Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 47:7 - ಕನ್ನಡ ಸತ್ಯವೇದವು C.L. Bible (BSI)

7 ಆ ಖಡ್ಗ ವಿಶ್ರಾಂತಿಗೊಳ್ಳುವುದು ಹೇಗೆ? ಅದಕ್ಕೆ ಸರ್ವೇಶ್ವರನೇ ಆಜ್ಞಾಪಿಸಿದ್ದಾನಲ್ಲವೇ? ಅಷ್ಕೆಲೋನಿನ ಹಾಗು ಕರಾವಳಿಯವರೆಗೆ ಅದಕ್ಕೆ ಕೆಲಸ ವಿಧಿಸಿದ್ದಾನಲ್ಲವೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಖಡ್ಗವು ವಿಶ್ರಾಂತಿಗೊಳ್ಳುವುದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೆ ಅದನ್ನು ನೇಮಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಖಡ್ಗವು ವಿಶ್ರಾಂತಿಗೊಳ್ಳುವದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೇ ಅದನ್ನು ನೇವಿುಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಯೆಹೋವನ ಖಡ್ಗವು ವಿಶ್ರಾಂತಿ ಪಡೆಯುವುದು ಹೇಗೆ ಸಾಧ್ಯ? ಯೆಹೋವನು ಅದಕ್ಕೆ ಒಂದು ಆಜ್ಞೆಯನ್ನು ಕೊಟ್ಟಿದ್ದಾನೆ. ಅಷ್ಕೆಲೋನ್ ನಗರದ ಮೇಲೆ ಮತ್ತು ಕರಾವಳಿಯ ಮೇಲೆ ಧಾಳಿ ಮಾಡಬೇಕೆಂದು ಯೆಹೋವನು ಅದಕ್ಕೆ ಆಜ್ಞೆ ವಿಧಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದು ಹೇಗೆ ಸುಮ್ಮನಿರುವುದು? ಅಷ್ಕೆಲೋನಿಗೆ ವಿರೋಧವಾಗಿ ಮತ್ತು ಸಮುದ್ರ ತೀರಕ್ಕೆ ವಿರೋಧವಾಗಿ ಯೆಹೋವ ದೇವರೇ ಅದಕ್ಕೆ ಆಜ್ಞಾಪಿಸಿದ್ದಾರಲ್ಲಾ? ಅಲ್ಲಿ ಅದನ್ನು ನೇಮಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 47:7
15 ತಿಳಿವುಗಳ ಹೋಲಿಕೆ  

ಸರ್ವೇಶ್ವರಸ್ವಾಮಿಯಲ್ಲಿ ಭಯಭಕ್ತಿಯಿಂದಿರುವುದು ಸುಜ್ಞಾನ. ಇದು ಆ ಸ್ವಾಮಿಯ ವಾಣಿ; ಪಟ್ಟಣಕ್ಕೆ ನೀಡುವ ಎಚ್ಚರಿಕೆಯ ಕರೆ:


“ ‘ಖಡ್ಗವೇ, ಆ ನಾಡನ್ನು ಹೊಕ್ಕುಹೋಗು’ ಎಂದು ಆಜ್ಞಾಪಿಸಿ ನಾನು ಅದನ್ನು ಆ ನಾಡಿಗೆ ತಂದು, ಜನ ಹಾಗು ಜಾನುವಾರುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ


ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.


ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು, ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು;


ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತು ಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳು ದಿಬ್ಬಗಳನ್ನಾಗಿಸಿದೆ, ಆದರೆ ಸಾಧ್ಯವಾಯಿತಿದು ನನ್ನಿಂದಲೇ, ನಿನಗಿದು ತಿಳಿಯದೆಹೋಯಿತೆ?


ಆಯ್ಕೆಯಾದವರಿಗೆ ಅಪ್ಪಣೆಮಾಡಿದ್ದೇನೆ: ಹೌದು, ಹೆಮ್ಮೆಯಿಂದ ಮೆರೆಯುವ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆನೀಡಿದ್ದೇನೆ.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು, ಶಿಶುಗಳನ್ನು ಹಾಗು ಎತ್ತು, ಕುರಿ, ಕತ್ತೆ, ಒಂಟೆ ಇವುಗಳನ್ನೂ ಉಳಿಸದೆ ಕೊಂದುಹಾಕು ಎಂದು ಹೇಳುತ್ತಾರೆ ಸೇನಾಧೀಶ್ವರರಾದ ಸರ್ವೇಶ್ವರ,” ಎಂದನು.


ಸರ್ವೇಶ್ವರನು ನೇಮಿಸಿದ ಕೆಲಸವನ್ನು ನಿರ್ವಹಿಸುವುದರಲ್ಲಿ ಆಲಸ್ಯನಾಗಿರುವವನು ಶಾಪಗ್ರಸ್ತನು. ತನ್ನ ಕತ್ತಿ ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ!


ಕತ್ತಿಯನ್ನು ಒರೆಗೆ ಸೇರಿಸು. ನೀನು ಹುಟ್ಟಿದ ಸ್ಥಳದಲ್ಲಿ, ನಿನ್ನ ಜನ್ಮಭೂಮಿಯಲ್ಲಿ, ನಿನಗೆ ನ್ಯಾಯತೀರಿಸುವೆನು.


“ನರಪುತ್ರನೇ, ಪ್ರವಾದಿಸು ಸರ್ವೇಶ್ವರ ಹೀಗೆನ್ನುತ್ತಾರೆಂದು:


ನರಪುತ್ರನೇ, ಪ್ರವಾದಿಸು, ಚಪ್ಪಾಳೆ ಬಡಿ, ಹತಿಸುವುದಾ ಖಡ್ಗ ಇಮ್ಮಡಿ ಮುಮ್ಮಡಿ. ಪ್ರಜೆಯನ್ನು ಸಂಹರಿಸುವುದಾ ಖಡ್ಗ ಅಧಿಪತಿಯನ್ನೇ ಸುತ್ತಲು ಬೀಸಿ ಹತಿಸುವುದಾ ಖಡ್ಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು