Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:26 - ಕನ್ನಡ ಸತ್ಯವೇದವು C.L. Bible (BSI)

26 “ಮೋವಾಬಿಗೆ ಅಮಲೇರುವಷ್ಟು ಕುಡಿಸಿರಿ. ಅದು ಸರ್ವೇಶ್ವರನನ್ನೆ ತಿರಸ್ಕರಿಸಿ ಉಬ್ಬಿಹೋಗಿದೆ. ತನ್ನ ವಾಂತಿಯಲ್ಲೆ ಬಿದ್ದು ಗೇಲಿ ಪರಿಹಾಸ್ಯಕ್ಕೆ ಗುರಿಯಾಗಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಮೋವಾಬಿಗೆ ತಲೆಗೇರಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಗೇಲಿಗೆ ಗುರಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ತಾನು ಯೆಹೋವನಿಗಿಂತ ಬಹಳ ಮುಖ್ಯವಾದವನೆಂದು ಮೋವಾಬು ಭಾವಿಸಿತ್ತು. ಕುಡಿದು ಮದವೇರಿದವನಂತೆ ಆಗುವವರೆಗೆ ಮೋವಾಬನ್ನು ದಂಡಿಸಿರಿ. ಮೋವಾಬು ತನ್ನ ವಾಂತಿಯಲ್ಲಿ ಬಿದ್ದು ಹೊರಳಾಡುವದು. ಜನರು ಮೋವಾಬನ್ನು ತಮಾಷೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಅದನ್ನು ನೀವು ಅಮಲೇರಿಸಿರಿ; ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ವಾಂತಿ ಮಾಡಿದ್ದರಲ್ಲಿ ಹೊರಳಾಡುವುದು; ಅದೇ ಹಾಸ್ಯಕ್ಕಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:26
37 ತಿಳಿವುಗಳ ಹೋಲಿಕೆ  

ಅವರು ಹೊಟ್ಟೆಬಾಕರೇ ಸರಿ. ಅವರಿಗೆ ಔತಣವನ್ನು ಸಿದ್ಧಮಾಡುವೆನು. ತಿಂದು ಸಂಭ್ರಮಪಡುವಂತೆ ಮಾಡುವೆನು. ತಲೆಗೇರುವತನಕ ಕುಡಿಸಿ ಎಂದಿಗೂ ಎಚ್ಚರಗೊಳ್ಳದೆ ಚಿರನಿದ್ರೆಯಲ್ಲಿರುವಂತೆ ಮಾಡುವೆನು.


ಉಬ್ಬಿಕೊಂಡು ಸರ್ವೇಶ್ವರನನ್ನೆ ತಿರಸ್ಕರಿಸಿದ ಕಾರಣ ಹಾಳಾಗಿ ಇನ್ನು ರಾಷ್ಟ್ರವೆನಿಸಿಕೊಳ್ಳದು ಮೋವಾಬ್,


ನಿಮ್ಮನ್ನು ನೀವೇ ಬೆರಗುಮಾಡಿಕೊಂಡು ನಿಬ್ಬೆರಗಾಗಿರಿ. ಕುರುಡು ಮಾಡಿಕೊಂಡು ಕಡುಕುರುಡರಾಗಿರಿ. ಮದ್ಯಪಾನ ಮಾಡದೆಯೇ ಮತ್ತರಾಗಿರಿ, ಕುಡಿಯದೆಯೇ ಓಲಾಡಿರಿ.


ಸರ್ವೇಶ್ವರ ಅವರ ಮನಸ್ಸಿನಲ್ಲಿ ಚಂಚಲಭಾವವನ್ನು ಮೂಡಿಸಿದ್ದಾರೆ. ಅಮಲೇರಿದವನು ಕಕ್ಕುತ್ತಾ ಅತ್ತಿತ್ತ ಓಲಾಡುವ ಪ್ರಕಾರ ಈಜಿಪ್ಟಿನವರು ತಮ್ಮ ಒಂದೊಂದು ಕೆಲಸಕಾರ್ಯದಲ್ಲೂ ಅಸ್ಥಿರರಾಗಿರುವಂತೆ ಮಾಡಿದ್ದಾರೆ.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.


‘ಊಚ’ ಮತ್ತು ‘ಎದೋಮ್’ ನಾರೀಮಣಿಗಳೇ, ಸಂತೋಷಿಸಿ ಉಲ್ಲಾಸಿಸುತ್ತಿರುವಿರಿ ಅಲ್ಲವೇ? ಆದರೆ ಖಂಡಿತ ಬರುವುದು ಕಹಿಪಾನದ ಪಾತ್ರೆ ನಿಮ್ಮ ಪಾಲಿಗೆ ಅಮಲೇರಿ ಬೆತ್ತಲೆಯಾಗುವ ಗತಿ ಬಂದೇಬರುವುದು ನಿಮಗೆ!


ಬಾಬಿಲೋನ್ ನನ್ನ ಕೈಯಲ್ಲಿರುವ ಹೊನ್ನಿನ ಪಾನಪಾತ್ರೆ. ಲೋಕದವರೆಲ್ಲರು ಅದರಿಂದ ಕುಡಿದು ಮತ್ತರಾದರು. ರಾಷ್ಟ್ರಗಳು ಅದರಿಂದ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.


ಅದು ಹೇಗೆ ನುಚ್ಚುನೂರಾಗಿದೆ ! ಆ ಜನರು ಕಿರಿಚಿಕೊಳ್ಳುತ್ತಿದ್ದಾರೆ ! ಇಗೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ. ನೆರೆಹೊರೆಯವರು ಅಣಕಿಸುವುದಕ್ಕೂ ಬೆಚ್ಚಿಬೀಳುವುದಕ್ಕೂ ಆಸ್ಪದ ಆಗಿದೆ.” ಸರ್ವೇಶ್ವರ ಹೀಗೆನ್ನುತ್ತಾರೆ :


ಅದಕ್ಕೆ ಫರೋಹನು, “ 'ಸರ್ವೇಶ್ವರ' ಎಂಬುವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಯೇಲರನ್ನು ಹೋಗಬಿಡಬೇಕೊ? ಆ ಸರ್ವೇಶ್ವರನು ಯಾರೋ ನನಗೆ ಗೊತ್ತಿಲ್ಲ. ಇಸ್ರಯೇಲರನ್ನು ನಾನು ಹೋಗಬಿಡುವುದಿಲ್ಲ,” ಎಂದು ಬಿಟ್ಟನು.


ಮಹಾನಗರವು ಮೂರು ಭಾಗವಾಗಿ ಸೀಳಿಹೋಯಿತು. ಎಲ್ಲಾ ದೇಶಗಳ ನಗರಗಳು ನಾಶವಾದವು. ಬಾಬಿಲೋನ್ ಎಂಬ ಮಹಾನಗರವನ್ನು ದೇವರು ಮರೆಯಲಿಲ್ಲ; ತಮ್ಮ ರೋಷವೆಂಬ ಮದ್ಯಪಾತ್ರೆಯಿಂದ ಅದಕ್ಕೆ ಕುಡಿಯಲು ಕೊಟ್ಟರು.


ದೇವರೆನಿಸಿಕೊಳ್ಳುವ ಎಲ್ಲವನ್ನೂ ಅಲ್ಲಗಳೆಯುವನು; ಆರಾಧನೆಗೈಯುವ ಎಲ್ಲವನ್ನೂ ಇಲ್ಲಗೊಳಿಸುವನು; ಇವೆಲ್ಲಕ್ಕೂ ತಾವೇ ಮಿಗಿಲೆಂದು ಭಾವಿಸಿ ದೇವಮಂದಿರದಲ್ಲಿ ಕುಳಿತುಕೊಂಡು ತಾನೇ ದೇವರೆಂದು ಘೋಷಿಸಿಕೊಳ್ಳುವನು.


ನೀನು ಸನ್ಮಾನದಿಂದಲ್ಲ, ಅವಮಾನದಿಂದ ತುಂಬಿರುವೆ; ನೀನೂ ಕುಡಿ; ಕುಡಿದು ನಗ್ನನಾಗು. ಸರ್ವೇಶ್ವರಸ್ವಾಮಿಯ ಬಲಗೈಯಲ್ಲಿರುವ ಕೋಪದ ಕೊಡ ನಿನ್ನ ಪಾಲಿಗೂ ಬರುವುದು. ಅವಮಾನವೇ ನಿನ್ನ ಸನ್ಮಾನವನ್ನು ಆವರಿಸಿಬಿಡುವುದು.


“ನಿನೆವೆಯೇ, ನೀನು ಸಹ ಮತ್ತಳಾಗಿ ತತ್ತರಿಸುವೆ. ಶತ್ರುಗಳಿಂದ ಆಶ್ರಯ ಕೋರುವೆ.


“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.


ಆತ ನನಗೆ ಕಹಿ ಉಣ್ಣಿಸಿದ್ದಾನೆ ಹೊಟ್ಟೆತುಂಬ ನನ್ನನ್ನು ತಣಿಸಿದ್ದಾನೆ ವಿಷಪದಾರ್ಥಗಳಿಂದ.


ಸಾಂತ್ವನ ತರುವವರಾರೂ ಇಲ್ಲವಲ್ಲಾ ನನಗೆ ! ನನ್ನ ನರಳಾಟದ ಸುದ್ದಿ ಮುಟ್ಟಿದೆ ವೈರಿಗಳ ಕಿವಿಗೆ. ನನಗಾದ ಕೇಡಿಗೆ ನೀನೇ ಕಾರಣನೆಂಬ ಸಂತಸ ಶತ್ರುವಿಗೆ. ನೀ ಮುಂತಿಳಿಸಿದ ಮೇರೆಗೆ ನನಗಾದ ಗತಿ ಬರಲಿ ಅವರಿಗೆ.


ಬಾಬಿಲೋನಿನ ರಾಜ್ಯಪಾಲರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಯೋಧರು, ಇವರೆಲ್ಲರಿಗೆ ತಲೆಗೇರುವ ತನಕ ಕುಡಿಸುವೆನು. ಅವರು ಎಂದೆಂದಿಗೂ ಎಚ್ಚರಗೊಳ್ಳದೆ ಚಿರನಿದ್ರೆ ಮಾಡುವರು ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರನೆಂಬ ರಾಜಾಧಿರಾಜರು.”


ರಾಷ್ಟ್ರಗಳನು ತುಳಿದೆ ಕುಪಿತನಾಗಿ ಅವುಗಳನು ನುಚ್ಚುನೂರುಮಾಡಿದೆ ರೋಷಾವಿಷ್ಟನಾಗಿ ಅವುಗಳ ರಕ್ತವನು ನೆಲದಲಿ ಹರಿಸಿದೆ ಪ್ರವಾಹವಾಗಿ.


ಎಚ್ಚೆತ್ತುಕೊ, ಎಚ್ಚೆತ್ತುಕೊ, ನೀನೆದ್ದು ನಿಲ್ಲು ಜೆರುಸಲೇಮೆ! ಕುಡಿದುಬಿಟ್ಟಿರುವೆ ನೀ ಮತ್ತು ತರುವ ಪಾನಪಾತ್ರೆಯಿಂದ ತೊಟ್ಟನ್ನೂ ಬಿಡದೆ ಹೀರಿರುವೆ ಸರ್ವೇಶ್ವರನ ಕೋಪ ತುಂಬಿದಾ ಕೊಡದಿಂದ !


ಕೊಡಲಿ, ಕಡಿಯುವವನನ್ನೇ ಕಡಿಯಲು ನಿಂತೀತೆ? ಗರಗಸ, ಆಡಿಸುವವನನ್ನೇ ಕತ್ತರಿಸಲು ಎದೆಗೊಂಡೀತೆ? ಕೋಲು, ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ದೊಣ್ಣೆ ಸಜೀವ ಮನುಷ್ಯನನ್ನೇ ಬಡಿದಂತಾಯಿತು!


ಪ್ರಭುವಿನ ಕರಗಳಲ್ಲಿದೆ ಕೋಪಕೊಡ ಒಂದು I ತುಂಬಿದೆ ಅಮಲುಮಿಶ್ರ ರೌದ್ರರಸದಿಂದದು II ಅದನವನು ಸುರಿಯಲು ಕುಡಿವರು ಜಗದ ದುರುಳರು I ಮಡ್ಡಿಯನು ಕೂಡ ಬಿಡದೆ ಕುಡಿವರೆಲ್ಲರು II


ನಿನ್ನ ಜನರನು ಗುರಿಪಡಿಸಿದೆ ಸಂಕಟಕೆ I ಭ್ರಮಣಗೊಳಿಪ ಮದ್ಯವ ಕುಡಿಸಿದೆ ನಮಗೆ II


ನೀನಾದರೋ ಪ್ರಭು, ಅವರನು ನೋಡಿ ನಗುವೆ I ಅನ್ಯಜನರನು ಅಪಹಾಸ್ಯಕ್ಕೀಡು ಮಾಡುವೆ II


ಪರದಲಿ ಆಸೀನನಾಗಿಹ ಪ್ರಭು ನಗುವನಿದಕೆ I ಗುರಿಮಾಡದಿರನು ಇವರೆಲ್ಲರನು ಪರಿಹಾಸ್ಯಕೆ II


ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ.


ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯೋ?


ಅವರು ಕುಳಿತುಕೊಳ್ಳುವ ಮೇಜುಗಳ ಮೇಲೆಲ್ಲಾ ಹೊಲಸು ವಾಂತಿ ! ಸ್ವಚ್ಛವಾದ ಸ್ಥಳವಂತೂ ಕೊಂಚವೂ ಇಲ್ಲ.


ಅದು ನಕ್ಷತ್ರ ಗಣದ ಮೇಲೆ ಕೈಮಾಡುವಷ್ಟು ಹೆಚ್ಚಿ ಆ ಗಣದ ಕೆಲವು ನಕ್ಷತ್ರಗಳನ್ನೂ ನೆಲಕ್ಕೆ ಕೆಡವಿ ತುಳಿದುಬಿಟ್ಟಿತು.


ದೇವರಿಗೆ ವಿರುದ್ಧ ಅವನು ಮುಷ್ಠಿ ತೋರಿದನಲ್ಲವೆ? ಸರ್ವಶಕ್ತನನು ಧಿಕ್ಕರಿಸುತಾ ಶೂರನಂತೆ ಮೆರೆದನಲ್ಲವೆ?


“ಬಿಲ್ಲುಬಾಣಗಾರರನ್ನೆಲ್ಲ ಬಾಬಿಲೋನಿಗೆ ಕರೆಯಿರಿ. ಅದರ ಸುತ್ತಲು ದಂಡಿಳಿಸಿರಿ. ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಗರ್ವದಿಂದ ಅದು ಇಸ್ರಯೇಲರ ಪರಮ ಪಾವನನಾದ ಸರ್ವೇಶ್ವರನನ್ನು ಅಸಡ್ಡೆಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು