Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:17 - ಕನ್ನಡ ಸತ್ಯವೇದವು C.L. Bible (BSI)

17 ಈಜಿಪ್ಟಿನ ಅರಸನು ಗಡಿಬಿಡಿಯ ಮಾತಾಡಿ ಸದಾವಕಾಶವನ್ನು ಕಳೆದುಕೊಂಡವನೆಂದು ಕರೆಸಿಕೊಂಡ ವ್ಯಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಐಗುಪ್ತದ ಅರಸನಾದ ಫರೋಹನು ಧಡಮ್ಮನೆ ಬಿದ್ದವನು, ಸದಾವಕಾಶವನ್ನು ಉಪೇಕ್ಷಿಸಿದವನು” ಎಂದು ಅಲ್ಲಿ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಐಗುಪ್ತದ ಅರಸನಾದ ಫರೋಹನು ಧಡಮ್ಮನೆ ಬಿದ್ದವನು, ಯುಕ್ತಸಮಯವನ್ನು ಉಪೇಕ್ಷಿಸಿದವನು ಎಂದು ಅಲ್ಲಿ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ‘ಈಜಿಪ್ಟಿನ ರಾಜನಾದ ಫರೋಹನು ಕೇವಲ ಒಂದು ಪೊಳ್ಳು ಧ್ವನಿ. ಅವನ ವೈಭವದ ದಿನಗಳು ಮುಗಿದವು’” ಎಂದು ಆ ಸೈನಿಕರು ತಮ್ಮ ಜನ್ಮಭೂಮಿಯಲ್ಲಿ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈಜಿಪ್ಟಿನ ಅರಸನಾದ ಫರೋಹನು ನಾಶವಾದನು; ಸಮಯವನ್ನು ತಪ್ಪಿಸಿದ್ದಾನೆಂದು ಅಲ್ಲಿ ಕೂಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:17
11 ತಿಳಿವುಗಳ ಹೋಲಿಕೆ  

ಆಗ ಅವರು ಅಹಾಬನಿಗೆ, “ಸಮಾರಿಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು; ಲೆಕ್ಕವಿಲ್ಲದ ನನ್ನ ಸೈನಿಕರು ಅದರಲ್ಲಿ ಒಂದು ಹಿಡಿ ಧೂಳನ್ನೂ ಬಿಡುವುದಿಲ್ಲ; ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಹೇಳಿಕಳುಹಿಸಿದನು.


ನಮ್ಮ ಶತ್ರುಗಳು ಮಾತಾಡಿಕೊಂಡರು ಇಂತೆಂದು: ‘ಹಿಂದಟ್ಟಿ ಹಿಡಿಯುವೆವು ಅವರನು ಅಪಹರಿಸಿಕೊಳ್ವೆವು ಅವರ ಸೊತ್ತನು ತೀರಿಸಿಕೊಳ್ವೆವು ಅವರಲ್ಲಿ ನಮ್ಮ ಬಯಕೆಯನು ಶಕ್ತಿಯಿಂದ ಸಂಹರಿಸುವೆವು ಅವರನು ಕತ್ತಿ ಹಿಡಿದು.’


ಇಂಥಾ ವೈಭವದಿಂದ ಹಾಗೂ ಮಹಿಮೆಯಿಂದ ಕೂಡಿದ ನೀನು, ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ದೂಡಿದವನಾಗಿ ಸುನ್ನತಿಹೀನರ ನಡುವೆ ಖಡ್ಗಹತರ ಸಂಗಡ ಒರಗಿಹೋಗುವೆ. ಫರೋಹನೂ ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು. ಇದು ಸರ್ವೇಶ್ವರನಾದ ದೇವರ ನುಡಿ.”


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಈಜಿಪ್ಟಿನ ಅರಸ ಫರೋಹನೇ, ನದೀಶಾಖೆಗಳ ನಡುವೆ ಒರಗಿಕೊಂಡು ‘ಈ ನದಿ ನನ್ನದೇ. ನನಗಾಗಿಯೇ ಮಾಡಿಕೊಂಡಿದ್ದೇನೆ’ ಎಂದುಕೊಳ್ಳುವ ದೊಡ್ಡ ಮೊಸಳೆ ನೀನು. ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ಈಜಿಪ್ಟಿನವರು ಕೇವಲ ಮನುಷ್ಯರೇ ಹೊರತು ದೇವರಲ್ಲ. ಅವರ ಅಶ್ವಗಳು ಮೂಳೆಮಾಂಸವೇ ಹೊರತು ಆಧ್ಯಾತ್ಮಿಕ ದಿವ್ಯಶಕ್ತಿಯಲ್ಲ. ಸರ್ವೇಶ್ವರ ಕೈಯೆತ್ತುವಾಗ ಅದಕ್ಕೆ ವಿರುದ್ಧ ಸಹಾಯ ಮಾಡಿದ ಅವನು ಮುಗ್ಗರಿಸುವನು. ಆ ಸಹಾಯ ಪಡೆದ ಅವನು ಬಿದ್ದುಹೋಗುವನು. ಎಲ್ಲರೂ ಒಟ್ಟಿಗೆ ಅಳಿದುಹೋಗುವರು.


“ಅವರು ಯುದ್ಧಕ್ಕಾಗಿಯೇ ಬಂದಿರಲಿ, ಸಮಾಧಾನಕ್ಕಾಗಿಯೇ ಬಂದಿರಲಿ, ಅವರನ್ನು ಸಜೀವಿಗಳನ್ನಾಗಿ ಹಿಡಿದುತನ್ನಿ,” ಎಂದು ಆಜ್ಞಾಪಿಸಿದನು.


ಆದರೆ ನಿನ್ನದೊಂದು ಉಸಿರುಗಾಳಿ ಸಾಕಾಯಿತು ಅವರು ಸೀಸದ ಗುಂಡಿನಂತೆ ಮುಳುಗಿ ಹೋಗಲು. ಅವರನ್ನು ಸಮುದ್ರವು ನುಂಗಿಬಿಡಲು


ಬಂದ ದೂತರಿಗೆ ಇಸ್ರಯೇಲರ ಅರಸನು, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಕೊಚ್ಚಿಕೊಳ್ಳಬಾರದು ಎಂದು ಅವನಿಗೆ ಹೇಳಿರಿ,” ಎಂದನು.


ಪ್ರತಿಯೊಂದು ಕಾಲಕ್ಕೂ ನಿಗದಿಯಾದ ಕಾಲವಿದೆ. ಜಗತ್ತಿನಲ್ಲಿ ನಡೆಯುವ ಒಂದೊಂದು ಕೆಲಸಕ್ಕೂ ಸೂಕ್ತ ಸಮಯವಿದೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು