Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:28 - ಕನ್ನಡ ಸತ್ಯವೇದವು C.L. Bible (BSI)

28 “ಮೋವಾಬ್ಯರೇ, ನಗರಗಳನ್ನು ಬಿಟ್ಟು ಹೋಗಿ ಬಂಡೆಗಳ ಗುಹೆಯಲ್ಲಿ ವಾಸಮಾಡಿ. ಹಳ್ಳಕೊಳ್ಳಗಳ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತೆ ಜೀವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮೋವಾಬ್ಯರೇ, ಪಟ್ಟಣಗಳನ್ನು ಬಿಟ್ಟು ಬಂಡೆಯ ಗುಹೆಗಳಲ್ಲಿ ವಾಸಿಸಿರಿ; ಹಳ್ಳಕೊಳ್ಳದ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮೋವಾಬ್ಯರೇ, ಪಟ್ಟಣಗಳನ್ನು ಬಿಟ್ಟು ಬಂಡೆಯ ಗುಹೆಗಳಲ್ಲಿ ವಾಸಿಸಿರಿ; ಹಳ್ಳಕೊಳ್ಳದ ಆಚೆಯ ಪಕ್ಕೆಯಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಮೋವಾಬ್ಯರೇ, ನಿಮ್ಮ ಪಟ್ಟಣಗಳನ್ನು ಬಿಟ್ಟುಬಿಡಿ. ಹೋಗಿ, ಬೆಟ್ಟಗಳಲ್ಲಿ ವಾಸಿಸಿರಿ. ಗುಹೆಯ ಬಾಗಿಲಿನಲ್ಲಿ ತನ್ನ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತೆ ಆಗಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಮೋವಾಬಿನಲ್ಲಿ ವಾಸವಾಗಿರುವವರೇ, ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರಿ; ಸಂದುಗಳ ಬಾಯಿಗಳ ಪಕ್ಕಗಳಲ್ಲಿ ಗೂಡು ಕಟ್ಟುವ ಪಾರಿವಾಳದ ಹಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:28
10 ತಿಳಿವುಗಳ ಹೋಲಿಕೆ  

ಬಂಡೆಯ ಬಿರುಕುಗಳಲ್ಲಿ ಸಂದುಗಳ ಮರೆಯಲ್ಲಿ ತಂಗಿರುವ ಪಾರಿವಾಳವೇ ಬಾ. ನಿನ್ನ ರೂಪವನು ನನಗೆ ಕಾಣಿಸು ನಿನ್ನ ದನಿಯನು ನನಗೆ ಕೇಳಿಸು. ನಿನ್ನ ದನಿ ಎನಿತೋ ಇಂಪು! ನಿನ್ನ ರೂಪ ಎನಿತೋ ತಂಪು!


ಮಿದ್ಯಾನ್ಯರ ಶಕ್ತಿ ಹೆಚ್ಚಿತು. ಇಸ್ರಯೇಲರು ಅವರಿಗೆ ಹೆದರಿ ಬೆಟ್ಟಗುಡ್ಡಗಳಲ್ಲಿ ಕಂದರಗಳನ್ನೂ ಗುಹೆಗಳನ್ನೂ ಮಾಡಿ ಅವುಗಳಲ್ಲಿ ವಾಸಮಾಡಿದರು.


ಪರ್ವತಾಗ್ರಗಳಲ್ಲಿ ನೆಲೆಗೊಂಡ ಜನತೆಯೇ, ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನತೆಯೇ, ನಿನ್ನ ಭೀಕರತ್ವವೆಲ್ಲಿ? ನಿನ್ನೆದೆಯ ಗರ್ವ ನಿನ್ನನ್ನು ಮೋಸಗೊಳಿಸಿದೆ. ಹದ್ದಿನಂತೆ ನೀನು ಉನ್ನತಸ್ಥಾನದಲ್ಲಿ ಗೂಡನ್ನು ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ನನ್ನ ನುಡಿ,” ಎನ್ನುತ್ತಾರೆ ಸರ್ವೇಶ್ವರ.


ಮೋವಾಬಿಗೆ ರೆಕ್ಕೆ ಕಟ್ಟಿರಿ, ಅದು ಹಾರಿಹೋಗಲಿ ಅದರ ನಗರಗಳು ಹಾಳುಬಿದ್ದು ನಿರ್ಜನವಾಗುವುವು.


ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ಅವಿತುಕೊಳ್ಳುವರು ಜನರು ಕಲ್ಲುಬಂಡೆಗಳ ಗುಹೆಗಳಲ್ಲಿ, ನೆಲದ ಹಳ್ಳಕೊಳ್ಳಗಳಲ್ಲಿ.


ಇಸ್ರಯೇಲರಿಗೆ ಕೇಡು ಬಂದೊದಗಿತು. ತಾವು ಇಕ್ಕಟ್ಟಿನಲ್ಲಿ ಇದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.


ಮತ್ತೆ ಏಳುದಿನಗಳಾದ ಮೇಲೆ ಇನ್ನೊಮ್ಮೆ ಪಾರಿವಾಳವನ್ನು ಹೊರಕ್ಕೆ ಬಿಟ್ಟನು. ಈ ಸಾರಿ ಅದು ಹಿಂತಿರುಗಿ ಬರಲೇ ಇಲ್ಲ.


ದೇದಾನಿನವರೇ, ಹಿಂದಿರುಗಿ ಓಡಿಹೋಗಿರಿ. ಒಳ ಪ್ರಾಂತ್ಯವನ್ನು ಸೇರಿ ವಾಸಿಸಿರಿ. ಏಕೆಂದರೆ ನಾನು ಎದೋಮನ್ನು ದಂಡಿಸುವೆನು. ಏಸಾವನಿಗೆ ವಿಧಿಸಿದ್ದ ಆಪತ್ತನ್ನು ಅದರ ಮೇಲೆ ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು