Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:16 - ಕನ್ನಡ ಸತ್ಯವೇದವು C.L. Bible (BSI)

16 ಮೋವಾಬಿಗೆ ದುರ್ಗತಿ ಸಮೀಪಿಸಿದೆ ಅದಕ್ಕೆ ವಿಪತ್ತು ಬೇಗ ಬರಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೋವಾಬಿಗೆ ದುರ್ಗತಿ ಸಮೀಪಿಸಿದೆ, ವಿಪತ್ತು ಬೇಗ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮೋವಾಬಿಗೆ ದುರ್ಗತಿ ಸಮೀಪಿಸಿದೆ, ವಿಪತ್ತು ಬೇಗ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಮೋವಾಬಿನ ಅಂತ್ಯ ಸಮೀಪಿಸುತ್ತಿದೆ. ಬೇಗನೆ ಮೋವಾಬನ್ನು ಧ್ವಂಸಗೊಳಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಮೋವಾಬಿಗೆ ಆಪತ್ತು ಬರುವುದಕ್ಕೆ ಸಮೀಪವಾಯಿತು. ಅದರ ಕೇಡು ಬಹು ತ್ವರೆಪಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:16
8 ತಿಳಿವುಗಳ ಹೋಲಿಕೆ  

ಅದರ ಅರಮನೆಗಳಲ್ಲಿ ನರಿಗಳು, ಮೋಜಿನ ಮಹಲುಗಳಲ್ಲಿ ತೋಳಗಳು ಕೂಗಾಡುವುವು. ಬಾಬಿಲೋನಿಗೆ ಕಾಲ ಬಂದಿದೆ. ಅದರ ದಿನಗಳು ಮುಗಿಯುತ್ತಿವೆ.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ಆದಕಾರಣ ನೀನು ಅವರಿಗೆ ಹೀಗೆ ಹೇಳು: ಸರ್ವೇಶ್ವರನಾದ ದೇವರು ಹೇಳುವುದನ್ನು ಗಮನಿಸಿ: ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ಸಾವಕಾಶವಾಗದು; ನಾನಾಡುವ ಮಾತು ನೆರವೇರುವುದು ಖಂಡಿತ; ಇದು ಸರ್ವೇಶ್ವರನಾದ ದೇವರ ನುಡಿ.”


ಅವರಿಗೆ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಈ ಗಾದೆಯನ್ನು ನಿಲ್ಲಿಸಿಬಿಡುವೆನು; ಅದು ಇಸ್ರಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಆ ಮಾತನ್ನು ಕೇಳಿರಿ: ಕ್ಲುಪ್ತಕಾಲ ಹತ್ತಿರಬಂದಿದೆ. ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವ ಕಾಲ ಸಮೀಪಿಸಿದೆ.


ಆಗ ಸ್ವಾಮಿ ನನಗೆ, “ಸರಿಯಾಗಿ ನೋಡಿದೆ; ನನ್ನ ಮಾತನ್ನು ನೆರವೇರಿಸುವುದಕ್ಕೆ ಎಚ್ಚರಗೊಂಡಿದ್ದೇನೆಂದು ತಿಳಿದುಕೊ” ಎಂಬುದಾಗಿ ಹೇಳಿದರು.


ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ!


ಉರುಳಿನತ್ತ ಹಾರುವ ಹಕ್ಕಿಯಂತೆ, ಕರುಳನ್ನು ತಿವಿಯುವ ಬಾಣದಂತೆ, ತನ್ನ ಪ್ರಾಣಕ್ಕಿರುವ ಅಪಾಯವನ್ನು ತಿಳಿಯದೆ, ಅವಳನ್ನು ತಡಮಾಡದೆ ಹಿಂಬಾಲಿಸುತ್ತಾನೆ ಆತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು