ಯೆರೆಮೀಯ 46:22 - ಕನ್ನಡ ಸತ್ಯವೇದವು C.L. Bible (BSI)22 ಈಜಿಪ್ಟ್ ದೇಶ ದೌಡಾಯಿಸುವ ಶಬ್ದ ಸರಿಯುವ ಸರ್ಪದ ಸಪ್ಪಳಕ್ಕೆ ಸಮಾನ. ಕೊಡಲಿಗಳಿಂದ ಮರಕಡಿಯುವವರಂತೆ ಶತ್ರುಗಳು ದಂಡೆತ್ತಿ ಬಂದು ಬೀಳುವರು ಆ ನಾಡಿನ ಮೇಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಐಗುಪ್ತವು ಓಡಿಹೋಗುವ ಶಬ್ದವು ಸರಿಯುವ ಸರ್ಪದ ಸಪ್ಪಳಕ್ಕೆ ಸಮನಾಗಿರುವುದು; ಶತ್ರುಗಳು ದಂಡೆತ್ತಿಬಂದು ಕಟ್ಟಿಗೆ ಕಡಿಯುವವರಂತೆ ಕೊಡಲಿಗಳಿಂದ ಅವರ ಮೇಲೆ ಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಐಗುಪ್ತವು ಓಡಿಹೋಗುವ ಶಬ್ದವು ಸರಿಯುವ ಸರ್ಪದ ಸಪ್ಪಳಕ್ಕೆ ಸಮನಾಗಿರುವದು; [ಶತ್ರುಗಳು] ದಂಡೆತ್ತಿಬಂದು ಕಟ್ಟಿಗೆ ಕಡಿಯುವವರಂತೆ ಕೊಡಲಿಗಳಿಂದ ಅದರ ಮೇಲೆ ಬೀಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಈಜಿಪ್ಟು ಬುಸುಗುಟ್ಟಿ ತಪ್ಪಿಸಿಕೊಳ್ಳಲು ಪ್ರಯತ್ನಮಾಡುವ ಹಾವಿನಂತಿದೆ. ವೈರಿಗಳು ಬಹಳ ಹತ್ತಿರಕ್ಕೆ ಬಂದಿದ್ದಾರೆ. ಈಜಿಪ್ಟಿನ ಸೈನಿಕರು ಓಡಿಹೋಗಲು ಪ್ರಯತ್ನ ಮಾಡುತ್ತಿದ್ದಾರೆ. ವೈರಿಗಳು ಕೊಡಲಿಯನ್ನು ಹಿಡಿದುಕೊಂಡು ಈಜಿಪ್ಟಿನ ಮೇಲೆ ಬೀಳುವರು; ಅವರು ಮರ ಕಡಿಯುವ ಜನರಂತಿದ್ದಾರೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅದರ ಶಬ್ದವು ಸರ್ಪದಂತೆ ಹೊರಡುವುದು; ಏಕೆಂದರೆ ಅವರು ದಂಡಿನ ಸಂಗಡ ಸಂಚರಿಸಿ, ಕಟ್ಟಿಗೆ ಕಡಿಯುವವರ ಹಾಗೆ ಕೊಡಲಿಗಳ ಸಂಗಡ ಅದಕ್ಕೆ ವಿರೋಧವಾಗಿ ಬರುವರು. ಅಧ್ಯಾಯವನ್ನು ನೋಡಿ |
ನೀನು ನಿನ್ನ ಸೇವಕರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ. ಅಲ್ಲದೆ, ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ : ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ. ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ, ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ. ಒಳಹೊಕ್ಕಿದ್ದೇನೆ ಅಲ್ಲಿನ ದೂರದ ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡುಮೇಡುಗಳನ್ನೇ