ಯೆರೆಮೀಯ 48:30 - ಕನ್ನಡ ಸತ್ಯವೇದವು C.L. Bible (BSI)30 ಸರ್ವೇಶ್ವರನಾದ ನಾನು ಹೇಳುವುದೇನೆಂದರೆ: ಅವರ ಗರ್ವೋದ್ರೇಕ ನನಗೆ ಗೊತ್ತಿದೆ. ಅದು ಬರೀ ಬುರುಡೆ ಮಾತ್ರ. ಅವರು ಕೊಚ್ಚಿಕೊಳ್ಳುವುದೆಲ್ಲ ನಿರರ್ಥಕವೇ ಸರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯೆಹೋವನು ಹೇಳುವುದೇನೆಂದರೆ, “ಅವರ ಗರ್ವೋದ್ರೇಕವು ನನಗೆ ಗೊತ್ತು, ಅದು ಬರೀ ಬುರುಡೆಯೇ; ಅವರು ಕೊಚ್ಚಿಕೊಳ್ಳುವುದೆಲ್ಲಾ ನಿರರ್ಥಕ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯೆಹೋವನು ಹೇಳುವದೇನಂದರೆ - ಅವರ ಗರ್ವೋದ್ರೇಕವು ನನಗೆ ಗೊತ್ತು. ಅದು ಬರೀ ಬುರುಡೆಯೇ; ಅವರು ಕೊಚ್ಚಿಕೊಳ್ಳುವದೆಲ್ಲಾ ನಿರರ್ಥಕ ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಯೆಹೋವನು ಹೀಗೆಂದನು: “ಬಹುಬೇಗ ಮೋವಾಬಿಗೆ ಕೋಪ ಬರುತ್ತದೆ. ಅವನು ಬಡಾಯಿ ಕೊಚ್ಚಿಕೊಳ್ಳುತ್ತಾನೆಂಬುದು ನನಗೆ ಗೊತ್ತು. ಆದರೆ ಅವನ ಬಡಾಯಿಗಳೆಲ್ಲ ಸುಳ್ಳು. ತಾನು ಹೇಳಿದಂತೆ ಮಾಡಲು ಅವನಿಂದಾಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನಾನು ಅದರ ಕೋಪೋದ್ರೇಕವನ್ನು ಬಲ್ಲೆನೆಂದು, ಅದು ವ್ಯರ್ಥ”, ಎಂದು ಯೆಹೋವ ದೇವರು ಅನ್ನುತ್ತಾರೆ; “ಆದರೆ ಅದು ಹಾಗೆ ಆಗುವುದಿಲ್ಲ; ಅವನ ಸುಳ್ಳುಗಳು ಸರಿಬೀಳುವುದಿಲ್ಲ. ಅಧ್ಯಾಯವನ್ನು ನೋಡಿ |