Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:11 - ಕನ್ನಡ ಸತ್ಯವೇದವು C.L. Bible (BSI)

11 ನೀನು ನಿನ್ನ ಅನಾಥರನ್ನು ನನಗೆ ಬಿಡು. ನಾನೇ ಅವರನ್ನು ನೋಡಿಕೊಳ್ಳುತ್ತೇನೆ. ನಿನ್ನ ವಿಧವೆಯರು ನನ್ನಲ್ಲಿ ಭರವಸೆ ಇಡಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸೆಯಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸವಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಿನ್ನ ಅನಾಥಮಕ್ಕಳನ್ನು ನಾನು ಸಂರಕ್ಷಿಸುವೆನು. ನಿನ್ನ ವಿಧವೆಯರು ನನ್ನಲ್ಲಿ ಭರವಸೆ ಇಡಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು. ನಾನೇ ರಕ್ಷಿಸುವೆನು. ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:11
12 ತಿಳಿವುಗಳ ಹೋಲಿಕೆ  

ದಿವ್ಯಧಾಮದಲ್ಲಿಹ ಆ ದೇವ I ತಬ್ಬಲಿಗೆ ತಂದೆ, ವಿಧವೆಗಾಶ್ರಯ II


ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.


ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆ ತೋರಿಸುವವನು ನೀನೇ,” ಎಂದು ಹೇಳು.


ದಿಕ್ಕಿಲ್ಲದೆ ಒಬ್ಬಂಟಿಗಳಾಗಿರುವ ವಿಧವೆ ದೇವರ ಮೇಲೆ ಭರವಸೆಯಿಟ್ಟು ಹಗಲಿರುಳು ಪ್ರಾರ್ಥನೆಗಳಲ್ಲೂ ವಿಜ್ಞಾಪನೆಗಳಲ್ಲೂ ನಿರತಳಾಗಿರುತ್ತಾಳೆ.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಹೀಗಿರುವಲ್ಲಿ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಹೆಚ್ಚುಮಂದಿ ನಿರಪರಾಧಿಗಳೂ ಅಪಾರ ಪಶುಪ್ರಾಣಿಗಳೂ ಇರುವ ನಿನೆವೆ ಮಹಾನಗರದ ಬಗ್ಗೆ ನಾನು ಇನ್ನೆಷ್ಟು ಚಿಂತೆಪಡಬೇಕು?” ಎಂದರು.


ರಕ್ಷಿಸುವನು ಪ್ರಭು ಪರದೇಶಿಗಳನು I ಆದರಿಸುವನು ಅನಾಥರನು, ವಿಧವೆಯರನು I ನಿರ್ಮೂಲ ಮಾಡುವನು ದುರ್ಜನರ ಮಾರ್ಗವನು II


ಅಬಲರಿಗೆ, ಅನಾಥರಿಗೆ ದೊರಕಿಸಿರಿ ನ್ಯಾಯವನು I ಕಾದಿರಿಸಿರಿ ದೀನದಲಿತರ ಹಕ್ಕು ಬಾಧ್ಯತೆಯನು II


ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯ ದೊರಕಿಸುತ್ತಾರೆ; ಪರದೇಷಿಗಳಾದವರಿಗೆ ಪ್ರೀತಿಯಿಂದ ಅನ್ನ ವಸ್ತ್ರಗಳನ್ನು ನೀಡುತ್ತಾರೆ.


ಒಬ್ಬರಿಗೊಬ್ಬರು ಪ್ರೀತಿ ಕರುಣೆಯನ್ನು ತೋರಿಸಿರಿ. ವಿಧವೆಯರು, ಅನಾಥರು, ವಿದೇಶಿಯರು, ಬಡವರು, ಇವರಾರನ್ನೂ ಶೋಷಣೆಮಾಡಬೇಡಿ. ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು