Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:5 - ಕನ್ನಡ ಸತ್ಯವೇದವು C.L. Bible (BSI)

5 “ಆದರೆ, ನನ್ನ ಕಣ್ಣಿಗೆ ಕಾಣುತ್ತಿರುವುದೇನು? ಅವರು ಓಡುತ್ತಿರುವರು ನೋಡು, ಧೈರ್ಯಗೆಟ್ಟು, ಬೆನ್ನುಗೊಟ್ಟು. ಅವರ ಶೂರರು ಹಿಂದಿರುಗದೆ ಓಡುತ್ತಿರುವರು ಪೆಟ್ಟುತಿಂದು, ದಿಗಿಲು ಕವಿದಿದೆ ಸುತ್ತ ಮುತ್ತಲು,” ಸರ್ವೇಶ್ವರನ ವಾಣಿ ಇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನುಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನು ಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತುಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನು ನೋಡುತ್ತಿರುವುದೇನು? ಸೈನ್ಯವು ಗಾಬರಿಪಟ್ಟಿದೆ. ಸೈನಿಕರು ಓಡಿಹೋಗುತ್ತಿದ್ದಾರೆ. ಅವರ ಶೂರಸೈನಿಕರು ಸೋತಿದ್ದಾರೆ. ಅವರು ಅವಸರದಿಂದ ಓಡಿಹೋಗುತ್ತಿದ್ದಾರೆ. ಅವರು ಹಿಂದಕ್ಕೆ ತಿರುಗಿ ಸಹ ನೋಡುತ್ತಿಲ್ಲ. ಎಲ್ಲಾ ಕಡೆಗೂ ಭೀತಿ ಆವರಿಸಿಕೊಂಡಿದೆ” ಯೆಹೋವನು ಹೀಗೆಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಹಾ, ನಾನು ಕಂಡದ್ದೇನು? ಅವರು ದಿಗಿಲುಪಟ್ಟು ಹಿಂದಿರುಗಿದ್ದನ್ನು, ಅವರ ಪರಾಕ್ರಮಶಾಲಿಗಳು ಪೆಟ್ಟುತಿಂದಿದ್ದಾರೆ. ಹಿಂದೆ ನೋಡದೆ ಓಡಿಹೋಗುತ್ತಾರೆ, ಏಕೆಂದರೆ ಸುತ್ತಲು ದಿಗಿಲು ಕವಿದಿದೆ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:5
19 ತಿಳಿವುಗಳ ಹೋಲಿಕೆ  

ಶತ್ರುಗಳು ಅವರ ಗುಡಾರಗಳನ್ನೂ ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಗುಡಾರದ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ ತೆಗೆದುಕೊಂಡು ಹೋಗುವರು. ದಿಗಿಲು ನಿಮ್ಮ ಸುತ್ತಮುತ್ತಲು ಆವರಿಸಿದೆ ಎಂದು ಅವರಿಗೆ ಕೂಗಿ ಹೇಳುವರು.


ಊರ ಹೊರಗೆ ಹೋಗುವಂತಿಲ್ಲ, ದಾರಿಯಲ್ಲಿ ನಡೆಯುವಂತಿಲ್ಲ. ಸುತ್ತಮುತ್ತಲೂ ಶತ್ರುವಿನ ಕತ್ತಿ, ಎಲ್ಲೆಲ್ಲೂ ದಿಗಿಲು ಎಂದರೆ ದಿಗಿಲು!”


ಸಂಬಳಕ್ಕಾಗಿ ಈಜಿಪ್ಟ್ ಸೇರಿದ ದಂಡಾಳುಗಳು ನೋಡಲಿಕ್ಕೆ ಅವರು ಕೊಬ್ಬಿದ ಕರುಗಳು. ಆದರೂ ಬೆಂಗೊಟ್ಟು ಓಡಿಹೋಗಿರುವರು ನಿಲ್ಲದೆ, ವಿಪತ್ಕಾಲ, ದಂಡನೆಯ ದಿನ, ಬಂದೊದಗಿದೆ ಅವರಿಗೆ.


ನಿನೆವೆ ಕಟ್ಟೆಯೊಡೆದ ಕೆರೆಯಂತಿದೆ; “ನಿಲ್ಲಿರಿ! ನಿಲ್ಲಿರಿ!” ಎಂಬ ಕೂಗು ಕೇಳುತ್ತಿದೆ; ಆದರೂ ಓಡುತಿಹರು ಜನರೆಲ್ಲರು ಹಿಂದೆ ನೋಡದೆ.


ಹೌದು, ಬಹುರಾಷ್ಟ್ರಗಳು ನಿನ್ನ ಗತಿಗೆ ಬೆಚ್ಚಿಬೆರಗಾಗುವಂತೆ ಮಾಡುವೆನು; ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಳಿಸುವಾಗ ಅವರು ನಿನ್ನ ದುರ್ಗತಿಯನ್ನು ನೆನೆಸಿ ಭಯಭ್ರಾಂತರಾಗುವರು; ನಿನ್ನ ಪತನದಿಂದ ಪ್ರತಿಯೊಬ್ಬನು ತನ್ನ ಪ್ರಾಣಾಪಾಯಕ್ಕೆ ಕ್ಷಣಕ್ಷಣವು ನಡುಗುವನು.”


ನಿನ್ನ ಎಪಿಸ್ ಬಸವ ಬಿದ್ದುಹೋದದ್ದೇನು? ಸರ್ವೇಶ್ವರನೆ ಕೆಡವಲು ಅದು ನಿಲ್ಲಲಾರದೆ ಹೋಯಿತು !


ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.


ಆ ದಿನದಂದು ಈಜಿಪ್ಟಿನವರು ಹೆಂಗಸರಂತೆ ಅಂಜುಬುರುಕರಾಗುವರು; ಸೇನಾಧೀಶ್ವರ ಸರ್ವೇಶ್ವರ ತಮ್ಮನ್ನು ದಂಡಿಸಲು ಕೈಯೆತ್ತುವಾಗ ಅವರು ಭಯಪಟ್ಟು ನಡುಗುವರು.


ಊರ ಹೊರಗೆ ಬಿಟ್ಟಾದ ಮೇಲೆ ಆ ಇಬ್ಬರಲ್ಲಿ ಒಬ್ಬನು, “ಪ್ರಾಣ ಉಳಿಸಿಕೊಳ್ಳಬೇಕಾದರೆ ಓಡಬೇಕು, ಹಿಂದಕ್ಕೆ ನೋಡಬಾರದು; ಬಯಲುಸೀಮೆಯಲ್ಲೂ ನಿಲ್ಲದೆ ಗುಡ್ಡಗಾಡಿಗೆ ಓಡಬೇಕು, ಇಲ್ಲವಾದರೆ ನಾಶವಾದೀತು!” ಎಂದು ಎಚ್ಚರಿಸಿದನು.


ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


ಭಯಭ್ರಾಂತರಾಗುವರು ಅವರೆಲ್ಲರು; ಆಕ್ರಮಿಸುವುವು ಅವರನ್ನು ಯಾತನೆ ವೇದನೆಗಳು. ಸಂಕಟಪಡುವರವರು ಹೆರುವ ಹೆಂಗಸಿನಂತೆ; ಒಬ್ಬರನ್ನೊಬ್ಬರು ನೋಡುವರು ದಿಗ್ಭ್ರಾಂತರಾದವರಂತೆ; ಅವರ ಮುಖಗಳು ಕೆಂಪೇರುವುವು ಬೆಂಕಿಯಂತೆ.


ಆದರೆ, ಕೆತ್ತಿದ ವಿಗ್ರಹಗಳಲ್ಲಿ ಭರವಸೆಯಿಡುವವರು : “ನೀವೇ ನಮ್ಮ ದೇವರು"ಗಳು ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು; ಅವಮಾನಕ್ಕೆ ಈಡಾಗುವರು ಹಿಂಜರಿದು.


ಸೇನಾಧೀಶ್ವರ ಸರ್ವೇಶ್ವರನೆಂಬ ದೇವರು ಹೇಳುವುದನ್ನು ಕೇಳು - ನಿನ್ನ ನೆರೆಹೊರೆಯವರೆಲ್ಲರು ನಿನಗೆ ಭಯಾಸ್ಪದವಾಗುವಂತೆ ಮಾಡುವೆನು. ನಿನ್ನವರಲ್ಲಿ ಪ್ರತಿಯೊಬ್ಬನನ್ನು ನಿಂತಲ್ಲಿಂದಲೆ ಅಟ್ಟಲಾಗುವುದು. ಚದರಿಹೋದವರನ್ನು ಕೂಡಿಸಲು ಯಾರೂ ಇಲ್ಲದಂತಾಗುವುದು.


ಟಗರು, ಕುರಿ, ಹೋತ, ಹೋರಿ, ಅಂತು ಬಾಷಾನಿನ ಕೊಬ್ಬಿದ ಪಶುಗಳು, ಅಂದರೆ ಬಲಿಷ್ಠರು, ಭೂಪತಿಗಳು ಇವರ ಮಾಂಸ ಹಾಗೂ ರಕ್ತ ನಿಮಗೆ ಸಿಕ್ಕುವುವು.


ಸೂರೆ ಮಾಡಿರಿ ಅದರ ಬೆಳ್ಳಿಯನು, ಕೊಳ್ಳೆಹೊಡೆಯಿರಿ ಬಂಗಾರವನು. ಮಿತಿಯಿಲ್ಲ ಅದರ ಧನಕನಕಕೆ, ಎಲ್ಲೆಯಿಲ್ಲ ಅದರ ಅಮೂಲ್ಯ ಆಸ್ತಿಪಾಸ್ತಿಗೆ.


ಸರ್ವೇಶ್ವರಸ್ವಾಮಿಯ ಮಹಾದಿನ ಹತ್ತಿರವಾಯಿತು; ಸಮೀಪಿಸಿತು. ಅದು ಬಹು ತ್ವರೆಯಾಗಿ ಬರುತ್ತಿದೆ; ಅದು ಕಠೋರವಾದ ದಿನ, ಆ ದಿನದ ಸುದ್ದಿ ಕಹಿಯಾದುದು, ಎಂಥಾ ಶೂರರನ್ನೂ ಕೂಡ ಘೋರವಾಗಿ ಗೋಳಾಡಿಸುವಂಥದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು