Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:4 - ಕನ್ನಡ ಸತ್ಯವೇದವು C.L. Bible (BSI)

4 ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿ. ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ತೊಟ್ಟುಕೊಳ್ಳಿರಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿರಿ, ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿರಿ, ಬರ್ಜಿಗಳನ್ನು ಬೆಳಗಿರಿ, ಕವಚ ತೊಟ್ಟುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಕುದುರೆಗಳನ್ನು ಸಜ್ಜುಗೊಳಿಸಿರಿ. ಸೈನಿಕರೇ, ನಿಮ್ಮ ಕುದುರೆಯ ಮೇಲೆ ಹತ್ತಿರಿ, ಯುದ್ಧಕ್ಕಾಗಿ ನಿಮ್ಮನಿಮ್ಮ ಸ್ಥಾನಗಳಿಗೆ ಹೋಗಿರಿ. ನಿಮ್ಮ ಶಿರಸ್ತ್ರಾಣಗಳನ್ನು ಧರಿಸಿರಿ, ನಿಮ್ಮ ಭರ್ಜಿಗಳನ್ನು ಚೂಪುಗೊಳಿಸಿರಿ. ನಿಮ್ಮ ಕವಚಗಳನ್ನು ಧರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ರಾಹುತರೇ, ಕುದುರೆಗಳನ್ನು ಕಟ್ಟಿರಿ; ವಾಹನಾಶ್ವಗಳನ್ನು ಹತ್ತಿರಿ. ಎದ್ದು ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಂತುಕೊಳ್ಳಿರಿ; ಈಟಿಗಳನ್ನು ಮೆರುಗು ಮಾಡಿರಿ; ಕವಚಗಳನ್ನು ತೊಟ್ಟುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:4
11 ತಿಳಿವುಗಳ ಹೋಲಿಕೆ  

ಅದರ ಧನುರ್ಧಾರಿಗಳಿಗೂ ಕವಚ ಸನ್ನದ್ಧರಿಗೂ ಬಿಲ್ಲುಬಾಣಗಳನ್ನೆಸೆಯಲು ಅವಕಾಶವಿಲ್ಲದಿರಲಿ. ಬಾಬಿಲೋನಿಯದ ಯುವಕರನ್ನು ಉಳಿಸದಿರಿ. ಅದರ ಸೈನಿಕರನ್ನೆಲ್ಲ ನಿಶ್ಶೇಷಮಾಡಿರಿ.


“ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ - ಅಮ್ಮೋನ್ಯರ ವಿಷಯದಲ್ಲೂ ಅವರು ಮಾಡುವ ದೂಷಣೆಯ ವಿಷಯದಲ್ಲೂ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ಖಡ್ಗ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ; ಮಿಂಚುವಂತೆ ಪೂರ್ಣ ಮಸೆಯಲಾಗಿದೆ.


ಅಂದಿನಿಂದ ನನ್ನ ಸ್ವಂತ ಆಳುಗಳಲ್ಲಿ ಅರ್ಧಮಂದಿ ಕಟ್ಟಡ ಕೆಲಸದಲ್ಲಿ ನಿರತರಾದರು. ಅರ್ಧಮಂದಿ ಕವಚವನ್ನು ಧರಿಸಿಕೊಂಡು ಬರ್ಜಿ, ಗುರಾಣಿ, ಬಿಲ್ಲುಗಳನ್ನು ಹಿಡಿದುಕೊಂಡು ನಿಂತರು. ಅದೇ ಪ್ರಕಾರ ಅಧಿಕಾರಿಗಳೂ ಗೋಡೆ ಕಟ್ಟುವ ಯೆಹೂದ್ಯರ ಹಿಂದೆ ನಿಂತರು.


ಉಜ್ಜೀಯನು ಈ ಎಲ್ಲ ಸೈನ್ಯದವರಿಗೆ ಬೇಕಾದ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು, ಕವಣೆಯಕಲ್ಲು ಇವುಗಳನ್ನು ಒದಗಿಸಿಕೊಟ್ಟನು.


ಅದು ಮಾತ್ರವಲ್ಲ, ತನ್ನ ಯುದ್ಧವಸ್ತ್ರಗಳನ್ನೂ ಕವಚವನ್ನೂ ಅವನಿಗೆ ತೊಡಿಸಿದನು. ಅವನ ತಲೆಯ ಮೇಲೆ ಕಂಚಿನ ಶಿರಸ್ತ್ರಾಣವನ್ನೂ ಇಟ್ಟನು.


ಅವನು ಧರಿಸಿದ್ದು ಕಂಚಿನ ಶಿರಸ್ತ್ರಾಣ. ಅದೇ ಲೋಹದ ಬಿಲ್ಲೆಗಳಿಂದ ಪರೆಪರೆಯಾಗಿ ಜೋಡಿಸಲಾಗಿದ್ದ ಅವನ ಕವಚ ಸುಮಾರು ಐವತ್ತೇಳು ಕಿಲೋಗ್ರಾಮಿನಷ್ಟು ತೂಕವಾಗಿತ್ತು.


ಸರ್ವೇಶ್ವರನು ಬಾಬಿಲೋನನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಅದನ್ನು ಮೇದ್ಯರ ಅರಸರು ನಾಶಮಾಡುವಂತೆ ಅವರನ್ನು ಪ್ರೇರೇಪಿಸಿದ್ದಾರೆ. ಆ ನಾಶವು, ಸರ್ವೇಶ್ವರನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ ಆಗಿದೆ. ‘ಮೇದ್ಯರೇ, ಬಾಣಗಳನ್ನು ಮಸೆಯಿರಿ, ಯುದ್ಧಸನ್ನದ್ಧರಾಗಿರಿ;


“ರಾಷ್ಟ್ರಗಳಿಗೆ ಹೀಗೆ ಪ್ರಕಟಿಸಿರಿ: ರಾಷ್ಟ್ರಗಳೇ, ಯುದ್ಧಸನ್ನದ್ಧರಾಗಿರಿ. ಶೂರರನ್ನು ಎಚ್ಚರಗೊಳಿಸಿರಿ; ಯೋಧರೆಲ್ಲರೂ ಒಟ್ಟುಗೂಡಲಿ; ಯುದ್ಧಕ್ಕೆ ಹೊರಡಲಿ.


ಕೂಡಿಬನ್ನಿ ರಾಷ್ಟ್ರಗಳೇ, ತುಂಡುತುಂಡಾಗುವಿರಿ ನೀವು; ಕಿವಿಗೊಡಿ, ದೂರ ದೇಶಗಳೇ, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು; ಹೌದು, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು.


“ಪ್ರಕಟಿಸಿರಿ ಈಜಿಪ್ಟಿನಲ್ಲಿ, ಪ್ರಚುರಪಡಿಸಿರಿ ಮಿಗ್ದೋಲ್, ತಹಪನೇಸ್, ಹಾಗು ಸೋಫ್ ಎಂಬೀ ನಗರಗಳಲ್ಲಿ. ಸಾರಿರಿ ಇಂತೆಂದು: ‘ಈಜಿಪ್ಟೇ, ಸ್ಥಿರವಾಗಿ ನಿಲ್ಲು, ಯುದ್ಧ ಸನ್ನದ್ಧವಾಗು, ಖಡ್ಗ ಆವರಿಸುತ್ತಿದೆ ನಿನ್ನ ಸುತ್ತಮುತ್ತಲು’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು