Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:11 - ಕನ್ನಡ ಸತ್ಯವೇದವು C.L. Bible (BSI)

11 ಮೋವಾಬು ಚಿಕ್ಕತನದಿಂದಲೂ ನೆಮ್ಮದಿಯಾಗಿದೆ. ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ. ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ. ಅದು ಎಂದೂ ಸೆರೆಹೋಗಲಿಲ್ಲ. ಆದಕಾರಣ ಅದರ ರುಚಿ ಅದರಲ್ಲಿದೆ. ಅದರ ವಾಸನೆ ಮಾರ್ಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೋವಾಬು ಚಿಕ್ಕತನದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಮೋವಾಬಿಗೆ ಕಷ್ಟವೆಂಬುದೇ ಗೊತ್ತಿಲ್ಲ. ಮೋವಾಬ್ ಮಡ್ಡಿ ತಂಗಿಸಲು ಬಿಟ್ಟ ದ್ರಾಕ್ಷಾರಸದಂತಿದೆ. ಅದನ್ನು ಒಂದು ಪಾತ್ರೆಯಿಂದ ಮತ್ತೊಂದು ಪಾತ್ರೆಗೆ ಒಮ್ಮೆಯೂ ಸುರಿದಿಲ್ಲ. ಅದನ್ನು ಒಮ್ಮೆಯೂ ಸೆರೆಹಿಡಿದಿಲ್ಲ. ಆದ್ದರಿಂದ ಅದರ ರುಚಿ ಮೊದಲಿದ್ದ ಹಾಗೆ ಇದೆ. ಅದರ ವಾಸನೆಯಲ್ಲಿ ಬದಲಾವಣೆಯಾಗಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು; ಅದು ತನ್ನ ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತೆ ಸುಮ್ಮನೆ ಇತ್ತು; ಒಂದು ಪಾತ್ರೆಯೊಳಗಿಂದ ಮತ್ತೊಂದು ಪಾತ್ರೆಗೆ ಹೊಯ್ಯಲಾಗುವುದಿಲ್ಲ; ಸೆರೆಗೆ ಹೋಗಲಿಲ್ಲ; ಆದ್ದರಿಂದ ಅದರ ರುಚಿ ಅದರಲ್ಲಿ ಉಂಟು; ಅದರ ವಾಸನೆ ಬೇರೆ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:11
16 ತಿಳಿವುಗಳ ಹೋಲಿಕೆ  

“ಆಗ ದೀಪವನ್ನು ಹಿಡಿದುಕೊಂಡು ಜೆರುಸಲೇಮನ್ನೆಲ್ಲಾ ಹುಡುಕಿಬಿಡುವೆನು. ‘ಸರ್ವೇಶ್ವರ ಮೇಲನ್ನಾಗಲಿ, ಕೇಡನ್ನಾಗಲಿ ಏನನ್ನೂ ಮಾಡುವುದಿಲ್ಲ’ ಎಂದುಕೊಳ್ಳುವ ಮದ್ಯದ ಮಡ್ಡಿಯಂಥ ಜಡ ಮನಸ್ಕರನ್ನು ದಂಡಿಸುವೆನು.


ನೆಮ್ಮದಿಯಿಂದ ಬಾಳುವ ರಾಷ್ಟ್ರಗಳ ಮೇಲೆ ಬಹಳ ಸಿಟ್ಟುಗೊಂಡಿದ್ದೇನೆ. ಏಕೆಂದರೆ, ನಾನು ಜೆರುಸಲೇಮಿನ ವಿರುದ್ಧ ಕಿಂಚಿತ್ತೇ ಕೋಪಗೊಂಡಿದ್ದಾಗ ಅವರು ಕೇಡಿಗೆ ಕೇಡು ಕೂಡಿಸಿಬಿಟ್ಟರು.


(ಸರ್ವೇಶ್ವರ, ಕೊಳ್ಳೆಗಾರರು ಸುಲಿಗೆಮಾಡಿದ್ದನ್ನೂ ಮುರಿದುಹಾಕಿದ ದ್ರಾಕ್ಷಿಯ ತೋಟಗಳನ್ನೂ ಸರಿಪಡಿಸಲಿದ್ದಾರೆ. ಯಕೋಬಿನ ಮಹತ್ವವನ್ನು ಹಾಗೂ ಇಸ್ರಯೇಲಿನ ಮಹಿಮೆಯನ್ನು ಈಗ ಮತ್ತೆ ಸ್ಥಾಪಿಸಲಿದ್ದಾರೆ).


ಮೋವಾಬ್ಯರಿಗೆ ಬಹಳ ಸೊಕ್ಕೇರಿದೆ! ಅವರ ಹೆಮ್ಮೆಯ ಸುದ್ದಿ, ಡಂಭಾಚಾರ, ಅಹಂಕಾರ, ಗರ್ವ, ಸ್ವಪ್ರತಿಷ್ಠೆ ಇವುಗಳ ಸಮಾಚಾರ ನಮ್ಮ ಕಿವಿಗೆ ಬಿದ್ದಿದೆ. -


ಬೆಟ್ಟ ಬರಿದಾಗಿ ಸಂಪೂರ್ಣ ಸುಲಿಗೆಯಾಗುವುದು ಜಗವು, ಸರ್ವೇಶ್ವರ ಸ್ವಾಮಿಯ ನುಡಿಗಳಿವು:


ಯೆಹೂದ ಜನತೆ ಪೇಳ್ವರವರಿಗೆ : “ನಮ್ಮ ಕಿವಿಗೆ ಬಿದ್ದಿದೆ ಮೋವಾಬ್ಯರ ಮದ, ತಿಳಿದಿದೆ ನಮಗೆ ಅವರ ದುರಹಂಕಾರ, ಅವರ ಒಣ ಡಂಭಾಚಾರ, ಗರ್ವೋದ್ರೇಕ".


ಬೇಸತ್ತಿದೆ ಮನ ಗರ್ವಿಗಳ ನಿಂದೆಯಿಂದ I ಸುಖಭೋಗಿಗಳು ಮಾಡುವ ಅಪಹಾಸ್ಯದಿಂದ II


ಆದಿಯಿಂದಾಳುವ ದೇವನು ಅವರ ಸೊಕ್ಕಡಗಿಸದೆ ಬಿಡನು I ಪರಿವರ್ತಿಸಲಾಗದು ದೇವಭಯವಿಲ್ಲದವರ ಹೃದಯವನು II


ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ನನ್ನನ್ನು ಮುರಿದು ತಿಂದುಬಿಟ್ಟ ನನ್ನನ್ನು ಕುಡಿದು ಬಿಸಾಡಿದ ಪಾತ್ರೆಯನ್ನಾಗಿಸಿಬಿಟ್ಟ. ಘಟಸರ್ಪದ ಹಾಗೆ ನನ್ನನ್ನು ನುಂಗಿದ ನನ್ನ ರುಚಿಪದಾರ್ಥಗಳಿಂದ ಹೊಟ್ಟೆ ತುಂಬಿಸಿಕೊಂಡ ಮಿಕ್ಕಿದುದನ್ನೆಲ್ಲ ತೊಳೆದು ಎಸೆದುಬಿಟ್ಟ.


ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು.


ಮೂಢರು ತಮ್ಮ ಉದಾಸೀನತೆಯಿಂದಲೆ ಹತರಾಗುವರು. ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೆ ನಾಶವಾಗುವರು.


ನಿನೆವೆ ಬರಿದಾಗಿದೆ; ಬಟ್ಟಬರಿದಾಗಿ ಪಾಳುಬಿದ್ದಿದೆ; ಎದೆಕರಗಿದೆ, ಮೊಣಕಾಲುಗಳು ಅದರುತ್ತಿವೆ. ಎಲ್ಲರ ಸೊಂಟಗಳು ಮುರಿದಂತಾಗಿವೆ, ಅವರ ಮುಖಗಳು ಬಾಡಿಹೋಗಿವೆ.


ನೀನು ನೆಮ್ಮದಿಯಾಗಿದ್ದ ಕಾಲದಲ್ಲಿ ನಿನ್ನೊಡನೆ ಮಾತಾಡಿದೆ ಆದರೆ ನೀನು, “ಕೇಳಲೊಲ್ಲೆ” ಎಂದು ಹೇಳಿಬಿಟ್ಟೆ. ನನ್ನ ಮಾತಿಗೆ ಕಿವಿಗೊಡದಿರುವುದು ನಿನಗೆ ಬಾಲ್ಯದಿಂದಲೆ ವಾಡಿಕೆ !


ಹೀಗಿರಲು ಸರ್ವೇಶ್ವರ ಇಂತೆನ್ನುತ್ತಾರೆ: “ಇಗೋ, ದಿನಗಳು ಬರಲಿವೆ. ಆಗ ನಾನು ‘ಹೊಯ್ಯತಕ್ಕವರನ್ನು’ ಅವರ ಬಳಿಗೆ ಕಳುಹಿಸುವೆನು. ಅವರು ಅದನ್ನು ಹೊಯ್ದುಬಿಡುವರು. ಪಾತ್ರೆಗಳನ್ನು ಬರಿದುಮಾಡುವರು. ಗಡಿಗೆಗಳನ್ನು ಒಡೆದುಹಾಕುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು