Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:38 - ಕನ್ನಡ ಸತ್ಯವೇದವು C.L. Bible (BSI)

38 ಮೋವಾಬಿನ ಎಲ್ಲ ಮಾಳಿಗೆಗಳ ಮೇಲೆಯೂ ಚೌಕಗಳಲ್ಲಿಯೂ ಒಂದೇ ರೋದನ. ಏಕೆಂದರೆ ಯಾರಿಗೂ ಬೇಡದ ಮಡಕೆಯಂತೆ ಮೋವಾಬನ್ನು ಒಡೆದುಹಾಕಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ರೋದನವು ತುಂಬಿದೆ; “ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದುಬಿಟ್ಟಿದ್ದೇನೆ” ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಚೌಕಗಳಲ್ಲಿಯೂ ರೋದನವು ತುಂಬಿದೆ; ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದು ಬಿಟ್ಟಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಮೋವಾಬಿನ ಪ್ರತಿಯೊಂದು ಮಾಳಿಗೆಯ ಮೇಲೂ ಸಾರ್ವಜನಿಕ ಚೌಕಗಳಲ್ಲಿಯೂ ಜನ ಸತ್ತವರಿಗಾಗಿ ಶೋಕಿಸುತ್ತಿದ್ದಾರೆ. ಮೋವಾಬನ್ನು ನಾನು ಬರಿದಾದ ಪಾತ್ರೆಯಂತೆ ಮಾಡಿರುವುದರಿಂದ ದುಃಖ ವ್ಯಾಪಿಸಿದೆ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿ ಇರುವುದು. ಏಕೆಂದರೆ ಯಾರಿಗೂ ಬೇಡದ ಮಡಕೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:38
13 ತಿಳಿವುಗಳ ಹೋಲಿಕೆ  

ಕೊನ್ಯನು ಬಿಸಾಡಲ್ಪಟ್ಟ ಒಡಕು ಕುಡಿಕೆಯೆ? ಯಾರಿಗೂ ಬೇಡವಾದ ಮಣ್ಣಿನ ಮಡಿಕೆಯೆ? ಅವನೂ ಅವನ ಮಡದಿಮಕ್ಕಳೇಕೆ ಬೀದಿಪಾಲಾಗಿದ್ದಾರೆ?


‘ಕುರಿಗಾಹಿಗಳೇ, ಅರಚಿಗೋಳಾಡಿ ಮೇಷಪಾಲರೇ, ಬೂದಿಯಲ್ಲಿ ಬಿದ್ದು ಹೊರಳಾಡಿ. ನಿಮ್ಮನ್ನು ವಧಿಸುವ ಕಾಲ ಬಂದಿದೆ ನಾನು ನಿಮ್ಮನ್ನು ಭಂಗಪಡಿಸುವೆ. ನೀವು ಚೂರುಚೂರಾಗುವಿರಿ ಒಡೆದುಹೋದ ಅಂದವಾದ ಪಾತ್ರೆಯಂತೆ.


‘ದಿವ್ಯದರ್ಶನದ ಕಣಿವೆ’ಯ ಕುರಿತ ದೈವೋಕ್ತಿ : ಏನಾಯಿತು? ಜನರೆಲ್ಲರೂ ಮನೆಮಾಳಿಗೆಗಳನ್ನು ಏರಿ ಸಡಗರದಿಂದ ಇರುವುದೇಕೆ?


ಇಸ್ರಯೇಲನ್ನು ಕಬಳಿಸಲಾಗಿದೆ. ಈಗದು ಅನ್ಯಜನಾಂಗಗಳ ಮಧ್ಯೆ ಯಾರಿಗೂ ಬೇಡವಾದ ಮಡಕೆಯಂತಿದೆ.


ಆ ಗೋಡೆಯೆಂಬ ಕುಂಬಾರನ ಮಡಕೆಯ ಚೂರಿನಿಂದ, ಬೆಂಕಿಯ ಒಲೆಯಿಂದ ಕೆಂಡವನ್ನು ತೆಗೆಯುವುದಕ್ಕಾಗಲೀ ತೊಟ್ಟಿಯ ನೀರನ್ನು ತೋಡಿಕೊಳ್ಳುವುದಕ್ಕಾಗಲೀ ಸಾಧ್ಯವಾಗದು.”


ಗೋಣಿತಟ್ಟನುಟ್ಟು ತಿರುಗುತಿಹರು ಹಾದಿಬೀದಿಗಳಲಿ, ಕಣ್ಣೀರಿಡುತ ಸೊರಗಿಹರು ಮಳಿಗೆಗಳಲಿ, ಬೀದಿ ಚೌಕಗಳಲಿ.


ನೀ ಬಡಿದು ಹಾಕುವೆ ಕಬ್ಬಿಣದ ಗದೆಯಿಂದವರನು I ನೀ ಒಡೆದು ಹಾಕುವೆ ಮಣ್ಣಿನ ಮಡಕೆಯಂತವರನು"II


ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರಪಡಿಸಿರಿ, ಕಿವಿಮಾತಾಗಿ ಕೇಳಿದ್ದನ್ನು ಮನೆಮಾಳಿಗೆಯ ಮೇಲೆ ನಿಂತು ಸಾರಿರಿ.


“ಆಗ ನೀನು, ನಿನ್ನ ಸಂಗಡ ಬಂದವರ ಕಣ್ಣೆದುರಿಗೇ ಆ ಮಣ್ಣಿನ ಮಡಕೆಯನ್ನು ಒಡೆದುಬಿಟ್ಟು ಅವರಿಗೆ ಹೀಗೆಂದು ನುಡಿ :


ಸರ್ವಶಕ್ತ ಸರ್ವೇಶ್ವರನ ಸಂದೇಶವಿದು - ಕುಂಬಾರ ಮಾಡಿದ ಮಣ್ಣಿನ ಮಡಕೆಯನ್ನು ಒಡೆದುಹಾಕಿದ ಮೇಲೆ ಸರಿಪಡಿಸಲಾಗದು. ಅಂತೆಯೇ ನಾನು ಈ ಜನರನ್ನು ಹಾಗು ನಗರವನ್ನು ಒಡೆದುಹಾಕುವೆನು. ಹೂಣಲು ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಹೆಣಗಳನ್ನು ಈ ತೋಫೆತಿನಲ್ಲೇ ಹೂಣುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು