Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:2 - ಕನ್ನಡ ಸತ್ಯವೇದವು C.L. Bible (BSI)

2 ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಆ ಸೈನ್ಯದ ಮೇಲೆ ದಾಳಿಮಾಡಿದ ವಿಷಯ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಐಗುಪ್ತವನ್ನು ಕುರಿತದ್ದು; ಐಗುಪ್ತದ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಐಗುಪ್ತವನ್ನು ಕುರಿತದ್ದು. ಐಗುಪ್ತದ ಅರಸನಾದ ಫರೋಹನೆಕೋವಿನ ಸೈನ್ಯವು ಯೂಫ್ರೇಟೀಸ್ ನದಿಯ ಬಳಿ ಕರ್ಕೆಮೀಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ಸಂದೇಶವು ಈಜಿಪ್ಟ್ ಜನಾಂಗದ ಬಗ್ಗೆ ಇದೆ. ಈ ಸಂದೇಶವು ಫರೋಹನೆಕೋವಿನ ಸೈನ್ಯದ ಬಗ್ಗೆ ಇದೆ. ಫರೋಹನೆಕೋವು ಈಜಿಪ್ಟಿನ ರಾಜನಾಗಿದ್ದನು. ಅವನ ಸೈನ್ಯವನ್ನು ಕರ್ಕೆಮೀಷ್ ಪಟ್ಟಣದಲ್ಲಿ ಸೋಲಿಸಲಾಯಿತು. ಕರ್ಕೆಮೀಷ್ ಪಟ್ಟಣವು ಯೂಫ್ರೇಟೀಸ್ ನದಿಯ ದಂಡೆಯ ಮೇಲಿದೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದದಲ್ಲಿ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಫರೋಹನೆಕೋವಿನ ಸೈನ್ಯವನ್ನು ಕರ್ಕೆಮೀಷಿನಲ್ಲಿ ಸೋಲಿಸಿದನು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಈಜಿಪ್ಟಿಗೆ ಯೆಹೋವನ ಸಂದೇಶ ಹೀಗಿತ್ತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಈಜಿಪ್ಟನ್ನು ಕುರಿತದ್ದು: ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೇಟೀಸ್ ನದಿಯ ಬಳಿಯಿರುವ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಆ ಸೈನ್ಯದ ಮೇಲೆ ದಾಳಿಮಾಡಿದ್ದರ ವಿಷಯ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:2
16 ತಿಳಿವುಗಳ ಹೋಲಿಕೆ  

ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ವಿರುದ್ಧ ಯುದ್ಧಮಾಡುವುದಕ್ಕಾಗಿ ಯೂಫ್ರಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು, ಕೂಡಲೆ ಅವನಿಂದ ಹತನಾದನು.


“ಪ್ರಕಟಿಸಿರಿ ಈಜಿಪ್ಟಿನಲ್ಲಿ, ಪ್ರಚುರಪಡಿಸಿರಿ ಮಿಗ್ದೋಲ್, ತಹಪನೇಸ್, ಹಾಗು ಸೋಫ್ ಎಂಬೀ ನಗರಗಳಲ್ಲಿ. ಸಾರಿರಿ ಇಂತೆಂದು: ‘ಈಜಿಪ್ಟೇ, ಸ್ಥಿರವಾಗಿ ನಿಲ್ಲು, ಯುದ್ಧ ಸನ್ನದ್ಧವಾಗು, ಖಡ್ಗ ಆವರಿಸುತ್ತಿದೆ ನಿನ್ನ ಸುತ್ತಮುತ್ತಲು’


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದನು. ಆಗ ಪ್ರವಾದಿ ಯೆರೆಮೀಯನು ಸರ್ವೇಶ್ವರನ ಆಜ್ಞೆಯ ಪ್ರಕಾರ ಈ ವಾಕ್ಯವನ್ನು ಬಾರೂಕನಿಗೆ ನುಡಿದನು.


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆರೆಮೀಯನಿಗೆ ಕೇಳಿ ಬಂದ ಸರ್ವೇಶ್ವರನ ವಾಣಿ:


ಆ ಕೊಡದಿಂದ ಕುಡಿದ ಮತ್ತಿತರರು ಇವರು: ಈಜಿಪ್ಟಿನ ಅರಸ ಫರೋಹನು ಅವನ ಸೇವಕರು, ಮಂತ್ರಿಗಳು, ಎಲ್ಲ ಪ್ರಜೆಗಳು ಮತ್ತು ಅಲ್ಲಿನ ವಿದೇಶೀಯರು;


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೇ ವರ್ಷದಲ್ಲಿ ಅಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೇ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು.


ಕರ್ಕೆಮೀಷಿನ ಗತಿ ಕಲ್ನೋವಿಗೂ ಬಂತಲ್ಲವೇ? ಅರ್ಪದಿಗೆ ಬಂದ ಪಾಡು ಹಮಾತಿಗೂ ಬಂದಿತಷ್ಟೆ. ದಮಸ್ಕಸ್ಸಿನ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತು.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಮುರಿದ ಜೊಂಡಿಗೆ ಸಮಾನವಾದ ಈಜಿಪ್ಟಿನ ಮೇಲೆ ನಿನಗೆ ಭರವಸೆಯಿದೆಯಷ್ಟೆ. ಅಂಥ ಜೊಂಡನ್ನು ಊರಿಕೊಳ್ಳುವವನ ಕೈಯನ್ನೇ ಚುಚ್ಚಿ ತಿವಿಯುವ ಕೋಲು ಅದು. ಈಜಿಪ್ಟಿನ ರಾಜ ಫರೋಹನಲ್ಲಿ ಭರವಸೆಯಿಟ್ಟವರಿಗೆ ಆಗುವ ಗತಿ ಇದೇ.’


ಫರೋಹ ನೆಕೋವನು ಇವನನ್ನು ಜೆರುಸಲೇಮಿನಲ್ಲಿ ಬಹುದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ್ ದೇಶದ ದಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ ಮೂವತ್ತನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು.


ಬಾಬಿಲೋನಿನ ಅರಸನು ಈಜಿಪ್ಟಿನ ಪ್ರವಾಹಕ್ಕೂ ಯೂಫ್ರಟಿಸ್ ನದಿಗೂ ಮಧ್ಯದಲ್ಲಿದ್ದ ಈಜಿಪ್ಟ್ ರಾಜನ ಎಲ್ಲಾ ದೇಶವನ್ನು ಸ್ವಾಧೀನ ಮಾಡಿಕೊಂಡನು. ಅಂದಿನಿಂದ ಈಜಿಪ್ಟಿನ ಅರಸನು ತನ್ನ ದೇಶದಿಂದ ಈಚೆಗೆ ಬರಲೇ ಇಲ್ಲ.


ಅವನು ಬಂದು ಈಜಿಪ್ಟ್ ದೇಶದ ಮೇಲೆ ಧಾಳಿಮಾಡುವನು. ಮರಣಕ್ಕೆ ಗೊತ್ತಾದವರು ಮರಣಕ್ಕೆ, ಸೆರೆಮನೆಗೆ ಗೊತ್ತಾದವರು ಸೆರೆಮನೆಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಗುರಿಯಾಗುವರು.


ಈಜಿಪ್ಟಿನ ವಿಷಯವಾಗಿ ದೈವೋಕ್ತಿ : ಇಗೋ, ಸರ್ವೇಶ್ವರ ವೇಗವಾಗಿ ಚಲಿಸುವ ಮೇಘಗಳ ಮೇಲೆ ಈಜಿಪ್ಟಿಗೆ ಬರುವರು. ಅವರ ಮುಂದೆ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯ ಕರಗಿ ನೀರಾಗುವುದು.


ಆ ದಿನದಂದು ಈಜಿಪ್ಟಿನ ನಡುವೆ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವಿರುವುದು ಮತ್ತು ನಾಡಿನ ಗಡಿಯಲ್ಲಿ ಸ್ವಾಮಿಯ ಸ್ಥಂಭ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು