Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:3 - ಕನ್ನಡ ಸತ್ಯವೇದವು C.L. Bible (BSI)

3 ‘ಅಯ್ಯೋ, ಸೂರೆಹೋದೆವು, ತೀವ್ರ ನಾಶವಾದೆವು!’ ಎಂಬ ಕೂಗಾಟ ಕೇಳಿಬರುತ್ತಿದೆ ಹೊರೊನಯಿಮಿನಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ‘ಅಯ್ಯೋ, ಸೂರೆ ಹೋದೆವು, ಬಹು ನಾಶವಾದೆವು’ ಎಂಬ ಕೂಗಾಟವು ಹೊರೊನಯಿಮಿನಿಂದ ಕೇಳಬರುತ್ತದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅಯ್ಯೋ, ಸೂರೆಹೋದೆವು, ಬಹು ನಾಶವಾದೆವು ಎಂಬ ಕೂಗಾಟವು ಹೊರೊನಯಿವಿುನಿಂದ ಕೇಳಬರುತ್ತದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹೊರೊನಯಿಮಿನಿಂದ ಬರುವ ಗೋಳಾಟದ ಧ್ವನಿಯನ್ನು ಕೇಳಿರಿ. ಅದು ವಿನಾಶದ ಮತ್ತು ಗೊಂದಲದ ಧ್ವನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶವು, ಹೊರಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:3
12 ತಿಳಿವುಗಳ ಹೋಲಿಕೆ  

ಮೊರೆಯಿಡುತ್ತಿದೆ ಎನ್ನ ಮನ ಮೋವಾಬಿನ ನಿಮಿತ್ತ, ಪಲಾಯನ ಗೈದವರು ಓಡುತಿಹರು ಚೋಯರತ್ತ, ಎಗ್ಲತ್ ಶೆಲಿಶೀಯ ದತ್ತ, ಹತ್ತಿಹರು ಲೂಹೀತ್ ದಿಣ್ಣೆಯನ್ನು ಅಳುತ್ತ, ಪಿಡಿದಿಹರು ಹೊರೋನಯಿಮಿನ ದಾರಿಯನು ಹಾಳಾದೆವೆಂದು ಧ್ವನಿಗೈಯುತ.


ಹೆಷ್ಬೋನಿನ ಮತ್ತು ಎಲೆಯಾಲೆಯ ಜನರು ಅರಚಿಕೊಳ್ಳುತ್ತಿದ್ದಾರೆ. ಆ ಕೂಗು ಯಹಚಿನವರೆಗೆ ಕೇಳಿಸುತ್ತಿದೆ. ಚೋಯರಿನಿಂದ ಹೊರೊನಯಿಮಿನವರೆಗೆ ಮತ್ತು ಎಗ್ಲತ್ ಶೆಲೆಶೀಯದವರೆಗೆ ಆ ಕಿರಿಚಾಟ ಕೇಳಿಸುತ್ತಿದೆ. ನಿಮ್ರೀಮ್ ಹಳ್ಳವೂ ಹಾಳಾಗಿದೆ.


ಅಳುತ್ತಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಿರುವರು ‘ನಾಶವಾದೆವಲ್ಲಾ!’ ಎಂಬ ಪ್ರಾಣಸಂಕಟದ ಪ್ರಲಾಪವು ಹೊರೊನಯಿಮ್ ಇಳಿಜಾರಿನಲ್ಲಿ ಕೇಳಿಸುತ್ತಿರುವುದು.


“ಸರ್ವೇಶ್ವರನ ವಾರ್ತೆ ಇದು: ಇಗೋ, ಬಡಗಲಿಂದ ಪ್ರವಾಹ ಹೊರಡುವುದು ತುಂಬಿತುಳುಕುವ ತೊರೆಯಾಗಿ ಬರುವುದು. ಆಕ್ರಮಿಸುವುದು ನಾಡನ್ನು, ಅದರಲ್ಲಿರುವ ಸಮಸ್ತವನ್ನು. ನಗರವನ್ನು, ಅದರ ನಿವಾಸಿಗಳನ್ನು. ಆಗ ನಾಡಿನವರೆಲ್ಲರೂ ಮೊರೆಯಿಡುವರು ದೇಶದವರೆಲ್ಲರು ಗೋಳಾಡುವರು.


“ಆದ್ದರಿಂದ ನನ್ನ ಕಡೆ ನೋಡಬೇಡಿ. ನನ್ನನ್ನು ಸಂತೈಸಲು ಪ್ರಯತ್ನಿಸಬೇಡಿ. ಸತ್ತುಹೋದ ನನ್ನ ಜನರಿಗಾಗಿ ಕಣ್ಣೀರು ಸುರಿಸುತ್ತಿರುವೆನು” ಎಂದೆ ನಾನು.


ಹಬ್ಬಿದೆ ಅದರ ಪ್ರಲಾಪ ಮೋವಾಬಿನ ಎಲ್ಲೆಗಳ ಪರಿಯಂತ, ವ್ಯಾಪಿಸಿದೆ ಅದರ ಆಕ್ರಂದ ಎಗ್ಲಯಿಮಿನ್, ಬೆಯೆರ್ ಏಲೀಮಿನ ತನಕ.


ಹತ್ತಿಹರು ಗುಡಿಗೋಪುರಗಳನು ಆಳುವುದಕ್ಕಾಗಿ, ದೀಬೋನಿನವರು, ಗೋಳಾಡುತಿಹರು ನೆಬೋವಿನಲಿ ಮೇಣ್ ಮೇದೆಬದಲಿ, ಮೋವಾಬ್ಯರು ತಲೆ ಬೋಳಿಸಿಹರು, ಗಡ್ಡ ಕತ್ತರಿಸಿಹರು ದುಃಖದಿಂದ ಎಲ್ಲರು.


ಸರ್ವೇಶ್ವರನು ಕನಿಕರಿಸದೆ ಕೆಡವಿಬಿಟ್ಟ ಪಟ್ಟಣದ ಗತಿ ಅವನಿಗಾಗಲಿ ! ಬೆಳಿಗ್ಗೆ ಕಿರುಚಾಟ, ನಡುಹಗಲಲ್ಲಿ ಕೂಗಾಟ ಅವನ ಕಿವಿಗೆ ಬೀಳಲಿ !


“ಮೋವಾಬ್ ನಾಶವಾಯಿತು. ಅಲ್ಲಿ ದಿಕ್ಕೆಟ್ಟವರು ಮೊರೆಯಿಟ್ಟಿರುವರು.


“ಇಗೋ ಕೇಳಿಬರುತ್ತಿದೆ ಬಾಬಿಲೋನಿನಿಂದ ಕೂಗಾಟ! ಆ ಬಾಬಿಲೋನಿಯರ ದೇಶದಿಂದ ಮಹಾ ವಿನಾಶದ ಕಿರುಚಾಟ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು