Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:2 - ಕನ್ನಡ ಸತ್ಯವೇದವು C.L. Bible (BSI)

2 ಆದುದರಿಂದ ಇಗೋ ಕೇಳಿ: ನನ್ನ ಅಪ್ಪಣೆಯ ಮೇರೆಗೆ ಶತ್ರುಗಳು ರಬ್ಬಾ ಎಂಬ ಅಮ್ಮೋನ್ಯರ ನಗರದ ಮೇಲೆ ಬಿದ್ದು ಯುದ್ಧ ಘೋಷಣೆ ಮಾಡುವ ದಿನಗಳು ಬರುವುವು. ಆ ನಗರ ಹಾಳುದಿಬ್ಬವಾಗುವುದು. ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಯೇಲ್ ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆದದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು ಯುದ್ಧಘೋಷಮಾಡುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವದು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಹೀಗೆನ್ನುತ್ತಾನೆ: “ಅಮ್ಮೋನಿನ ರಬ್ಬಾ ನಿವಾಸಿಗಳು ಯುದ್ಧದ ಧ್ವನಿಗಳನ್ನು ಕೇಳುವ ಕಾಲ ಬರಲಿದೆ. ಅಮ್ಮೋನಿನ ರಬ್ಬಾ ನಾಶವಾಗಿ ಹಾಳಾದ ಕಟ್ಟಡಗಳ ಗುಡ್ಡವಾಗುವುದು. ಅದರ ಸುತ್ತಮುತ್ತಲಿನ ಪಟ್ಟಣಗಳನ್ನು ಸುಟ್ಟುಹಾಕಲಾಗುವುದು. ಆ ಜನರು ಇಸ್ರೇಲರಿಗೆ ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಒತ್ತಾಯಿಸಿದರು. ಆದರೆ ಇಸ್ರೇಲರು ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಅವರನ್ನು ಒತ್ತಾಯಿಸುವರು.” ಯೆಹೋವನು ಹೀಗೆನ್ನುತ್ತಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದ್ದರಿಂದ ಇಗೋ, ದಿನಗಳು ಬರುವುವು,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ಮಾಡುವೆನು; ಅದು ಹಾಳು ದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯವನ್ನು ಹೊಂದುವುದು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:2
22 ತಿಳಿವುಗಳ ಹೋಲಿಕೆ  

ಅಯ್ಯೋ, ನನ್ನ ಕರುಳು ಯಾತನೆಯಿಂದ ಕಿತ್ತುಬರುವಂತಿದೆ. ಅಕಟಾ ! ನನ್ನ ಗುಂಡಿಗೆಯ ಪಕ್ಕೆಗಳು ಸೀಳುವಂತಿದೆ, ಹೃದಯ ತಳಮಳಗೊಂಡಿದೆ ! ಇನ್ನು ಬಾಯಿಮುಚ್ಚಿಕೊಂಡಿರಲು ನನ್ನಿಂದಾಗದು; ನನ್ನ ಮನವೇ, ಕಾಳಗದ ಕಹಳೆಯನ್ನೂ ಯುದ್ಧದ ಕೋಲಾಹಲವನ್ನೂ ಕೇಳುತ್ತಿರುವೆ, ಅಲ್ಲವೆ?


ಅಮ್ಮೋನ್ಯರ ರಬ್ಬಾ ಪಟ್ಟಣಕ್ಕೂ ಜುದೇಯದಲ್ಲಿ ಕೋಟೆಕೊತ್ತಲಗಳಿಂದ ಕೂಡಿದ ಜೆರುಸಲೇಮಿಗೂ ಆ ಖಡ್ಗ ಬರುವುದಕ್ಕೆ ದಾರಿಗಳನ್ನು ಮಾಡು.


(ರೆಫಾಯರೊಳಗೆ ಬಾಷಾನಿನ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈಯಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)


ಆದಕಾರಣ ನಾನು ರಬ್ಬದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು. ಆಗ ಯುದ್ಧಾರ್ಭಟವೂ ಚಂಡಮಾರುತದಂಥ ಪ್ರಚಂಡ ಕಾದಾಟವೂ ಉಂಟಾಗುವುವು.


ರಾಜರು ಸಾಮಾನ್ಯವಾಗಿ ಯುದ್ಧಕ್ಕೆ ಹೊರಡುವ ವಸಂತಕಾಲ ಅದು. ದಾವೀದನು ಯೋವಾಬನನ್ನು, ತನ್ನ ಸೇವಕರನ್ನು ಹಾಗು ಎಲ್ಲ ಇಸ್ರಯೇಲರನ್ನು ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ದಾವೀದನು ಜೆರುಸಲೇಮಿನಲ್ಲೇ ಇದ್ದನು.


ಅಮ್ಮೋನ್ಯರನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಇಸ್ರಯೇಲಿಗೆ ಮಕ್ಕಳಿಲ್ಲವೆ? ಅದಕ್ಕೆ ನೆರವಾಗಲು ನೆಂಟನಿಲ್ಲವೆ? ಮಲ್ಕಾಮ್ ದೇವತೆಯು ಗಾದಿನ ನಾಡನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ನಗರಗಳಲ್ಲಿ ವಾಸಿಸುತ್ತಿರುವುದೇಕೆ?


ಪ್ರಭು, ನಿನ್ನ ನ್ಯಾಯತೀರ್ಪನು ಕುರಿತು I ಸಿಯೋನ್ ನಗರವು ಆನಂದಪಟ್ಟಿತು I ಜುದೇಯ ಪ್ರಾಂತ್ಯವು ಹರ್ಷಗೊಂಡಿತು II


ಸಿಯೋನ್ ಪಟ್ಟಣಿಗರು ಹರ್ಷಗೊಳ್ಳಲಿ I ಯೆಹೂದ್ಯ ನಗರಗಳು ಆನಂದಪಡಲಿ I ನಿನ್ನ ನ್ಯಾಯವನು ನೆನಪಿಸಿಕೊಳ್ಳಲಿ II


ಇಸ್ರಯೇಲರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಹೆಷ್ಬೋನಿನಲ್ಲೂ ಅದಕ್ಕೆ ಸೇರಿದ ಗ್ರಾಮಗಳಲ್ಲೂ ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲೂ ವಾಸಿಸಿದರು.


ಆಗ ದಕ್ಷಿಣವಲಯದವರು ಏಸಾವಿನ ಪರ್ವತವನ್ನು ಸ್ವಾಧೀನಪಡಿಸಿಕೊಳ್ಳುವರು. ಪಶ್ಚಿಮದ‌ ಬಯಲು ಸೀಮೆಯವರು ಫಿಲಿಷ್ಟಿಯವನ್ನೂ ಎಫ್ರಯಿಮ್ ಮತ್ತು ಸಮಾರ್ಯದ ಭೂಮಿಯನ್ನೂ ವಶಪಡಿಸಿಕೊಳ್ಳುವರು. ಬೆನ್ಯಾಮಿನ ವಂಶಜರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು.


ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಪೀಡಿಸುವ ಶತ್ರುಗಳ ಮೇಲೆ ಯುದ್ಧಕ್ಕೆ ಹೊರಡುವಾಗ ಆ ಕಹಳೆಗಳನ್ನು ಆರ್ಭಟವಾಗಿ ಮೊಳಗಿಸಬೇಕು. ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ನೆನಪಿಗೆ ತಂದುಕೊಂಡು ಶತ್ರುಗಳ ಕೈಯಿಂದ ನಿಮ್ಮನ್ನು ಬಿಡಿಸುವರು.


ಅದರಲ್ಲಿ ಇರುವ ಎಲ್ಲ ಸಾಮಗ್ರಿಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ, ಅದರಲ್ಲಿರುವ ಎಲ್ಲ ಸಾಮಾನುಗಳನ್ನೂ ನಿಮ್ಮ ದೇವರಾದ ಸರ್ವೇಶ್ವರನಿಗೆ ನಿಶ್ಯೇಷವಾಗಿ ಸುಟ್ಟುಬಿಡಬೇಕು. ಅದು ಪುನಃ ಯಾವಾಗಲೂ ಹಾಳುದಿಬ್ಬವಾಗಿರಬೇಕು. ಅದನ್ನು ಪುನಃ ಕಟ್ಟಬಾರದು.


ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬವರ ಪ್ರಾಂತ್ಯಗಳಲ್ಲಿ ಬೇತ್ ಷೆಯಾನ್, ಇಬ್ಲೆಯಾಮ್, ದೋರ್ ಎಂಬ ನಗರಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ್, ತಾನಕ್, ಮೆಗಿದ್ದೋ ಎಂಬ ನಗರಗಳೂ ಅವುಗಳಿಗೆ ಸೇರಿದ ಊರುಗಳೂ ಸಿಕ್ಕಿದವು.


ಅವರು ಮತ್ತೆ ಯೆಹೋಶುವನಿಗೆ , “ನಮ್ಮ ಮಲೆನಾಡು ನಮಗೆ ಸಾಲುವುದಿಲ್ಲ. ಬೇತ್ ಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರು ಕಬ್ಬಿಣದ ರಥವುಳ್ಳವರು,” ಎಂದರು.


ದಮಸ್ಕಸ್ ವಿಷಯವಾಗಿ ದೈವೋಕ್ತಿ : “ಇದೋ, ದಮಸ್ಕಸ್ ಊರಾಗಿ ಉಳಿಯದು, ಅದೊಂದು ಹಾಳುದಿಬ್ಬವಾಗುವುದು.


ಒಟ್ಟಿಗೆ ಎರಗುವರು ಫಿಲಿಷ್ಟಿಯರ ಮೇಲೆ ಪಶ್ಚಿಮದಲ್ಲಿ; ಜೊತೆಯಾಗಿ ಸೂರೆಮಾಡುವರು ಜನರನ್ನು ಪೂರ್ವದಲ್ಲಿ; ಗೆಲ್ಲುವರು ಎದೋಮ್ ಮೊವಾಬ್ ನಾಡುಗಳನ್ನು; ಅಧೀನವಾಗಿಸುವರು ಅಮೋನ್ಯ ಜನರನ್ನು.


ಇಸ್ರಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ, ನಿನಗೆ ಸಮಯವು ಸಮೀಪಿಸಿದೆ; ಇದೇ ನಿನ್ನ ಅಪರಾಧದ ಕಡೆಗಾಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು