Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:31 - ಕನ್ನಡ ಸತ್ಯವೇದವು C.L. Bible (BSI)

31 ಆದಕಾರಣ ನಾನು ಮೋವಾಬಿನ ಬಗ್ಗೆ ವಿಷಾದಿಸುತ್ತೇನೆ. ಹೌದು, ಇಡೀ ನಾಡಿನ ದುರ್ಗತಿಯನ್ನು ನೋಡಿ ಪ್ರಲಾಪಿಸುತ್ತೇನೆ. ಕೀರ್‍ಹೆರೆಸಿನವರ ವಿಷಯದಲ್ಲೂ ನನಗೆ ವ್ಯಥೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದಕಾರಣ ನಾನು ಮೋವಾಬಿನ ನಿಮಿತ್ತ ಗೋಳಾಡುವೆನು; ಹೌದು, ಇಡೀ ದೇಶದ ದುರ್ಗತಿಯನ್ನು ನೋಡಿ ಪ್ರಲಾಪಿಸುವೆನು; ಕೀರ್ ಹೆರೆಸಿನವರ ವಿಷಯವಾಗಿ ನರಳಾಟವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದಕಾರಣ ನಾನು ಮೋವಾಬಿನ ನಿವಿುತ್ತ ಗೋಳಾಡುವೆನು; ಹೌದು, ಇಡೀ ದೇಶದ ದುರ್ಗತಿಯನ್ನು ನೋಡಿ ಪ್ರಲಾಪಿಸುವೆನು; ಕೀರ್ ಹೆರೆಸಿನವರ ವಿಷಯವಾಗಿ ನರಳಾಟವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದ್ದರಿಂದ ನಾನು ಮೋವಾಬಿಗಾಗಿ ಗೋಳಾಡುವೆನು; ಮೋವಾಬಿನ ಪ್ರತಿಯೊಬ್ಬರಿಗಾಗಿ ಗೋಳಾಡುವೆನು. ನಾನು ಕೀರ್ ಹೆರೆಸಿನವರಿಗಾಗಿ ಪ್ರಲಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದ್ದರಿಂದ ನಾನು ಮೋವಾಬಿನ ನಿಮಿತ್ತ ಗೋಳಿಡುವೆನು; ಸಮಸ್ತ ಮೋವಾಬಿನ ನಿಮಿತ್ತ ಕೂಗುವೆನು; ಕೀರ್ ಹೆರೆಸಿನ ಮನುಷ್ಯರ ನಿಮಿತ್ತ ನನ್ನ ಹೃದಯವು ದುಃಖಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:31
4 ತಿಳಿವುಗಳ ಹೋಲಿಕೆ  

ಮೊರೆಯಿಡುತ್ತಿದೆ ಎನ್ನ ಮನ ಮೋವಾಬಿನ ನಿಮಿತ್ತ, ಪಲಾಯನ ಗೈದವರು ಓಡುತಿಹರು ಚೋಯರತ್ತ, ಎಗ್ಲತ್ ಶೆಲಿಶೀಯ ದತ್ತ, ಹತ್ತಿಹರು ಲೂಹೀತ್ ದಿಣ್ಣೆಯನ್ನು ಅಳುತ್ತ, ಪಿಡಿದಿಹರು ಹೊರೋನಯಿಮಿನ ದಾರಿಯನು ಹಾಳಾದೆವೆಂದು ಧ್ವನಿಗೈಯುತ.


ಎಲ್ಲಾ ಪಟ್ಟಣಗಳನ್ನು ಕೆಡವಿ, ಹೊಲಗಳನ್ನು ಕಲ್ಲುಗಳಿಂದ ತುಂಬಿಸಿ, ಬಾವಿಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದೇ ಒಂದು ಮಾರ್ಗ ಉಳಿಯಿತು. ಕವಣೆ ಹೊಡೆಯುವವರು ಅದನ್ನೂ ಸುತ್ತಿಕೊಂಡು ಕಲ್ಲೆಸೆದರು.


“ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯ ಕೊಳಲಿನಂತೆ ಮೊರೆಯಿಡುತ್ತದೆ. ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿ ಮಾಯವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು