Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:10 - ಕನ್ನಡ ಸತ್ಯವೇದವು C.L. Bible (BSI)

10 ಆದರೆ ನಾನು ಏಸಾವನನ್ನು ಬರೀ ಮೈಯಾಗಿಸಿಬಿಟ್ಟಿದ್ದೇನೆ. ಅವನ ಗುಪ್ತಸ್ಥಳಗಳನ್ನು ಬಟ್ಟಬೈಲಾಗಿಸಿಬಿಟ್ಟಿದ್ದೇನೆ. ಅವಿತುಕೊಳ್ಳಲಾಗದು. ಅವನ ಸಂತಾನದವರು, ಸಹೋದರರು ಹಾಗು ನೆರೆಹೊರೆಯವರು ಹಾಳಾದರು. ಅವನೂ ಇಲ್ಲವಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬಯಲುಮಾಡಿದ್ದೇನೆ, ಅಡಗಿಕೊಳ್ಳಲಾರನು; ಅವನ ಸಂತಾನದವರೂ, ಸಹೋದರರೂ ಮತ್ತು ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬೈಲುಮಾಡಿದ್ದೇನೆ, ಅವಿತುಕೊಳ್ಳಲಾರನು; ಅವನ ಸಂತಾನದವರೂ ಸಹೋದರರೂ ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಏಸಾವನಿಂದ ನಾನು ಎಲ್ಲವನ್ನು ಕಿತ್ತುಕೊಳ್ಳುವೆನು. ಅವನು ಅಡಗಿಕೊಳ್ಳುವ ಎಲ್ಲಾ ಸ್ಥಳಗಳನ್ನು ನಾನು ಪತ್ತೆ ಹಚ್ಚುವೆನು. ಅವನು ನನ್ನ ಕಣ್ಣು ತಪ್ಪಿಸಲು ಸಾಧ್ಯವಿಲ್ಲ. ಅವನ ಮಕ್ಕಳು, ಬಂಧುಗಳು ಮತ್ತು ನೆರೆಹೊರೆಯವರು ಸತ್ತುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ನಾನು ಏಸಾವನನ್ನು ಬರಿದು ಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ, ಅವನ ನೆರೆಯವರೂ, ಅವನೂ ಇಲ್ಲವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:10
13 ತಿಳಿವುಗಳ ಹೋಲಿಕೆ  

ಬೈಗಿನಲ್ಲಿ ಇಗೋ, ಎಲ್ಲೆಲ್ಲೂ ಭಯ, ಬೆಳಗಾದಾಗ ಅವೆಲ್ಲ ಮಾಯ; ಇದೇ ನಮ್ಮನ್ನು ಸೂರೆಮಾಡುವವರ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು !.


ಅಂತೆಯೇ, “ನಾನು ಯಕೋಬನನ್ನು ಪ್ರೀತಿಸಿದೆನು. ಏಸಾವನನ್ನು ದ್ವೇಷಿಸಿದೆನು,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ತೇಮಾನ್ ನಾಡೇ, ನಿನ್ನ ಶೂರರು ದಿಗ್ಭ್ರಾಂತರಾಗುವರು; ಏಸಾವಿನ ಪ್ರಾಂತ್ಯದಲ್ಲಿ ಎಲ್ಲರೂ ಹತರಾಗುವರು.


ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವಿತುಕೊಂಡರೂ ಅವರನ್ನು ಹುಡುಕಿ ಅಲ್ಲಿಂದ ಹಿಡಿದುತರುವೆನು. ನನ್ನ ಕಣ್ಣುತಪ್ಪಿಸಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ಅವರನ್ನು ಕಚ್ಚುವಂತೆ ಘಟಸರ್ಪಕ್ಕೆ ಆಜ್ಞೆಮಾಡುವೆನು.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?


ಹೆಸರು ಹಿಡಿದು ನಿನ್ನ ಕರೆಯುವ ಸರ್ವೇಶ್ವರ ನಾನು ಕೊಡುವೆ ನಾ ನಿನಗೆ ಕತ್ತಲಲಿ ಬಚ್ಚಿಟ್ಟ ಭಂಡಾರಗಳನು ಗುಪ್ತಸ್ಥಳಗಳಲ್ಲಿ ಮರೆಮಾಡಿರುವ ನಿಧಿನಿಕ್ಷೇಪಗಳನು. ಈ ಪರಿ ಅರಿತುಕೊಳ್ಳುವೆ ನೀನು ನಾನೇ ಇಸ್ರಯೇಲರ ದೇವರೆಂಬುದನು.


ಪ್ರಭುವು ನ್ಯಾಯಪ್ರಿಯನು, ಭಕ್ತಜನರ ಪರಿಪಾಲಕನು I ಚಿರವುಳಿಸುವನು ಇವರನು, ಅಳಿಸುವನು ದುರುಳರ ಪೀಳಿಗೆಯನು II


ನಿನ್ನ ಉಡುಗೆಯನ್ನು ನಿನ್ನ ಕಣ್ಮುಂದೆಯೇ ಕೀಳಿಸುವೆನು. ನೀನು ಅತ್ಯಾಚಾರಕ್ಕೆ ಈಡಾಗುವೆ.


‘ಸಿಯೋನ್’ ನಾರಿಮಣಿಯೇ, ನಿನ್ನ ದೋಷದ ಫಲವನ್ನು ಅನುಭವಿಸಿ ಆಗಿದೆ. ಸರ್ವೇಶ್ವರನು ಮತ್ತೆ ಒಯ್ಯನು ನಿನ್ನನ್ನು ಸೆರೆಗೆ. ‘ಎದೋಮ್’ ನಾರಿಮಣಿಯೇ, ನಿನ್ನ ದೋಷದ ನಿಮಿತ್ತ ಸರ್ವೇಶ್ವರನು ನಿನ್ನನ್ನು ದಂಡಿಸುವನು ನಿನ್ನ ಪಾಪಾಕ್ರಮಗಳನ್ನು ಬಯಲಿಗೆ ಎಳೆಯುವನು.


ಆದರೆ ಏಸಾವಿನ ಆಸ್ತಿಪಾಸ್ತಿ ಸಂಪೂರ್ಣವಾಗಿ ಸೂರೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು