Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:18 - ಕನ್ನಡ ಸತ್ಯವೇದವು C.L. Bible (BSI)

18 ಇಗೋ, ಸೇನಾಧೀಶ್ವರ ಸರ್ವೇಶ ಎಂಬ ಹೆಸರುಳ್ಳ ರಾಜಾಧಿರಾಜನ ನುಡಿ: ‘ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆ ಸಮುದ್ರದಿಂದೆದ್ದಿರುವ ಕರ್ಮೆಲ್ ಗುಡ್ಡದಂತೆ ಉನ್ನತನೊಬ್ಬನು ಬರುವನು, ನನ್ನ ಜೀವದಾಣೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ, ಸಮುದ್ರದಿಂದ ಎದ್ದಿರುವ ಕರ್ಮೆಲ್ ಬೆಟ್ಟದ ಹಾಗೂ ಉನ್ನತನಾದವನೊಬ್ಬನು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ ಸಮುದ್ರದಿಂದೆದ್ದಿರುವ ಕರ್ಮೆಲ್ ಗುಡ್ಡದ ಹಾಗೂ ಉನ್ನತನಾದವನೊಬ್ಬನು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಈ ಸಂದೇಶವು ರಾಜನಿಂದ ಬಂದದ್ದು. ಆ ರಾಜನೇ ಸರ್ವಶಕ್ತನಾದ ಯೆಹೋವನು. “ನನ್ನ ಜೀವದಾಣೆಯಾಗಿ ಹೇಳುತ್ತೇನೆ. ಬಲಿಷ್ಠನಾದ ನಾಯಕನು ಬರುವನು. ಅವನು ತಾಬೋರ್ ಬೆಟ್ಟದಂತೆಯೂ ಸಮುದ್ರದ ಸಮೀಪದ ಕರ್ಮೆಲ್ ಗುಡ್ಡದಂತೆಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಸೇನಾಧೀಶ್ವರ ಯೆಹೋವ ದೇವರೆಂದು ಹೆಸರುಳ್ಳ ಅರಸನು ಹೇಳುವುದೇನೆಂದರೆ, ‘ನನ್ನ ಜೀವದಾಣೆ,’ ಬೆಟ್ಟಗಳಲ್ಲಿ ತಾಬೋರಿನಂತೆಯೂ, ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯವಾಗಿ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:18
20 ತಿಳಿವುಗಳ ಹೋಲಿಕೆ  

ಮೋವಾಬು ಹಾಳಾಗಿದೆ ಸುಟ್ಟುಹೋದ ಅದರ ನಗರಗಳಿಂದ ಹೊಗೆ ಎದ್ದಿದೆ. ಅದರ ಸರ್ವಶ್ರೇಷ್ಟ ಯುವಕರು ಹೋಗಿದ್ದಾರೆ ಹತರಾಗುವುದಕ್ಕೆ, ಸರ್ವಶಕ್ತ ಸರ್ವೇಶ್ವರನೆಂಬ ನಾಮವುಳ್ಳ ರಾಜಾಧಿರಾಜನ ನುಡಿಯಂತೆ.


ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗ ಬಾರಾಕನನ್ನು ಬರಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಆಜ್ಞಾಪಿಸಿದ್ದಾರೆ: ‘ನೀನೆದ್ದು ನಫ್ತಾಲಿ ಮತ್ತು ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು;


ತಾಬೋರ್, ಶಹಚೀಮಾ, ಬೇತ್ ಷೆಮೆಷ್ ಎಂಬ ಊರುಗಳೂ ಅದರ ಮೇರೆಯೊಳಗಿದ್ದವು. ಈ ಮೇರೆಯು ಜೋರ್ಡನ್ ನದಿಯ ತೀರದಲ್ಲಿ ಮುಗಿಯುತ್ತದೆ.


“ತನ್ನ ಹಿಂಡಿನಲ್ಲಿರುವ ಗಂಡು ಪಶುವನ್ನು ಕೊಡುವುದಾಗಿ ಹರಕೆ ಹೊತ್ತು, ಬದಲಿಗೆ ಕಳಂಕವಾದ ಪಶುವನ್ನು ಸರ್ವೇಶ್ವರಸ್ವಾಮಿಗೆ ಬಲಿದಾನಮಾಡುವವನು ಮೋಸಗಾರ, ಅವನು ಶಾಪಗ್ರಸ್ತ. ನಾನೋ ರಾಜಾಧಿರಾಜ. ನನ್ನ ನಾಮಕ್ಕೆ ಅನ್ಯರಾಷ್ಟ್ರಗಳೂ ಭಯಪಡುತ್ತವೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಹೆಮ್ಮೆಪಡುವರಿವರು ತಾವು ಪವಿತ್ರನಗರದವರೆಂದು ಭರವಸೆಯಿಂದಿರುವರು ದೇವರು ಇಸ್ರಯೇಲಿನವನೇ ಎಂದು ಆತನ ಹೆಸರು ಸೇನಾಧೀಶ್ವರ ಸರ್ವೇಶ್ವರನೇ ಎಂದು.


ನಮ್ಮ ಉದ್ಧಾರಕನ ನಾಮಧೇಯ ಸೇನಾಧೀಶ್ವರ ಸರ್ವೇಶ್ವರ ಆತನೇ ಇಸ್ರಯೇಲರಿಗೆ ಪರಮಪವಿತ್ರ.


ಉತ್ತರ ದಕ್ಷಿಣಗಳನುಂಟು ಮಾಡಿದವನು ನೀನು I ಸ್ತುತಿಸುತ್ತವೆ ತಾಬೋರ್ ಹೆರ್‍ಮೊನ್ ನಿನ್ನ ನಾಮವನು II


ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ಭೂಮಿಯ ಮೇಲೆ ಆಣೆಯಿಡಬೇಡಿ, ಅದು ದೇವರ ಪಾದಪೀಠ; ಜೆರುಸಲೇಮಿನ ಮೇಲೆ ಆಣೆಯಿಡಬೇಡಿ, ಅದು ರಾಜಾಧಿರಾಜನ ಪಟ್ಟಣ;


ಇದರ ಮುಂದೆ ಜನರು ತಿಳುವಳಿಕೆಯಿಲ್ಲದ ಪಶುಪ್ರಾಯರು ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಪೊಳ್ಳು, ಶ್ವಾಸವಿಲ್ಲದವುಗಳು, ಅವನು ಎರಕಹೊಯ್ದ ಪುತ್ತಳಿಗಳು.


ಈಜಿಪ್ಟಿನಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರು ಸರ್ವೇಶ್ವರನಾದ ನಾನು ಹೇಳುವ ಮಾತನ್ನು ಕೇಳಿರಿ: ‘ಸರ್ವೇಶ್ವರನಾದ ದೇವರ ಜೀವದಾಣೆ’ ಎಂದು ನನ್ನ ಹೆಸರನ್ನು ಬಾಯಿಂದ ಉಚ್ಚರಿಸಲಿಕ್ಕೆ ಈಜಿಪ್ಟಿನಲ್ಲಿ ಯಾವ ಯೆಹೂದ್ಯನು ಇನ್ನಿರನು ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆ ಇಟ್ಟಿದ್ದೇನೆ.


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ಕರ್ಮೆಲ್ ಬೆಟ್ಟದ ಮೇಲಿರುವ ಯೊಕ್ನೆಯಾಮದ ಅರಸ - 1


ಬಾಬಿಲೋನಿನ ರಾಜ್ಯಪಾಲರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಯೋಧರು, ಇವರೆಲ್ಲರಿಗೆ ತಲೆಗೇರುವ ತನಕ ಕುಡಿಸುವೆನು. ಅವರು ಎಂದೆಂದಿಗೂ ಎಚ್ಚರಗೊಳ್ಳದೆ ಚಿರನಿದ್ರೆ ಮಾಡುವರು ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರನೆಂಬ ರಾಜಾಧಿರಾಜರು.”


ಅಬೀನೋವಮನ ಮಗ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನ ಸೀಸೆರನಿಗೆ ಮುಟ್ಟಿದಾಗ


ಗುಹೆಬಿಟ್ಟು ಹೊರಟುಬರುವ ಸಿಂಹದಂತೆ ರಾಷ್ಟ್ರಗಳ ವಿನಾಶಕನೊಬ್ಬನು ಎದ್ದಿದ್ದಾನೆ; ಹೊರಟು ಬರುತ್ತಿದ್ದಾನೆ. ಅವನು ಜುದೇಯ ನಾಡನ್ನು ಹಾಳುಮಾಡುವನು. ಅದರ ಪಟ್ಟಣಗಳು ನಿರ್ಜನ ಪ್ರದೇಶಗಳಾಗುವುವು.


ಮೇಘಗಳೋಪಾದಿಯಲ್ಲಿ ಶತ್ರು ಬರುತ್ತಿರುವುದನ್ನು ನೋಡು. ಅವನ ರಥಗಳು ಬಿರುಗಾಳಿಯಂತೆ ! ಅವನ ಕುದುರೆಗಳು ರಣಹದ್ದುಗಳಂತೆ ! ಅಯ್ಯೋ ನಮಗೆ ಕೇಡು, ಇನ್ನು ನಮ್ಮ ಗತಿ ಮುಗಿಯಿತು !


ಹಾಗಲ್ಲ ಯಕೋಬ್ಯರಿಗೆ ಸ್ವಂತವಾದ ದೇವರು ಅವರು ಸಮಸ್ತವನ್ನು ಸೃಷ್ಟಿಸಿದವರು. ಇಸ್ರಯೇಲ್ ಗೋತ್ರ ಅವರಿಗೆ ಸ್ವಾಸ್ತ್ಯ. ‘ಸೇನಾಧೀಶ್ವರ ಸರ್ವೇಶ್ವರ’ ಅವರ ನಾಮಧೇಯ.


ಬೆಟ್ಟಗುಡ್ಡಗಳನ್ನು ರೂಪಿಸಿದಾತ ದೇವನೇ ಗಾಳಿಬಿರುಗಾಳಿಯನು ಸೃಜಿಸಿದಾತ ಆತನೇ ತನ್ನಾಲೋಚನೆಯನ್ನು ನರರಿಗರುಹಿಸಿದವ ದೇವನೇ ಹಗಲನ್ನು ಇರುಳನ್ನಾಗಿಸುವವನು ಆತನೇ ಪೊಡವಿಯ ಉನ್ನತ ಸ್ಥಾನದಲ್ಲಿ ನಡೆದಾಡುವವನಾತನೇ ಆತನ ನಾಮಧೇಯ - ಸೇನಾಧೀಶ್ವರ ದೇವರಾದ ಸರ್ವೇಶ್ವರನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು