Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:14 - ಕನ್ನಡ ಸತ್ಯವೇದವು C.L. Bible (BSI)

14 “ಎದೋಮೇ, ಸರ್ವೇಶ್ವರನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ. ‘ನೀವು ಒಟ್ಟಿಗೆ ಸೇರಿ ಯುದ್ಧಕ್ಕೆ ಹೊರಟು, ಎದೋಮಿನ ಮೇಲೆ ದಾಳಿಮಾಡಿರಿ’ ಎಂದು ಸೇವಕನ ಮೂಲಕ ರಾಷ್ಟ್ರಗಳಿಗೆ ಹೀಗೆ ಹೇಳಿಕಳುಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ - ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋವಿುನ ಮೇಲೆ ಬೀಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನ ಒಂದು ಸಂದೇಶವನ್ನು ಕೇಳಿದೆ. ಯೆಹೋವನು ಎಲ್ಲಾ ಜನಾಂಗಗಳಿಗೆ ಸಂದೇಶವಾಹಕರನ್ನು ಕಳುಹಿಸಿದ್ದನು. ಆ ಸಂದೇಶ ಹೀಗಿದೆ: “ನಿಮ್ಮ ಸೈನ್ಯಗಳನ್ನು ಒಂದಡೆ ಸೇರಿಸಿರಿ. ಯುದ್ಧಕ್ಕೆ ಸಿದ್ಧರಾಗಿರಿ. ಎದೋಮ್ ಜನಾಂಗದ ವಿರುದ್ಧ ದಂಡಯಾತ್ರೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರಿಂದ ನಾನು ಸುದ್ದಿಯನ್ನು ಕೇಳಿದ್ದೇನೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ; “ನೀವು ಒಟ್ಟುಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:14
12 ತಿಳಿವುಗಳ ಹೋಲಿಕೆ  

ಫರೋಹನ ಸಾಮಂತರಾಜರು ಚೊವನಿನಲ್ಲಿದ್ದಾರೆ. ಅವನ ರಾಯಭಾರಿಗಳು ಹಾನೇಸನ್ನು ತಲುಪಿದ್ದಾರೆ.


ಇದೂ ಅಲ್ಲದೆ, ನೀವು ರಣಕಹಳೆಗಳನ್ನೂ ಸಮರಗಳ ಸುದ್ದಿಯನ್ನೂ ಕೇಳುವಿರಿ. ಆಗ ಕಳವಳಪಡದಂತೆ ಎಚ್ಚರಿಕೆಯಿಂದಿರಿ. ಇವೆಲ್ಲವು ಸಂಭವಿಸಲೇಬೇಕು. ಆದರೆ ಇದಿನ್ನೂ ಕಾಲಾಂತ್ಯವಲ್ಲ.


ನಿಮ್ಮ ಎದೆ ಕುಂದದಿರಲಿ. ನಾಡಿನಲ್ಲಿ ಕಿವಿಗೆ ಬೀಳುವ ಸುದ್ದಿ ನಿಮ್ಮನ್ನು ಹೆದರಿಸದಿರಲಿ. ಒಂದು ವರ್ಷ ಒಂದು ಸುದ್ದಿಯಾದರೆ ಮತ್ತೊಂದು ವರ್ಷ ಮತ್ತೊಂದು ಸುದ್ದಿ. ಹಿಂಸಾಚಾರ ಪ್ರಬಲವಾಗುತ್ತಿದೆ ನಾಡಿನಲ್ಲಿ. ಅಧಿಕಾರಿಗೆ ಅಧಿಕಾರಿಯೇ ವಿರೋಧಿ ಅಲ್ಲಿ.


ಸರ್ವೇಶ್ವರನು ಬಾಬಿಲೋನನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಅದನ್ನು ಮೇದ್ಯರ ಅರಸರು ನಾಶಮಾಡುವಂತೆ ಅವರನ್ನು ಪ್ರೇರೇಪಿಸಿದ್ದಾರೆ. ಆ ನಾಶವು, ಸರ್ವೇಶ್ವರನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ ಆಗಿದೆ. ‘ಮೇದ್ಯರೇ, ಬಾಣಗಳನ್ನು ಮಸೆಯಿರಿ, ಯುದ್ಧಸನ್ನದ್ಧರಾಗಿರಿ;


ಅವನ ಮೇಲೆ ಭಯಾತ್ಮನನ್ನು ಬರಮಾಡುವೆನು, ಅವನ ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಅಲ್ಲೆ ಕತ್ತಿಗೆ ತುತ್ತಾಗುವಂತೆ ಮಾಡುವೆನು.”


‘ಇದೋ, ರಾಷ್ಟ್ರಗಳಲ್ಲಿ ನಿನ್ನನ್ನು ಕನಿಷ್ಠವಾಗಿಸುವೆನು, ಜನರ ತಾತ್ಸಾರಕ್ಕೆ ಈಡಾಗಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು