ಯೆರೆಮೀಯ 48:15 - ಕನ್ನಡ ಸತ್ಯವೇದವು C.L. Bible (BSI)15 ಮೋವಾಬು ಹಾಳಾಗಿದೆ ಸುಟ್ಟುಹೋದ ಅದರ ನಗರಗಳಿಂದ ಹೊಗೆ ಎದ್ದಿದೆ. ಅದರ ಸರ್ವಶ್ರೇಷ್ಟ ಯುವಕರು ಹೋಗಿದ್ದಾರೆ ಹತರಾಗುವುದಕ್ಕೆ, ಸರ್ವಶಕ್ತ ಸರ್ವೇಶ್ವರನೆಂಬ ನಾಮವುಳ್ಳ ರಾಜಾಧಿರಾಜನ ನುಡಿಯಂತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮೋವಾಬು ಹಾಳಾಗಿದೆ; ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದ್ದೆ. ಅದರಲ್ಲಿನ ಶ್ರೇಷ್ಠ ಯುವಕರು ಹತರಾಗುವುದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದೆ; ಅದರ ಯುವಕ ಶ್ರೇಷ್ಠರು ಹತರಾಗುವದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ವೈರಿಯು ಮೋವಾಬಿನ ಮೇಲೆ ಧಾಳಿ ಮಾಡುವನು. ವೈರಿಯು ಆ ಪಟ್ಟಣಗಳಲ್ಲಿ ಪ್ರವೇಶಮಾಡಿ ಅವುಗಳ ಧ್ವಂಸ ಮಾಡುವನು. ಅವಳ ಅತ್ಯುತ್ತಮ ತರುಣರು ಕೊಲೆಗೀಡಾಗುವರು.” ಈ ಸಂದೇಶವು ರಾಜನಿಂದ ಬಂದಿದೆ. ಆ ರಾಜನ ಹೆಸರು ಸರ್ವಶಕ್ತನಾದ ಯೆಹೋವನು ಎಂದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಮೋವಾಬು ಸೂರೆಯಾಯಿತು. ಅದರ ಪಟ್ಟಣಗಳು ಏರಿ ಹೋದವು, ಅದರ ಶ್ರೇಷ್ಠ ಯೌವನಸ್ಥರು ಹತರಾಗುವುದಕ್ಕೆ ಹೋಗಿದ್ದಾರೆ,” ಎಂದು ಸರ್ವಶಕ್ತ ಯೆಹೋವ ಎಂಬ ಹೆಸರುಳ್ಳ ರಾಜಾಧಿರಾಜರ ನುಡಿ. ಅಧ್ಯಾಯವನ್ನು ನೋಡಿ |