Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:11 - ಕನ್ನಡ ಸತ್ಯವೇದವು C.L. Bible (BSI)

11 ಈಜಿಪ್ಟಿನ ಕನ್ಯೆಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಕೊಂಡು ಬಾ ನಿನ್ನ ಬಗೆಬಗೆಯ ಮದ್ದುಗಳಿಂದ ಪ್ರಯೋಜನವಿಲ್ಲ ಅವುಗಳಿಂದ ನಿನಗೆ ಗುಣವಾಗುವಂತಿಲ್ಲ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಐಗುಪ್ತದ ಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; ನೀನು ಬಗೆಬಗೆಯ ಔಷಧವನ್ನು ಉಪಯೋಗಿಸುವುದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಐಗುಪ್ತಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; ನೀನು ಬಗೆಬಗೆಯ ಮದ್ದನ್ನು ಉಪಯೋಗಿಸುವದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಈಜಿಪ್ಟೇ, ಗಿಲ್ಯಾದಿಗೆ ಹೋಗಿ ಔಷಧಿಯನ್ನು ತೆಗೆದುಕೊಂಡು ಬಾ. ನೀನು ಬಗೆಬಗೆಯ ಔಷಧಿಗಳನ್ನು ಉಪಯೋಗಿಸಬಹುದು. ಆದರೆ ಅದರಿಂದ ಪ್ರಯೋಜನವಿಲ್ಲ. ನೀನು ಗುಣಹೊಂದುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಈಜಿಪ್ಟಿನ ಮಗಳಾದ ಕನ್ನಿಕೆಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತೆಗೆದುಕೋ. ನೀನು ಬಹಳ ಔಷಧವನ್ನು ತೆಗೆದುಕೊಳ್ಳುವುದು ವ್ಯರ್ಥವಾಗಿದೆ. ಏಕೆಂದರೆ ನಿನಗೆ ಗುಣವಾಗುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:11
15 ತಿಳಿವುಗಳ ಹೋಲಿಕೆ  

ಗಿಲ್ಯಾದಿನಲ್ಲಿ ಔಷಧವಿಲ್ಲವೆ? ಅಲ್ಲಿ ವೈದ್ಯನು ಸಿಕ್ಕನೆ? ಮತ್ತೇಕೆ ಗುಣವಾಗಲಿಲ್ಲ ನನ್ನ ಜನತೆಗೆ?


ಸಮಾರ್ಯಕ್ಕೆ ಬಿದ್ದ ಪೆಟ್ಟು ಗಡುಸಾದುದು. ಅದು ಜುದೇಯಕ್ಕೂ ತಾಕಿದೆ. ಅದು ನನ್ನ ಊರಾದ ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ,” ಎಂದನು.


“ಕೆಳಕ್ಕಿಳಿದು ಬಾ, ಯುವತಿಯೇ ಧೂಳಲ್ಲಿ ಕುಳಿತುಕೋ, ಬಾಬೆಲೆ ! ಕುವರಿಯೇ, ಕುಕ್ಕರಿಸು ನೆಲದಲಿ ಸಿಂಹಾಸನವಿಲ್ಲ ಇಲ್ಲಿ. ಎಲೈ, ಕಸ್ದೀಯರ ನಗರಿಯೇ, ನೀನಲ್ಲ ಇನ್ನು ಕೋಮಲೆ,, ಸುಕುಮಾರಿ ಎಂದು ಎನಿಸಿಕೊಳ್ಳೆ.


ನಿನ್ನ ಗಾಯಕ್ಕೆ ಮದ್ದಿಲ್ಲ. ನಿನಗೆ ಬಿದ್ದಿರುವ ಪೆಟ್ಟು ಪ್ರಾಣನಾಶಕ. ನಿನ್ನ ವಿನಾಶದ ಸಮಾಚಾರವನ್ನು ಕೇಳುವವರೆಲ್ಲ ಚಪ್ಪಾಳೆ ಹಾಕುತ್ತಾರೆ. ಏಕೆಂದರೆ ನೀನು ಮಾಡಿರುವ ಕೇಡಿಗೆ ಕೊನೆಯಿಲ್ಲ. ಅದರಿಂದ ತಪ್ಪಿಸಿಕೊಂಡವರು ಯಾರೂ ಇಲ್ಲ.”


“ನೀನು ನಿನ್ನ ದುಃಖವನ್ನು ಅವರಿಗೆ ಹೀಗೆಂದು ವ್ಯಕ್ತಪಡಿಸು - ‘ರಾತ್ರಿಹಗಲು ನನ್ನ ಕಣ್ಣೀರು ಸುರಿಯಲಿ ನಿರಂತರವಾಗಿ ಏಕೆಂದರೆ ನನ್ನ ಜನವೆಂಬ ಯುವತಿ ಗಾಯಗೊಂಡಿದ್ದಾಳೆ ತೀವ್ರವಾಗಿ, ಹೌದು, ಅವಳಿಗೆ ಪೆಟ್ಟುಬಿದ್ದಿದೆ ಗಡುಸಾಗಿ.


ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಬಿಡಿಕಾಸನ್ನೂ ಬಿಡದೆ ಎಲ್ಲವನ್ನೂ ತೆರಬೇಕಾಗುವುದು. ಇದನ್ನು ನೆನಪಿನಲ್ಲಿಡು.”


ಯೆಹೂದ್ಯರೂ, ಇಸ್ರಯೇಲ್ ನಾಡಿನವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ, ಗೋಧಿ, ‘ಪನ್ನಗ್’, ಜೇನು, ಎಣ್ಣೆ, ಸುಗಂಧತೈಲ, ಈ ಸಾಮಗ್ರಿಗಳನ್ನು ನಿನಗೆ ಸೇರಿಸುತ್ತಿದ್ದರು.


ಬಾಬಿಲೋನ್ ತಟ್ಟನೆ ಬಿದ್ದು ಹಾಳಾಯಿತು. ಅದಕ್ಕಾಗಿ ಗೋಳಾಡಿ. ಅದರ ನೋವನ್ನು ನೀಗಿಸಲು ಔಷಧವನ್ನು ತನ್ನಿ. ಒಂದು ವೇಳೆ ಅದು ಗುಣವಾದೀತು!


ಇಷ್ಟಾದ ಮೇಲೆ ಅವರ ತಂದೆ ಯಕೋಬನು, “ನೀವು ಹೋಗಲೇಬೇಕಾದರೆ, ಒಂದು ಕೆಲಸಮಾಡಿ; ಈ ನಾಡಿನಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಹಾಕಿಕೊಂಡು ಹೋಗಿ, ಆ ಮನುಷ್ಯನಿಗೆ ಕಾಣಿಕೆಯಾಗಿ ಕೊಡಿ.


ತರುವಾಯ ಅವರು ಊಟಕ್ಕೆ ಕುಳಿತುಕೊಂಡರು. ಅಷ್ಟರಲ್ಲಿ, ಇಷ್ಮಾಯೇಲರ ಗುಂಪೊಂದು ಗಿಲ್ಯಾದಿನಿಂದ ಬರುವುದು ಅವರ ಕಣ್ಣಿಗೆ ಕಾಣಿಸಿತು. ಇವರು ತಮ್ಮ ಒಂಟೆಗಳ ಮೇಲೆ ಪರಿಮಳ ಪದಾರ್ಥ, ಸುಗಂಧ ತೈಲ, ರಸಗಂಧ ಇವುಗಳನ್ನು ಹೇರಿಕೊಂಡು, ಈಜಿಪ್ಟಿಗೆ ಪ್ರಯಾಣಮಾಡುತ್ತಿದ್ದರು.


ಇಸ್ರಯೇಲೆಂಬ ಯುವತಿಯೇ, ನಿನ್ನ ಪಾಳುಬಿದ್ದ ಪ್ರದೇಶಗಳನ್ನು ನಾನು ಪುನಃ ಕಟ್ಟುವೆನು, ಅವು ಕಟ್ಟಡಗಳಿಂದ ಕೂಡಿರುವುವು. ನೀನು, ಮತ್ತೆ ತಾಳಮೇಳಗಳನ್ನು ತೆಗೆದುಕೊಂಡು ನಲಿದಾಡುವವರ ನಾಟ್ಯಗಳಲ್ಲಿ ಭಾಗವಹಿಸುವೆ.


“ದಾರಿತೋರುವ ಕಂಬಗಳನ್ನೂ ಕೈಮರಗಳನ್ನೂ ನಿಲ್ಲಿಸಿಕೊ ನೀನು ಯಾವ ಮಾರ್ಗವಾಗಿ ಹೋದೆಯೋ ಆ ಮಾರ್ಗವನ್ನು ನೆನಸಿಕೊ. ಇಸ್ರಯೇಲೆಂಬ ಯುವತಿಯೇ ಹಿಂದಿರುಗು ಈ ನಿನ್ನ ನಗರಕ್ಕೆ ಹಿಂದಿರುಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು