ಯೆರೆಮೀಯ 47:2 - ಕನ್ನಡ ಸತ್ಯವೇದವು C.L. Bible (BSI)2 “ಸರ್ವೇಶ್ವರನ ವಾರ್ತೆ ಇದು: ಇಗೋ, ಬಡಗಲಿಂದ ಪ್ರವಾಹ ಹೊರಡುವುದು ತುಂಬಿತುಳುಕುವ ತೊರೆಯಾಗಿ ಬರುವುದು. ಆಕ್ರಮಿಸುವುದು ನಾಡನ್ನು, ಅದರಲ್ಲಿರುವ ಸಮಸ್ತವನ್ನು. ನಗರವನ್ನು, ಅದರ ನಿವಾಸಿಗಳನ್ನು. ಆಗ ನಾಡಿನವರೆಲ್ಲರೂ ಮೊರೆಯಿಡುವರು ದೇಶದವರೆಲ್ಲರು ಗೋಳಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನು ಇಂತೆನ್ನುತ್ತಾನೆ, “ಇಗೋ, ಪ್ರವಾಹವು ಉತ್ತರದಿಕ್ಕಿನಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ ಮತ್ತು ಪಟ್ಟಣದ ನಿವಾಸಿಗಳನ್ನೂ ಆಕ್ರಮಿಸುವುದು. ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನು ಇಂತೆನ್ನುತ್ತಾನೆ - ಇಗೋ, ಪ್ರವಾಹವು ಬಡಗಲಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಪಟ್ಟಣದ ನಿವಾಸಿಗಳನ್ನೂ ಆಕ್ರವಿುಸುವದು; ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನು ಹೀಗೆನ್ನುತ್ತಾನೆ: “ನೋಡಿರಿ, ಉತ್ತರದಲ್ಲಿ ಶತ್ರು ಸೈನಿಕರು ಒಟ್ಟುಗೂಡುತ್ತಿದ್ದಾರೆ. ದಡಮೀರಿ ಭೋರ್ಗರೆಯುವ ನದಿಯಂತೆ ಅವರು ಬರುವರು. ಅವರು ಪ್ರವಾಹದಂತೆ ಇಡೀ ದೇಶವನ್ನು ವ್ಯಾಪಿಸುವರು. ಅವರು ಪಟ್ಟಣಗಳನ್ನೂ ಅಲ್ಲಿ ವಾಸಿಸುವ ಜನರನ್ನೂ ಮುತ್ತುವರು. ಆ ದೇಶಗಳಲ್ಲಿ ವಾಸಮಾಡುವ ಎಲ್ಲರೂ ಸಹಾಯಕ್ಕಾಗಿ ಗೋಳಿಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪ್ರವಾಹಗಳು ಉತ್ತರದಿಂದ ಬರುತ್ತವೆ, ಅದು ತುಂಬಿ ತುಳುಕುವ ಪ್ರಳಯವಾಗುವುದು; ದೇಶವನ್ನೂ ಅದರಲ್ಲಿರುವ ಸಮಸ್ತ ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ಆಕ್ರಮಿಸುವುವು; ಆಗ ಮನುಷ್ಯರು ಕೂಗುವರು; ದೇಶದ ನಿವಾಸಿಗಳೆಲ್ಲರು ಗೋಳಾಡುವರು. ಅಧ್ಯಾಯವನ್ನು ನೋಡಿ |