Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:36 - ಕನ್ನಡ ಸತ್ಯವೇದವು C.L. Bible (BSI)

36 “ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯ ಕೊಳಲಿನಂತೆ ಮೊರೆಯಿಡುತ್ತದೆ. ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿ ಮಾಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯವು ಕೊಳಲುಗಳಂತೆ ಮೊರೆಯಿಡುತ್ತದೆ; ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿಯು ಮಾಯವಾಯಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆದದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿವಿುತ್ತ ನನ್ನ ಹೃದಯವು ಕೊಳಲುಗಳಂತೆ ಮೊರೆಯಿಡುತ್ತದೆ; ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿಯು ಮಾಯವಾಯಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 “ಮೋವಾಬಿಗಾಗಿ ನಾನು ಬಹಳ ದುಃಖಿತನಾಗಿದ್ದೇನೆ. ಸ್ಮಶಾನಯಾತ್ರೆಯ ಕಾಲದಲ್ಲಿ ಊದುವ ಕೊಳಲಿನಿಂದ ಹೊರಬರುವ ದುಃಖದ ಧ್ವನಿಯಂತೆ ನನ್ನ ಹೃದಯ ಅಳುತ್ತಿದೆ. ಕೀರ್ ಹೆರೆಸಿನ ಜನರಿಗಾಗಿ ನಾನು ದುಃಖಿಸುತ್ತೇನೆ. ಅವರ ಹಣವನ್ನು ಮತ್ತು ಸಂಪತ್ತನ್ನು ಕಿತ್ತುಕೊಳ್ಳಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 “ಆದ್ದರಿಂದ ನನ್ನ ಹೃದಯವು ಮೋವಾಬಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವುದು. ನನ್ನ ಹೃದಯವು ಕೀರ್ ಹೆರೆಸಿನ ಮನುಷ್ಯರಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವುದು. ಏಕೆಂದರೆ ಅವನು ಮಾಡಿಕೊಂಡ ದ್ರವ್ಯ ನಾಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:36
14 ತಿಳಿವುಗಳ ಹೋಲಿಕೆ  

ಎಂತಲೇ ವಿಲ್ಲೊ ಕಣಿವೆಯಾಚೆ ಹೊತ್ತು ಹೋಗುತಿಹರು, ತಾವು ಗಳಿಸಿದ ಆಸ್ತಿಯನ್ನು, ಕೂಡಿಸಿಟ್ಟ ಸ್ವತ್ತನ್ನು.


ಮೋವಾಬಿನ ನಿಮಿತ್ತ ಮಿಡಿಯುತಿದೆಯೆನ್ನ ಮನ ದುಃಖದಿಂದ, ವೀಣೆಯ ತಂತಿಯಂತೆ ತುಡಿಯುತಿದೆಯೆನ್ನ ಅಂತರಂಗ ಕೀರ್ ಹೆರೆಷಿನ ನಿಮಿತ್ತ.


ಮೊರೆಯಿಡುತ್ತಿದೆ ಎನ್ನ ಮನ ಮೋವಾಬಿನ ನಿಮಿತ್ತ, ಪಲಾಯನ ಗೈದವರು ಓಡುತಿಹರು ಚೋಯರತ್ತ, ಎಗ್ಲತ್ ಶೆಲಿಶೀಯ ದತ್ತ, ಹತ್ತಿಹರು ಲೂಹೀತ್ ದಿಣ್ಣೆಯನ್ನು ಅಳುತ್ತ, ಪಿಡಿದಿಹರು ಹೊರೋನಯಿಮಿನ ದಾರಿಯನು ಹಾಳಾದೆವೆಂದು ಧ್ವನಿಗೈಯುತ.


ಅನ್ಯಾಯವಾಗಿ ಆಸ್ತಿಪಾಸ್ತಿಗಳನ್ನು ಗಳಿಸಿಕೊಳ್ಳುವ ಮಾನವ ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನ. ಅವು ಅವನಿಂದ ತೊಲಗಿಹೋಗುವುವು ನಡುಪ್ರಾಯದಲ್ಲಿ ಅವನು ಮೂರ್ಖನಾಗಿ ಕಂಡುಬರುವನು ಅಂತ್ಯಕಾಲದಲ್ಲಿ.”


ಅಯ್ಯೋ, ನನ್ನ ಕರುಳು ಯಾತನೆಯಿಂದ ಕಿತ್ತುಬರುವಂತಿದೆ. ಅಕಟಾ ! ನನ್ನ ಗುಂಡಿಗೆಯ ಪಕ್ಕೆಗಳು ಸೀಳುವಂತಿದೆ, ಹೃದಯ ತಳಮಳಗೊಂಡಿದೆ ! ಇನ್ನು ಬಾಯಿಮುಚ್ಚಿಕೊಂಡಿರಲು ನನ್ನಿಂದಾಗದು; ನನ್ನ ಮನವೇ, ಕಾಳಗದ ಕಹಳೆಯನ್ನೂ ಯುದ್ಧದ ಕೋಲಾಹಲವನ್ನೂ ಕೇಳುತ್ತಿರುವೆ, ಅಲ್ಲವೆ?


ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?


ಐಶ್ವರ್ಯವಂತನಿಗೆ ಹಣವೆ ಬಲವಾದ ಕೋಟೆ; ಅದುವೇ ಎತ್ತರವಾದ ಪೌಳಿಗೋಡೆ.


ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯದ ಸೊತ್ತು; ಪಾಪಿಯ ಸೊತ್ತು ಸತ್ಪುರುಷರಿಗೆ ಸೇರುವ ಸಂಪತ್ತು.


ತೀರ್ಪಿನ ದಿನ ನೆರವಾಗದು ಆಸ್ತಿಪಾಸ್ತಿ; ಸನ್ನಡತೆಯಿಂದಲೆ ಮರಣದಿಂದ ವಿಮುಕ್ತಿ.


ಎಲ್ಲಾ ಪಟ್ಟಣಗಳನ್ನು ಕೆಡವಿ, ಹೊಲಗಳನ್ನು ಕಲ್ಲುಗಳಿಂದ ತುಂಬಿಸಿ, ಬಾವಿಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದೇ ಒಂದು ಮಾರ್ಗ ಉಳಿಯಿತು. ಕವಣೆ ಹೊಡೆಯುವವರು ಅದನ್ನೂ ಸುತ್ತಿಕೊಂಡು ಕಲ್ಲೆಸೆದರು.


ಆದಕಾರಣ ನಾನು ಮೋವಾಬಿನ ಬಗ್ಗೆ ವಿಷಾದಿಸುತ್ತೇನೆ. ಹೌದು, ಇಡೀ ನಾಡಿನ ದುರ್ಗತಿಯನ್ನು ನೋಡಿ ಪ್ರಲಾಪಿಸುತ್ತೇನೆ. ಕೀರ್‍ಹೆರೆಸಿನವರ ವಿಷಯದಲ್ಲೂ ನನಗೆ ವ್ಯಥೆ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು