Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:13 - ಕನ್ನಡ ಸತ್ಯವೇದವು C.L. Bible (BSI)

13 ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಬಂದು ಈಜಿಪ್ಟ್ ದೇಶದ ಮೇಲೆ ಮುತ್ತಿಗೆ ಹಾಕುವನು ಎಂಬುದಾಗಿ ಸರ್ವೇಶ್ವರನಿಂದ ಪ್ರವಾದಿ ಯೆರೆಮೀಯನಿಗೆ ಕೇಳಿ ಬಂದ ವಾಣಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತ ದೇಶವನ್ನು ಹೊಡೆಯುವನು” ಎಂಬುದಾಗಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತದೇಶವನ್ನು ಹೊಡೆಯುವನು ಎಂಬದಾಗಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ನುಡಿದ ವಾಕ್ಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನು ಕೊಟ್ಟ ಸಂದೇಶವಿದು. ಈ ಸಂದೇಶ ನೆಬೂಕದ್ನೆಚ್ಚರನು ಈಜಿಪ್ಟಿನ ಮೇಲೆ ಧಾಳಿ ಮಾಡಲು ಬರುವುದರ ಬಗ್ಗೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಬಂದು ಈಜಿಪ್ಟ್ ದೇಶವನ್ನು ಹೇಗೆ ಹೊಡೆಯುವನೆಂಬುದರ ವಿಷಯವಾಗಿ ಯೆಹೋವ ದೇವರು ಪ್ರವಾದಿಯಾದ ಯೆರೆಮೀಯನಿಗೆ ಹೇಳಿದ ವಾಕ್ಯವು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:13
6 ತಿಳಿವುಗಳ ಹೋಲಿಕೆ  

ಆ ಗುರುತು ಯಾವುದೆಂದರೆ: ಇಗೋ ಜುದೇಯದ ಅರಸ ಚಿದ್ಕೀಯನನ್ನು ಅವನ ಪ್ರಾಣ ಶತ್ರುವಾದ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಕೈ಼ಗೆ ಒಪ್ಪಿಸಿದಂತೆ ಈಜಿಪ್ಟಿನ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಒಪ್ಪಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ’.”


ಅವನ ದೇಶಕ್ಕೆ ನಿಯಮಿತ ಕಾಲ ಬರುವತನಕ ಎಲ್ಲ ರಾಷ್ಟ್ರಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.”


ಹೀಗಿರಲು, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ಬರಮಾಡಿ ಜನರನ್ನೂ ಜಾನುವಾರುಗಳನ್ನೂ ನಿನ್ನಿಂದ ನಿರ್ಮೂಲಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು