಗಗಳ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಜನಾಂಗಗಳ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಈ ಸಂದೇಶಗಳು ಪ್ರವಾದಿಯಾದ ಯೆರೆಮೀಯನಿಗೆ ಬಂದವು. ಈ ಸಂದೇಶಗಳು ವಿವಿಧ ಜನಾಂಗಗಳ ಬಗ್ಗೆ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇತರ ಜನಾಂಗಗಳಿಗೆ ವಿರೋಧವಾಗಿ ಪ್ರವಾದಿಯಾದ ಯೆರೆಮೀಯನಿಗೆ ಬಂದ ಯೆಹೋವ ದೇವರ ವಾಕ್ಯವು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:1
13 ತಿಳಿವುಗಳ ಹೋಲಿಕೆ  

ರಾಷ್ಟ್ರಗಳ ಮೇಲೂ ರಾಜ್ಯಗಳ ಮೇಲೂ ಅಧಿಕಾರವುಳ್ಳವನನ್ನಾಗಿ ನಾನು ನಿನ್ನನ್ನು ಈ ದಿನ ನೇಮಿಸಿದ್ದೇನೆ. ಇದರಿಂದಾಗಿ ಕಿತ್ತುಹಾಕುವ ಹಾಗು ಕೆಡುವುವ, ನಾಶಪಡಿಸುವ ಹಾಗು ನೆಲಸಮಮಾಡುವ, ಕಟ್ಟುವ ಹಾಗು ನೆಡುವ ಕಾರ್ಯ ನಿನ್ನದು,” ಎಂದರು


ದೇವರು ಕೇವಲ ಯೆಹೂದ್ಯರಿಗೆ ಮಾತ್ರ ದೇವರೋ ಅಥವಾ ಇತರರಿಗೂ ದೇವರೋ? ಹೌದು, ಇತರರಿಗೂ ದೇವರೇ.


ತಮ್ಮ ಮಹಿಮೆಯನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನು ಸೂರೆಮಾಡಿದ ರಾಷ್ಟ್ರಗಳಿಗೆ ಕೊಡುವ ಎಚ್ಚರಿಕೆ ಇದು:


ಗುಹೆಬಿಟ್ಟು ಹೊರಟುಬರುವ ಸಿಂಹದಂತೆ ರಾಷ್ಟ್ರಗಳ ವಿನಾಶಕನೊಬ್ಬನು ಎದ್ದಿದ್ದಾನೆ; ಹೊರಟು ಬರುತ್ತಿದ್ದಾನೆ. ಅವನು ಜುದೇಯ ನಾಡನ್ನು ಹಾಳುಮಾಡುವನು. ಅದರ ಪಟ್ಟಣಗಳು ನಿರ್ಜನ ಪ್ರದೇಶಗಳಾಗುವುವು.


ನಾನವರನ್ನು ಕಂಡೆ ಬೆಟ್ಟದ ಶಿಖರದಿಂದ ನೋಡಿದೆನವರನ್ನು ಗುಡ್ಡದೆತ್ತರದಿಂದ,


ದೇಶ - ಭಾಷಾ - ಕುಲ - ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.


ಅವನು ಬಂದು ಈಜಿಪ್ಟ್ ದೇಶದ ಮೇಲೆ ಧಾಳಿಮಾಡುವನು. ಮರಣಕ್ಕೆ ಗೊತ್ತಾದವರು ಮರಣಕ್ಕೆ, ಸೆರೆಮನೆಗೆ ಗೊತ್ತಾದವರು ಸೆರೆಮನೆಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಗುರಿಯಾಗುವರು.


ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:


ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸಿದರು -


ಹನ್ನೊಂದನೆಯ ವರ್ಷದ ಮೂರನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು:


ಹನ್ನೆರಡನೆಯ ವರ್ಷದ ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು:


ಹೀಗೆ ಅವರು ನಿರಂತರವಾಗಿ ತಮ್ಮ ಬಲೆಯಿಂದ ಭಾಗ್ಯವನ್ನು ಪಡೆದುಕೊಳ್ಳುತ್ತಿರಬೇಕೋ? ದಯದಾಕ್ಷಿಣ್ಯವಿಲ್ಲದೆ ರಾಷ್ಟ್ರಗಳನ್ನು ನಾಶಮಾಡುತ್ತಿರಬೇಕೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು