Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:23 - ಕನ್ನಡ ಸತ್ಯವೇದವು C.L. Bible (BSI)

23 ಮಿಡಿತೆಗಳಿಗಿಂತ ಅಸಂಖ್ಯಾತರಾಗುವವರು ಕಡಿವರವರು ದಾಟಲಾಗದ ಈಜಿಪ್ಟಿನ ದಟ್ಟ ಕಾಡನ್ನು ಸರ್ವೇಶ್ವರನ ನುಡಿ ಇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರು ಮಿಡತೆಗಳಿಗಿಂತಲೂ ಅಸಂಖ್ಯಾತರಾಗಿ ದಾಟಲಾಗದ ಐಗುಪ್ತದ ದಟ್ಟವಾದ ಕಾಡನ್ನು ಕಡಿದುಹಾಕುವರು, ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರು ವಿುಡಿತೆಗಳಿಗಿಂತಲೂ ಅಸಂಖ್ಯಾತರಾಗಿ ದಾಟಲಾಗದ ಐಗುಪ್ತದ ದಟ್ಟವಾದ ಕಾಡನ್ನು ಕಡಿದು ಹಾಕುವರು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನು ಹೀಗೆನ್ನುತ್ತಾನೆ: “ವೈರಿಗಳು ಈಜಿಪ್ಟಿನ ಅರಣ್ಯವನ್ನು (ಸೈನ್ಯವನ್ನು) ಕತ್ತರಿಸುವರು. ಆ ಅರಣ್ಯದಲ್ಲಿ (ಸೈನ್ಯದಲ್ಲಿ) ಅನೇಕ ಮರಗಳಿವೆ (ಸೈನಿಕರಿದ್ದಾರೆ). ಆದರೂ ಅದನ್ನು ಕತ್ತರಿಸಲಾಗುವುದು. ಮಿಡತೆಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ವೈರಿಗಳ ಸೈನಿಕರಿದ್ದಾರೆ. ಆ ಸೈನಿಕರನ್ನು ಯಾರಿಂದಲೂ ಎಣಿಸಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಅಡವಿಯನ್ನು ಅದು ಶೋಧಿಸಕೂಡದ್ದಾಗಿದ್ದರೂ, ಕಡಿದುಹಾಕುವರು,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ಅವರು ಮಿಡತೆಗಳಿಗಿಂತ ಹೆಚ್ಚಾಗಿ ಲೆಕ್ಕವಿಲ್ಲದೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:23
8 ತಿಳಿವುಗಳ ಹೋಲಿಕೆ  

ಮಿದ್ಯಾನ್ಯರೂ ಅಮಾಲೇಕ್ಯರೂ ಪೂರ್ವದೇಶದವರೂ ಮಿಡಿತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.


ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಮೇತ ಮಿಡತೆಗಳಂತೆ ಗುಂಪು ಗುಂಪಾಗಿ ಬರುತ್ತಿದ್ದರು. ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪುಗಳಿಂದ ನಾಡೆಲ್ಲ ನಾಶವಾಗುತ್ತಿತ್ತು.


ಗುಂಪುಮಿಡತೆ, ಕಂಬಳಿಮಿಡತೆ, ಚೂರಿಮಿಡತೆ, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಿಮಗೆ ಭರಿಸಿಕೊಡುವೆನು.


“ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ, ಆ ಕಡೆಗೆ ಮಾತಾಡುತ್ತಾ ದಕ್ಷಿಣ ಸೀಮೆಯ ವನವನ್ನು ಉದ್ದೇಶಿಸಿ ಪ್ರಸ್ತಾಪವನ್ನೆತ್ತಿ,


ದೇಹಾತ್ಮದಂಥ ಅದರ ಉದ್ಯಾನವನವನ್ನೂ ಫಲಭರಿತ ತೋಟವನ್ನೂ ನಿರ್ಮೂಲ ಮಾಡುವುದು. ಮಾರಕರೋಗ ತಗಲಿದ ರೋಗಿಯಂತೆ ದೇಶವೆಲ್ಲವೂ ಕರಗಿಹೋಗುವುದು.


ನಿಮ್ಮ ದುಷ್ಕೃತ್ಯಗಳಿಗೆ ವಿಧಿಸುವೆನು ತಕ್ಕ ದಂಡನೆ, ಬೆಂಕಿ ಹಚ್ಚುವೆನು ನಿಮ್ಮ ಪುರಿಯೆಂಬ ವನಕ್ಕೆ, ಅದು ಕಬಳಿಸಿಬಿಡುವುದು ಸುತ್ತಮುತ್ತಣ ವಸ್ತುಗಳನ್ನು.”


ಈಜಿಪ್ಟ್ ದೇಶ ದೌಡಾಯಿಸುವ ಶಬ್ದ ಸರಿಯುವ ಸರ್ಪದ ಸಪ್ಪಳಕ್ಕೆ ಸಮಾನ. ಕೊಡಲಿಗಳಿಂದ ಮರಕಡಿಯುವವರಂತೆ ಶತ್ರುಗಳು ದಂಡೆತ್ತಿ ಬಂದು ಬೀಳುವರು ಆ ನಾಡಿನ ಮೇಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು