Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:46 - ಕನ್ನಡ ಸತ್ಯವೇದವು C.L. Bible (BSI)

46 ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷ್ ದೇವತೆಯ ಭಕ್ತರು ನಾಶವಾದರು. ನಿಮ್ಮ ಗಂಡುಹೆಣ್ಣು ಮಕ್ಕಳು ಗಡೀಪಾರಾಗಿ ಸೆರೆಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 “ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ? ಕೆಮೋಷಿನ ಭಕ್ತರು ನಾಶವಾದರು; ನಿನ್ನ ಗಂಡು, ಹೆಣ್ಣುಮಕ್ಕಳು ಗಡೀಪಾರಾಗಿ ಸೆರೆಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷಿನ ಭಕ್ತರು ನಾಶವಾದರು; ನಿನ್ನ ಗಂಡುಹೆಣ್ಣುಮಕ್ಕಳು ಗಡೀಪಾರಾಗಿ ಸೆರೆಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಮೋವಾಬ್ಯರೇ, ನಿಮಗೆ ಕೇಡು ಕಾದಿದೆ. ಕೆಮೋಷಿನ ಭಕ್ತರು ನಾಶವಾಗುತ್ತಿದ್ದಾರೆ. ನಿಮ್ಮ ಮಕ್ಕಳನ್ನು ಬಂಧಿಗಳನ್ನಾಗಿಯೂ ಸೆರೆಯಾಳುಗಳನ್ನಾಗಿಯೂ ತೆಗೆದುಕೊಂಡು ಹೋಗಲಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಮೋವಾಬೇ, ನೀನೇ ಅಯ್ಯೋ! ಕೆಮೋಷಿನ ಜನರು ನಾಶವಾದರು; ಏಕೆಂದರೆ ನಿನ್ನ ಗಂಡು ಹೆಣ್ಣುಮಕ್ಕಳು, ಗಡೀಪಾರಾಗಿ ಸೆರೆಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:46
7 ತಿಳಿವುಗಳ ಹೋಲಿಕೆ  

ಮೋವಾಬ್ಯರೇ, ನಿಮಗೆ ಧಿಕ್ಕಾರ! ಕೆಮೋಷಿನ ಭಕ್ತರೇ, ನಿಮಗೆ ಪರಿವಿನಾಶ! ಮಾಡಿಹನಾತ ತನ್ನ ಕುವರರನ್ನು ದೇಶಭ್ರಷ್ಟರನ್ನಾಗಿ ತನ್ನ ಕುವರಿಯರನ್ನು ಸೆರೆಯಾಳುಗಳನ್ನಾಗಿ ಅಮೋರಿಯರ ಅರಸ ಸೀಹೋನನಿಗೆ ಸೆರೆಯವರನ್ನಾಗಿ.


ಇಸ್ರಯೇಲ್ ವಂಶದವರು ನಂಬಿಕೆ ಇಟ್ಟಿದ್ದ ಬೇತೇಲ್ ಕ್ಷೇತ್ರವನ್ನು ಕುರಿತು ಆಶಾಭಂಗಪಟ್ಟಂತೆ ಆಗ ಮೋವಾಬ್ಯರು ತಮ್ಮ ಕೆಮೋಷ್ ದೇವತೆಯನ್ನು ಕುರಿತು ಆಶಾಭಂಗಪಡುವರು.


“ಮೋವಾಬೇ, ನಿನ್ನ ಸಾಧನೆಗಳಲ್ಲೇ, ಧನರಾಶಿಗಳಲ್ಲೇ ಭರವಸೆಯಿಟ್ಟೆ. ಆದುದರಿಂದ ನೀನು ಇದೀಗಲೆ ಶತ್ರುಗಳ ಕೈವಶವಾಗುವೆ. ಕೆಮೋಷ್ ಎಂಬ ನಿನ್ನ ದೇವತೆಯೂ ಅದರ ಭಕ್ತ ಯಾಜಕರೂ ಹಾಗೂ ರಾಜ್ಯಾಧಿಕಾರಿಗಳು ಸೆರೆಗೆ ಹೋಗುವರು ಒಟ್ಟಿಗೆ.


ಅವನು ಜೆರುಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಏರ್ಪಡಿಸಿದನು.


ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವತಂತ್ರಿಸಿಕೊಳ್ಳುವುದಿಲ್ಲವೇ? ಹಾಗೆಯೇ ನಮ್ಮ ದೇವರಾದ ಸರ್ವೇಶ್ವರ ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವತಂತ್ರಿಸಿಕೊಳ್ಳುವುದು ನ್ಯಾಯವಾಗಿದೆ.


ಇಸ್ರಯೇಲರ ಅರಸ ಸೊಲೊಮೋನನು ಸಿದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಜೆರುಸಲೇಮಿನ ಎದುರಿನಲ್ಲೂ ಎಘ್ನಪರ್ವತದ ದಕ್ಷಿಣದಿಕ್ಕಿನಲ್ಲೂ ಸ್ಥಾಪಿಸಿದ ಪೂಜಾಸ್ಥಳಗಳನ್ನು ಇವನು ಹೊಲೆಮಾಡಿದನು.


ಮೋವಾಬಿನ ಮಹಿಳೆಯರು ಅರ್ನೊನ್ ನದಿಯ ಹಾಯ್ಗಡಗಳಲಿ, ಅಲೆಯುತಿಹರು ಗೂಡಿಂದ ಹೊರದೂಡಲಾದ ಹಕ್ಕಿಮರಿಗಳ ಪರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು