Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:15 - ಕನ್ನಡ ಸತ್ಯವೇದವು C.L. Bible (BSI)

15 ‘ಇದೋ, ರಾಷ್ಟ್ರಗಳಲ್ಲಿ ನಿನ್ನನ್ನು ಕನಿಷ್ಠವಾಗಿಸುವೆನು, ಜನರ ತಾತ್ಸಾರಕ್ಕೆ ಈಡಾಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಗೋ ಎದೋಮೇ, ನೀನು ಜನಾಂಗಗಳಲ್ಲಿ ಹೀನವಾಗಿ ಜನರ ತಾತ್ಸಾರಕ್ಕೆ ಈಡಾಗುವಂತೆ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಗೋ [ಎದೋಮೇ,] ನೀನು ಜನಾಂಗಗಳಲ್ಲಿ ಹೀನವಾಗಿ ಜನರ ತಾತ್ಸಾರಕ್ಕೆ ಈಡಾಗುವಂತೆ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಎದೋಮೇ, ನಾನು ನಿನಗೆ ಪ್ರಮುಖನಾಗಲು ಬಿಡುವುದಿಲ್ಲ. ಪ್ರತಿಯೊಬ್ಬರು ನಿನ್ನನ್ನು ದ್ವೇಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಏಕೆಂದರೆ ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿಯೂ, ಜನರ ತಿರಸ್ಕಾರಕ್ಕೆ ಈಡಾಗುವಂತೆಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:15
8 ತಿಳಿವುಗಳ ಹೋಲಿಕೆ  

ಗರ್ವ ಹೃದಯಿಗಳನಾತ ಚದರಿಸಿರುವನು I ಪ್ರದರ್ಶಿಸಿರುವನು ತನ್ನ ಬಾಹುಬಲವನು II


ಇದನ್ನು ನನ್ನ ಶತ್ರುಗಳು ನೋಡುವರು. “ನಿನ್ನ ದೇವರಾದ ಸರ್ವೇಶ್ವರನೆಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


“ಎದೋಮೇ, ಇಗೋ, ರಾಷ್ಟ್ರಗಳಲ್ಲಿ ನಿನ್ನನ್ನು ಅತ್ಯಲ್ಪಳನ್ನಾಗಿ ಮಾಡುತ್ತೇನೆ. ನೀನು ಬಹು ತಾತ್ಸಾರಕ್ಕೆ ಗುರಿಯಾಗುವೆ.


ದಿಗ್ಭ್ರಾಂತರಾಗುವರಿದೋ ಹಿಂದೆಂದು ಇಲ್ಲದಂತೆ ದುರುಳರು I ದೇವರಿಂದ ತಿರಸ್ಕೃತವಾದ ಅವರು ಪರಾಜಿತರಾಗುವರು I ದಿಕ್ಕುಪಾಲಾಗುವುವು ನಿಮ್ಮ ಮೇಲೆ ಬಿದ್ದವರ ಮೂಳೆಗಳು II


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


“ಎದೋಮೇ, ಸರ್ವೇಶ್ವರನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ. ‘ನೀವು ಒಟ್ಟಿಗೆ ಸೇರಿ ಯುದ್ಧಕ್ಕೆ ಹೊರಟು, ಎದೋಮಿನ ಮೇಲೆ ದಾಳಿಮಾಡಿರಿ’ ಎಂದು ಸೇವಕನ ಮೂಲಕ ರಾಷ್ಟ್ರಗಳಿಗೆ ಹೀಗೆ ಹೇಳಿಕಳುಹಿಸಿದ್ದಾರೆ.


ಪರ್ವತಾಗ್ರಗಳಲ್ಲಿ ನೆಲೆಗೊಂಡ ಜನತೆಯೇ, ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನತೆಯೇ, ನಿನ್ನ ಭೀಕರತ್ವವೆಲ್ಲಿ? ನಿನ್ನೆದೆಯ ಗರ್ವ ನಿನ್ನನ್ನು ಮೋಸಗೊಳಿಸಿದೆ. ಹದ್ದಿನಂತೆ ನೀನು ಉನ್ನತಸ್ಥಾನದಲ್ಲಿ ಗೂಡನ್ನು ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ನನ್ನ ನುಡಿ,” ಎನ್ನುತ್ತಾರೆ ಸರ್ವೇಶ್ವರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು