Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:37 - ಕನ್ನಡ ಸತ್ಯವೇದವು C.L. Bible (BSI)

37 ಎಲ್ಲರ ತಲೆಬೋಳು, ಎಲ್ಲರ ಗಡ್ಡ ವಿಕಾರ, ಎಲ್ಲರ ಕೈ ಗಾಯ. ಎಲ್ಲರ ನಡುವಿಗೆ ಗೋಣಿತಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಪ್ರತಿಯೊಬ್ಬರ ತಲೆಯನ್ನು ಬೋಳಿಸಲಾಗಿದೆ. ಪ್ರತಿಯೊಬ್ಬರ ಗಡ್ಡವನ್ನು ಕತ್ತರಿಸಲಾಗಿದೆ. ಪ್ರತಿಯೊಬ್ಬರ ಕೈಗಳು ಕತ್ತರಿಸಲ್ಪಟ್ಟು ಅವುಗಳಿಂದ ರಕ್ತ ಸುರಿಯುತ್ತಿದೆ. ಪ್ರತಿಯೊಬ್ಬರು ತಮ್ಮ ಸೊಂಟಕ್ಕೆ ದುಃಖಸೂಚಕ ವಸ್ತ್ರಗಳನ್ನು ಸುತ್ತಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಏಕೆಂದರೆ ಎಲ್ಲಾ ತಲೆಗಳು ಬೋಳಾಗುವುವು; ಎಲ್ಲಾ ಗಡ್ಡಗಳು ಕ್ಷೌರವಾಗುವುವು; ಎಲ್ಲಾ ಕೈಗಳ ಮೇಲೆ ಗಾಯಗಳು, ಸೊಂಟಗಳ ಮೇಲೆ ಗೋಣಿತಟ್ಟು ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:37
22 ತಿಳಿವುಗಳ ಹೋಲಿಕೆ  

ಗಾಜಾ ಊರು ತಲೆಬೋಳಿಸಿಕೊಂಡಿದೆ ಅಷ್ಕೆಲೋನ್ ಊರು ನಿಶ್ಶಬ್ದವಾಗಿದೆ. ಅನಕಿಮ್ ಬೈಲುನಾಡಿನ ಅವಶೇಷವೇ, ಎಂದಿನವರೆಗೆ ನಿನ್ನನ್ನೇ ಕತ್ತರಿಸಿಕೊಳ್ಳುತ್ತಿರುವೆ !


ಇಂತಿರಲು ಗಡ್ಡ ಬೋಳಿಸಿ, ಬಟ್ಟೆ ಹರಿದು, ಗಾಯಮಾಡಿಕೊಂಡಿದ್ದ ಎಂಬತ್ತು ಜನರು ಶೆಕೆಮ್, ಶಿಲೋ, ಸಮಾರಿಯ ಎಂಬ ಊರುಗಳಿಂದ ಬಂದು, ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋಗುತ್ತಿದ್ದರು.


ದುಃಖ ತಾಳಲಾಗದೆ ತನ್ನ ಬಟ್ಟೆಯನ್ನು ಹರಿದುಕೊಂಡ; ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡ; ತನ್ನ ಮಗನಿಗಾಗಿ ಬಹುದಿನಗಳವರೆಗೂ ಅತ್ತು ಪ್ರಲಾಪಿಸಿದ.


ಈ ನಾಡಿನಲ್ಲಿ ದೊಡ್ಡವರು ಹಾಗುಚಿಕ್ಕವರು ಸಾಯುವರು. ಅವರನ್ನು ಯಾರು ಹೂಣಿಡುವುದಿಲ್ಲ. ಅವರಿಗಾಗಿ ಯಾರೂ ಗೋಳಾಡುವುದಿಲ್ಲ. ದೇಹವನ್ನು ಹುಣ್ಣಾಗಿಸಿಕೊಳ್ಳುವುದಿಲ್ಲ. ತಲೆ ಬೋಳಿಸಿಕೊಳ್ಳುವುದಿಲ್ಲ.


ಅದಕ್ಕೆ ಮೂರು ವರ್ಷಗಳಿಗೆ ಮುಂಚೆಯೆ ಆಮೋಚನ ಮಗ ಯೆಶಾಯನಿಗೆ ಸರ್ವೇಶ್ವರ ಮುನ್ಸೂಚನೆಯಾಗಿ ಹೀಗೆಂದು ಹೇಳಿದ್ದರು : “ಎದ್ದೇಳು, ಸೊಂಟಕ್ಕೆ ಕಟ್ಟಿರುವ ಗೋಣಿತಟ್ಟನ್ನು ಬಿಚ್ಚು, ಕಾಲಿಗೆ ಹಾಕಿರುವ ಕೆರವನ್ನು ಕಳಚು.” ಅಂತೆಯೇ ಯೆಶಾಯನು ದಿಗಂಬರನಾಗಿ ಬರಿಗಾಲಿನಲ್ಲೇ ತಿರುಗಾಡುತ್ತಿದ್ದನು.


ನಾನು ನನ್ನ ಇಬ್ಬರು ಸಾಕ್ಷಿಗಳನ್ನು ಕಳುಹಿಸುವೆನು. ಅವರು ಗೋಣಿತಟ್ಟನ್ನು ಉಟ್ಟುಕೊಂಡು ಒಂದು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದಿಸುವರು.”


ಹಗಲಿರುಳೆನ್ನದೆ ಸಮಾಧಿಯ ಗುಹೆಗಳಲ್ಲಿಯೂ ಬೆಟ್ಟಗುಡ್ಡಗಳಲ್ಲಿಯೂ ಅವನು ಅಲೆದಾಡುತ್ತಾ ಅರಚಾಡುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಾ ಇದ್ದನು.


ಜುದೇಯದ ನಿವಾಸಿಗಳೇ, ನಿಮ್ಮ ಮಕ್ಕಳು ಅಗಲಿ ಸೆರೆಹೋಗಿದ್ದಾರೆ. ನಿಮ್ಮ ಮುದ್ದು ಮಕ್ಕಳಿಗಾಗಿ ತಲೆಬೋಳಿಸಿಕೊಳ್ಳಿ, ಮುಂಡನ ಮಾಡಿಸಿಕೊಳ್ಳಿ. ನಿಮ್ಮ ಬೋಳುತಲೆಯು ರಣಹದ್ದಿನಂತೆ ನುಣ್ಣಗಿರಲಿ.


ನಿಮ್ಮ ಕೊಂಡಾಟದಿನಗಳನ್ನು ಗೋಳಾಟ ದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು.”


ತಲೆ ಬೋಳಿಸಿಕೊಂಡು, ಗೋಣಿತಟ್ಟನು ಸುತ್ತಿಕೊಂಡು, ದುಃಖಿಸಿ ಗೋಳಾಡುವರು, ಅಳುವರು ನಿನಗಾಗಿ ನಿಟ್ಟುಸಿರಿಟ್ಟು;


ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಆವರಿಸಿಬಿಡುವುದು; ಎಲ್ಲರ ಮುಖದಲ್ಲೂ ನಾಚಿಕೆ ತುಂಬಿರುವುದು, ಎಲ್ಲರು ತಲೆಬೋಳಿಸಿಕೊಂಡು ಇರುವರು.


ಈ ವರದಿಯನ್ನು ಕೇಳಿದ ಹಿಜ್ಕೀಯನು ಕೂಡ ಬಟ್ಟೆಯನ್ನು ಹರಿದುಕೊಂಡು, ಗೋಣಿತಟ್ಟನ್ನು ಕಟ್ಟಿಕೊಂಡು, ಸರ್ವೇಶ್ವರ ಸ್ವಾಮಿಯ ಆಲಯಕ್ಕೆ ಹೋದನು.


ಇದಲ್ಲದೆ ಸುಗಂಧಕ್ಕೆ ಬದಲಾಗಿ ದುರ್ಗಂಧ, ನಡುಪಟ್ಟಿಗೆ ಬದಲಾಗಿ ಹುರಿಹಗ್ಗ, ಜಡೆದಲೆಗೆ ಬದಲಾಗಿ ಬೋಳುದಲೆ, ರೇಷ್ಮೆಬಟ್ಟೆಗೆ ಬದಲಾಗಿ ಗೋಣಿತಟ್ಟು, ಬೆಡಗಿಗೆ ಬದಲಾಗಿ ಬೆತ್ತಲೆ, ಇಂಥ ಗತಿ ಅವರಿಗೆ ಬಂದೊದಗುವುದು.


ಕೋಣೆಯ ಮೇಲೆ ತಿರುಗಾಡುತ್ತಿದ್ದ ಅರಸನು ಆ ಮಹಿಳೆಯ ಮಾತನ್ನು ಕೇಳಿದೊಡನೆ ಸಿಟ್ಟಿನಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈಮೇಲೆ ಗೋಣಿತಟ್ಟು ಇರುವುದು ಜನರಿಗೆ ಕಂಡಿತು.


ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ದುಃಖದಿಂದ ಹರಿದುಕೊಂಡನು; ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ವರ್ತಿಸಿದನು.


ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ಧತಿಯ ಪ್ರಕಾರ ಈಟಿಕತ್ತಿಗಳಿಂದ ರಕ್ತಸೋರುವಷ್ಟು ಗಾಯಮಾಡಿಕೊಂಡರು.


ಸತ್ತವರಿಗಾಗಿ ಸಂತಾಪ ಸೂಚಿಸಲು ದೇಹವನ್ನು ಗಾಯಗೊಳಿಸಿಕೊಳ್ಳಬೇಡ. ಶರೀರದ ಮೇಲೆ ಹಚ್ಚೇಚುಚ್ಚಿಸಿಕೊಳ್ಳಬೇಡ. ನಾನು ಸರ್ವೇಶ್ವರ.


ರೂಬೇನನು ಮರಳಿ ಆ ಬಾವಿಯ ಬಳಿಗೆ ಬಂದು ನೋಡಿದನು. ಅದರಲ್ಲಿ ಜೋಸೆಫನು ಇರಲಿಲ್ಲ.


ಹೆಷ್ಬೋನಿನವರೇ, ಅತ್ತುಗೋಳಾಡಿರಿ. ಆಯಿ ಎಂಬ ಊರು ಹಾಳಾಯಿತು! ರಬ್ಬಾ ನಗರಕ್ಕೆ ಸೇರಿದ ಗ್ರಾಮಗಳವರೇ ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಅತ್ತು ಪ್ರಲಾಪಿಸಿರಿ, ಕುರಿಹಟ್ಟಿಗಳಲ್ಲಿ, ಅತ್ತಿತ್ತ ಓಡಾಡಿರಿ. ಏಕೆಂದರೆ ಮಲ್ಕಾಮ್ ದೇವತೆಯೂ ಅದರ ಯಾಜಕರೂ ರಾಜ್ಯಾಧಿಕಾರಿಗಳೂ ಒಟ್ಟಾಗಿ ಸೆರೆಗೆ ಹೋಗುವರು.


“ನರಪುತ್ರನೇ, ಬಾಬಿಲೋನಿನ ನೆಬೂಕದ್ನೆಚ್ಚರನು ಟೈರಿಗೆ ಮುತ್ತಿಗೆ ಹಾಕಿ, ತನ್ನ ಸೈನಿಕರಿಂದ ಬಹು ಶ್ರಮದ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ. ಪ್ರತಿಯೊಬ್ಬನ ಹೆಗಲು ಕಾಯಿಕಟ್ಟಿದೆ; ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ಟೈರಿನಿಂದ ಫಲವೇನೂ ಸಿಕ್ಕಲಿಲ್ಲ.


ಆದುದರಿಂದ ಹಾನೂನನು ದಾವೀದನ ಸೈನಿಕರನ್ನು ಬಂಧಿಸಿದನು. ಗಡ್ಡದ ಅರ್ಧಭಾಗವನ್ನು ಬೋಳಿಸಿ ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು