Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:13 - ಕನ್ನಡ ಸತ್ಯವೇದವು C.L. Bible (BSI)

13 ಇಸ್ರಯೇಲ್ ವಂಶದವರು ನಂಬಿಕೆ ಇಟ್ಟಿದ್ದ ಬೇತೇಲ್ ಕ್ಷೇತ್ರವನ್ನು ಕುರಿತು ಆಶಾಭಂಗಪಟ್ಟಂತೆ ಆಗ ಮೋವಾಬ್ಯರು ತಮ್ಮ ಕೆಮೋಷ್ ದೇವತೆಯನ್ನು ಕುರಿತು ಆಶಾಭಂಗಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಇಸ್ರಾಯೇಲ್ ವಂಶದವರು ತಮಗೆ ಭರವಸವಾದ ಬೇತೇಲಿನಿಂದ ಆಶಾಭಂಗಪಟ್ಟಂತೆ ಮೋವಾಬ್ಯರು ಕೆಮೋಷಿನಿಂದ ಆಶಾಭಂಗಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಇಸ್ರಾಯೇಲ್ ವಂಶದವರು ತಮಗೆ ಭರವಸವಾದ ಬೇತೇಲಿನಿಂದ ಆಶಾಭಂಗಪಟ್ಟಂತೆ ಮೋವಾಬ್ಯರು ಕೆಮೋಷಿನಿಂದ ಆಶಾಭಂಗಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಮೋವಾಬಿನ ಜನರು ತಮ್ಮ ಸುಳ್ಳುದೇವರಾದ ಕೆಮೋಷಿಗಾಗಿ ನಾಚಿಕೆಪಡುವರು. ಇಸ್ರೇಲಿನ ಜನರು ಬೇತೇಲಿನಲ್ಲಿ ಆ ಸುಳ್ಳುದೇವರನ್ನು ನಂಬಿಕೊಂಡಿದ್ದರು. ಆದರೆ ಆ ಸುಳ್ಳುದೇವರು ಅವರ ಸಹಾಯಕ್ಕೆ ಬಾರದೆ ಇದ್ದಾಗ ಆ ಇಸ್ರೇಲರು ನಾಚಿಕೆಗೆ ಈಡಾದರು. ಮೋವಾಬ್ ಸಹ ಅದೇ ಸ್ಥಿತಿಯಲ್ಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಇಸ್ರಾಯೇಲಿನ ಮನೆಯವರು ತಾವು ನಂಬಿಕೊಂಡಿದ್ದ ಬೇತೇಲಿನ ವಿಷಯ ಹೇಗೆ ನಾಚಿಕೆಪಟ್ಟರೋ, ಹಾಗೆಯೇ ಮೋವಾಬು ಕೆಮೋಷನ ವಿಷಯ ನಾಚಿಕೆಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:13
21 ತಿಳಿವುಗಳ ಹೋಲಿಕೆ  

ಅದು ಹೇಗೆ ನುಚ್ಚುನೂರಾಗಿದೆ ! ಆ ಜನರು ಕಿರಿಚಿಕೊಳ್ಳುತ್ತಿದ್ದಾರೆ ! ಇಗೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ. ನೆರೆಹೊರೆಯವರು ಅಣಕಿಸುವುದಕ್ಕೂ ಬೆಚ್ಚಿಬೀಳುವುದಕ್ಕೂ ಆಸ್ಪದ ಆಗಿದೆ.” ಸರ್ವೇಶ್ವರ ಹೀಗೆನ್ನುತ್ತಾರೆ :


ಮೂರ್ತಿಗಳನು ಮಾಡುವವರೆಲ್ಲರು ಈಡಾಗುವರು ನಾಚಿಕೆಗೆ ಮಾನಭಂಗಪಟ್ಟು ಒಟ್ಟಿಗೆ ಮುಳುಗುವರವರು ಅವಮಾನದೊಳಗೆ.


ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವತಂತ್ರಿಸಿಕೊಳ್ಳುವುದಿಲ್ಲವೇ? ಹಾಗೆಯೇ ನಮ್ಮ ದೇವರಾದ ಸರ್ವೇಶ್ವರ ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವತಂತ್ರಿಸಿಕೊಳ್ಳುವುದು ನ್ಯಾಯವಾಗಿದೆ.


ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷ್ ದೇವತೆಯ ಭಕ್ತರು ನಾಶವಾದರು. ನಿಮ್ಮ ಗಂಡುಹೆಣ್ಣು ಮಕ್ಕಳು ಗಡೀಪಾರಾಗಿ ಸೆರೆಯಾದರು.


“ಮೋವಾಬೇ, ನಿನ್ನ ಸಾಧನೆಗಳಲ್ಲೇ, ಧನರಾಶಿಗಳಲ್ಲೇ ಭರವಸೆಯಿಟ್ಟೆ. ಆದುದರಿಂದ ನೀನು ಇದೀಗಲೆ ಶತ್ರುಗಳ ಕೈವಶವಾಗುವೆ. ಕೆಮೋಷ್ ಎಂಬ ನಿನ್ನ ದೇವತೆಯೂ ಅದರ ಭಕ್ತ ಯಾಜಕರೂ ಹಾಗೂ ರಾಜ್ಯಾಧಿಕಾರಿಗಳು ಸೆರೆಗೆ ಹೋಗುವರು ಒಟ್ಟಿಗೆ.


“ಅಳಿದುಳಿದ ಅನ್ಯಜನರೇ, ನೆರೆದು ಬನ್ನಿ, ಒಟ್ಟಿಗೆ ನನ್ನ ಬಳಿಗೆ ಬನ್ನಿ. ತಮ್ಮ ಮರದ ಬೊಂಬೆಯನು ಹೊತ್ತು ತಿರುಗುವವರು ರಕ್ಷಿಸಲಾಗದ ದೇವತೆಗೆ ಮೊರೆಯಿಡುವ ಬುದ್ಧಿಹೀನರು.


ವ್ಯರ್ಥ, ಬೆಟ್ಟಗುಡ್ಡಗಳಿಗೆ ಮೋವಾಬ್ಯರು ತೀರ್ಥಯಾತ್ರೆಗೈದರೂ, ವ್ಯರ್ಥ, ಪ್ರಾರ್ಥನೆ ಮಾಡಲು ಅವರು ಗರ್ಭಗುಡಿಗೆ ಹೋದರೂ.


ಆ ದಿನ ಬಂದಾಗ ಮಾನವರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿ ಹೆಗ್ಗಣಗಳ ಬಿಲಗಳಲ್ಲಿ ಬಿಸಾಡುವರು.


ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು,” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಕೊಲ್ಲಿಸಿದನು.


ಅವನು ಜೆರುಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಏರ್ಪಡಿಸಿದನು.


ಇದಲ್ಲದೆ, ಅವರು ನಿನಗೆ, ‘ಸೊಲೊಮೋನನೂ ಅವನ ಮನೆಯವರೂ ನನ್ನನ್ನು ಬಿಟ್ಟು ಸಿದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ಕೆಮೋಷ್, ಅಮ್ಮೋನಿಯರ ದೇವತೆಯಾದ ಮಿಲ್ಕೋಮ್ ಇವುಗಳನ್ನು ಆರಾಧಿಸುತ್ತಿದ್ದಾರೆ. ಅವರ ತಂದೆ ದಾವೀದನು ನನ್ನ ನಿಯಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡೆಯದೆಹೋದದ್ದೂ ಇದಕ್ಕೆ ಕಾರಣ.


ಹೀಗಿರಲು ಸರ್ವೇಶ್ವರ ಇಂತೆನ್ನುತ್ತಾರೆ: “ಇಗೋ, ದಿನಗಳು ಬರಲಿವೆ. ಆಗ ನಾನು ‘ಹೊಯ್ಯತಕ್ಕವರನ್ನು’ ಅವರ ಬಳಿಗೆ ಕಳುಹಿಸುವೆನು. ಅವರು ಅದನ್ನು ಹೊಯ್ದುಬಿಡುವರು. ಪಾತ್ರೆಗಳನ್ನು ಬರಿದುಮಾಡುವರು. ಗಡಿಗೆಗಳನ್ನು ಒಡೆದುಹಾಕುವರು.


ಆಗ ಸರ್ವೇಶ್ವರ ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ, “ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?” ಎಂದು ಹೇಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು