Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:27 - ಕನ್ನಡ ಸತ್ಯವೇದವು C.L. Bible (BSI)

27 “ನನ್ನ ದಾಸ ಯಕೋಬೇ, ಭಯಪಡಬೇಡ ಇಸ್ರಯೇಲೇ, ಅಂಜಬೇಡ, ಇಗೋ, ನಾನು ನಿನ್ನನ್ನು ಉದ್ಧರಿಸುವೆನು ದೂರದೇಶದಿಂದ ನಿನ್ನ ಸಂತಾನವನ್ನು ರಕ್ಷಿಸುವೆನು ಸೆರೆಹೋದ ಸೀಮೆಯಿಂದ. ಯಕೋಬು ಹಾಯಾಗಿ ಹಿಂತಿರುಗಿ ಬಾಳುವುದು ನೆಮ್ಮದಿಯಿಂದ. ಭಯಪಡಬೇಡ ನನ್ನ ದಾಸ ಯಕೋಬೇ, ನಾನಿದ್ದೇನೆ ನಿನ್ನೊಂದಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ, ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ, ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ ಹಾಯಾಗಿಯೂ ಇರುವದು; ಯಾರೂ ಅದನ್ನು ಹೆದರಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ಇಸ್ರೇಲೇ, ಅಂಜಬೇಡ. ಆ ದೂರಸ್ಥಳಗಳಿಂದ ನಾನು ನಿನ್ನನ್ನು ಖಂಡಿತವಾಗಿ ರಕ್ಷಿಸುತ್ತೇನೆ. ಬಂಧಿಯಾಗಿರುವ ದೇಶಗಳಿಂದ ನಾನು ನಿನ್ನ ಮಕ್ಕಳನ್ನು ರಕ್ಷಿಸುತ್ತೇನೆ. ಯಾಕೋಬು ಪುನಃ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇರುವುದು. ಯಾರೂ ಅದನ್ನು ಹೆದರಿಸಲಾರರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಆದರೆ ನೀನು, ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡಬೇಡ; ಇಸ್ರಾಯೇಲೇ, ದಿಗ್ಭ್ರಮೆಗೊಳ್ಳಬೇಡ; ಏಕೆಂದರೆ ಇಗೋ, ನಾನು ನಿನ್ನನ್ನು ದೂರದಿಂದಲೂ, ನಿನ್ನ ಸಂತಾನವನ್ನು ಅವರು ಸೆರೆಯಾಗಿ ಹೋದ ದೇಶದಿಂದಲೂ ರಕ್ಷಿಸುವೆನು; ಅವನನ್ನು ಭಯಪಡಿಸುವುದಕ್ಕೆ ಯಾರು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:27
24 ತಿಳಿವುಗಳ ಹೋಲಿಕೆ  

ಭಯಪಡಬೇಡ, ನಾನಿರುವೆ ನಿನ್ನ ಸಂಗಡ ಕರೆತರುವೆ ನಿನ್ನ ಸಂತತಿಯನ್ನು ಮೂಡಣದಿಂದ ಒಟ್ಟುಗೂಡಿಸುವೆ ನಿನ್ನವರನ್ನು ಪಡುವಣದಿಂದ.


ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು : ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ?


ಇಸ್ರಯೇಲೆಂಬ ಮಂದೆಯನ್ನು ಮರಳಿ ಅದರ ಹುಲ್ಲುಗಾವಲಿಗೆ ಸೇರಿಸುವೆನು. ಅದು ಕರ್ಮೆಲಿನಲ್ಲೂ ಭಾಷಾನಿನಲ್ಲೂ ಮೇಯುವುದು. ಎಫ್ರಯಿಮಿನ ಮತ್ತು ಗಿಲ್ಯಾದಿನ ಗುಡ್ಡಗಳಲ್ಲಿ ಹೊಟ್ಟೆತುಂಬ ತಿನ್ನುವುದು.


ಹೌದು, ನಾನು ನಿಮಗೆ ದೊರೆಯುವೆನು. ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಿಮ್ಮನ್ನು ಅಟ್ಟಲಾಗಿದ್ದ ಸಮಸ್ತ ದೇಶಗಳಿಂದಲೂ ಸಕಲ ರಾಷ್ಟ್ರಗಳ ಮಧ್ಯೆಯಿಂದಲೂ ಒಟ್ಟುಗೂಡಿಸಿ, ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.’


ಸನಾತನ ಸೌಭಾಗ್ಯಕ್ಕೆ ಮರಳಿಸುವೆನು ನನ್ನ ಜನರಾದ ಇಸ್ರಯೇಲರನು. ವಾಸಮಾಡುವರವರು ಪಾಳುಬಿದ್ದ ಪಟ್ಟಣಗಳನು ಮತ್ತೆ ಕಟ್ಟಿಕೊಂಡು. ಕುಡಿಯುವರು ಸಮೃದ್ಧಿಯಾಗಿ ದ್ರಾಕ್ಷಾತೋಟಗಳನ್ನು ಮಾಡಿಕೊಂಡು. ತಿನ್ನುವರು ಯಥೇಚ್ಛವಾಗಿ ಫಲವೃಕ್ಷಗಳನು ಬೆಳೆಸಿಕೊಂಡು.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು. ಜೆರುಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ‘ಯೆಹೂವಚಿದ್ಕೇನು’ (ಅಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.


ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


ನಿನ್ನನ್ನು ಸೃಷ್ಟಿಸಿದ ಸರ್ವೇಶ್ವರ ನಾನೆ ತಾಯ ಗರ್ಭದಿಂದ ನಿನ್ನನ್ನು ರೂಪಿಸಿದವನು ನಾನೆ ಅಂದಿನಿಂದ ನಿನಗೆ ನೆರವಾಗುತ್ತಾ ಬಂದವನು ನಾನೆ. ಭಯಪಡಬೇಡ, ನನ್ನ ದಾಸ ಯಕೋಬನೇ, ಅಂಜಬೇಡ, ನಾನು ಆರಿಸಿಕೊಂಡ ಯೆಶುರೂನೇ.


‘ಇಗೋ, ನಾನು ಕಡುಕೋಪದಿಂದಲೂ ರೋಷಾವೇಶದಿಂದಲೂ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಎಲ್ಲ ದೇಶಗಳಿಂದ ಈ ಸ್ಥಳಕ್ಕೆ ಮರಳಿ ಕರೆತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಯೇಲ್ ವಂಶದವರಿಗೆಲ್ಲ ಕೃಪೆತೋರುವೆನು.


ನಾನು ನಿಮ್ಮನ್ನು ಜನಾಂಗಗಳಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡುವೆನು.


ಸಂಕಟದಿಂದಲೂ ನೋವುನಷ್ಟದಿಂದಲೂ ಕ್ರೂರವಾದ ಬಿಟ್ಟಿಜೀತದಿಂದಲೂ ಸರ್ವೇಶ್ವರ ನಿಮ್ಮನ್ನು ಬಿಡುಗಡೆಮಾಡುವರು. ಆ ದಿನದಂದು ಬಾಬಿಲೋನಿನ ಅರಸನನ್ನು ಮೂದಲಿಸಿ ಈ ಪದ್ಯವನ್ನು ನೀವು ಹಾಡಬೇಕು :


“ಕೇಳೀಗ ನನ್ನ ದಾಸ ಯಕೋಬೇ, ನಾನು ಆರಿಸಿಕೊಂಡ ಇಸ್ರಯೇಲೇ,


ನಿಮ್ಮ ಎದೆ ಕುಂದದಿರಲಿ. ನಾಡಿನಲ್ಲಿ ಕಿವಿಗೆ ಬೀಳುವ ಸುದ್ದಿ ನಿಮ್ಮನ್ನು ಹೆದರಿಸದಿರಲಿ. ಒಂದು ವರ್ಷ ಒಂದು ಸುದ್ದಿಯಾದರೆ ಮತ್ತೊಂದು ವರ್ಷ ಮತ್ತೊಂದು ಸುದ್ದಿ. ಹಿಂಸಾಚಾರ ಪ್ರಬಲವಾಗುತ್ತಿದೆ ನಾಡಿನಲ್ಲಿ. ಅಧಿಕಾರಿಗೆ ಅಧಿಕಾರಿಯೇ ವಿರೋಧಿ ಅಲ್ಲಿ.


“ಸೊದೋಮ್ ಮತ್ತು ಆಕೆಯ ಕುವರಿಯರ ಹಾಗೂ ಸಮಾರಿಯ ಮತ್ತು ಆಕೆಯ ಕುವರಿಯರ ಸೌಭಾಗ್ಯವನ್ನು ಪುನಃ ನೀಡುವೆನು. ಅದರೊಂದಿಗೆ ನಿನ್ನ ಸೌಭಾಗ್ಯವನ್ನೂ ಮರಳಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು