Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:23 - ಕನ್ನಡ ಸತ್ಯವೇದವು C.L. Bible (BSI)

23 ದಮಸ್ಕಸ್ ಅನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ. ಅಶುಭ ಸಮಾಚಾರವನ್ನು ಕೇಳಿ ಕರಗಿಹೋಗಿವೆ. ಸಮುದ್ರದಂತೆ ಅವು ತಲ್ಲಣಗೊಂಡು ಅಶಾಂತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ದಮಸ್ಕವನ್ನು ಕುರಿತದ್ದು. ಹಮಾತಿಗೂ ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭಸಮಾಚಾರವನ್ನು ಕೇಳಿ ಕರಗಿಹೋಗಿವೆ; ಸಮುದ್ರಕ್ಕೆ ತಲ್ಲಣಹತ್ತಿದೆ, ಸುಮ್ಮನಿರಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಈ ಸಂದೇಶವು ದಮಸ್ಕ ನಗರದ ಕುರಿತಾಗಿದೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಹೆದರಿಕೊಂಡಿವೆ. ಅವು ಕೆಟ್ಟ ಸಮಾಚಾರವನ್ನು ಕೇಳಿದ್ದರಿಂದ ಹೆದರಿಕೊಂಡಿವೆ. ಅವುಗಳು ನಿರಾಶೆಗೊಂಡಿವೆ. ಅವು ಆತಂಕಪಡುತ್ತಿವೆ ಮತ್ತು ಭಯಪಡುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ದಮಸ್ಕದ ವಿಷಯವಾಗಿ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ, ಅವು ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯಪಟ್ಟಿವೆ; ಸಮುದ್ರದಂತೆ ಕಳವಳಪಡುತ್ತದೆ; ಅದು ಸುಮ್ಮನಿರಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:23
35 ತಿಳಿವುಗಳ ಹೋಲಿಕೆ  

ಕರ್ಕೆಮೀಷಿನ ಗತಿ ಕಲ್ನೋವಿಗೂ ಬಂತಲ್ಲವೇ? ಅರ್ಪದಿಗೆ ಬಂದ ಪಾಡು ಹಮಾತಿಗೂ ಬಂದಿತಷ್ಟೆ. ದಮಸ್ಕಸ್ಸಿನ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತು.


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಊರುಗಳ ದೇವರುಗಳು ಏನಾದರು? ಅವರು ಸಮಾರಿಯವನ್ನು ನನ್ನ ಕೈಯಿಂದ ತಪ್ಪಿಸಿ ಬಿಡಿಸಿಕೊಂಡರೋ?


“ಆದರೆ, ದುರುಳರು ಅಲ್ಲೋಲಕಲ್ಲೋಲವಾದ ಸಮುದ್ರದಂತೆ ಇದ್ದಾರೆ. ಅದು ಸುಮ್ಮನಿರದು - ಅದರ ಅಲೆಗಳು ಕೆಸರನ್ನೂ ಕೊಳಚೆಯನ್ನೂ ಕಕ್ಕುತ್ತಾ ಇರುತ್ತದೆ.


ಅಲ್ಲಿ ತನ್ನ ದಂಡನ್ನು ಇಬ್ಭಾಗವಾಗಿ ವಿಂಗಡಿಸಿ ರಾತ್ರಿವೇಳೆಯಲ್ಲಿ ಶತ್ರುಗಳ ಮೇಲೆ ಬಿದ್ದು ಸೋಲಿಸಿದನು. ಅಲ್ಲದೆ ದಮಸ್ಕಸ್ ಪಟ್ಟಣದ ಉತ್ತರಕ್ಕಿರುವ ಹೋಬಾ ಊರಿನತನಕ ಹಿಂದಟ್ಟಿದನು.


ನಿನೆವೆ ಬರಿದಾಗಿದೆ; ಬಟ್ಟಬರಿದಾಗಿ ಪಾಳುಬಿದ್ದಿದೆ; ಎದೆಕರಗಿದೆ, ಮೊಣಕಾಲುಗಳು ಅದರುತ್ತಿವೆ. ಎಲ್ಲರ ಸೊಂಟಗಳು ಮುರಿದಂತಾಗಿವೆ, ಅವರ ಮುಖಗಳು ಬಾಡಿಹೋಗಿವೆ.


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ್ ಮತ್ತು ಇವ್ವಾ ಎಂಬ ನಗರಗಳ ಅರಸರ ಗತಿ ಏನಾಯಿತು?” ಎಂದು ಪತ್ರ ಬರೆದು ದೂತರ ಸಮೇತ ಕಳುಹಿಸಿದನು.


ಅವರು ಬೆಟ್ಟವನ್ನು ಹತ್ತಿ ಚಿನ್ ಮರುಭೂಮಿಯಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನವರೆಗೆ ಆ ನಾಡನ್ನು ಸಂಚರಿಸಿ ನೋಡಿದರು.


ಅದಕ್ಕೆ ಪ್ರತ್ಯುತ್ತರವಾಗಿ ಅಬ್ರಾಮನು - “ಸ್ವಾಮಿ ಸರ್ವೇಶ್ವರಾ, ನನಗೇ ಏನು ಕೊಟ್ಟರೇನು? ನಾನು ಪುತ್ರಸಂತಾನವಿಲ್ಲದವನು. ನನ್ನ ಮನೆಮಾರುಗಳಿಗೆ ಉತ್ತರಾಧಿಕಾರಿ ದಮಸ್ಕದ ಎಲೀಯೆಜರನೇ ಹೊರತು ಮತ್ತಾರೂ ಇಲ್ಲ;


ನಾನು ದಮಸ್ಕಸಿನಲ್ಲಿದ್ದಾಗ ರಾಜ ಅರೇತನ ಕೈಕೆಳಗಿದ್ದ ರಾಜ್ಯಪಾಲನು ನನ್ನನ್ನು ಸೆರೆಹಿಡಿಯುವ ಸಲುವಾಗಿ ಪಟ್ಟಣದ ದ್ವಾರಗಳಿಗೆ ಕಾವಲಿರಿಸಿದ್ದನು.


ಅನೇಕ ದಿನಗಳವರೆಗೆ ಸೂರ್ಯನನ್ನಾಗಲಿ ನಕ್ಷತ್ರಗಳನ್ನಾಗಲಿ ನೋಡಲಾಗಲಿಲ್ಲ. ಗಾಳಿ ತೀವ್ರವಾಗಿತ್ತು. ಕಟ್ಟಕಡೆಗೆ ನಾವು ಬದುಕುವ ಆಶೆಯನ್ನೇ ತೊರೆಯಬೇಕಾಯಿತು.


ಈ ಹೊಸ ಮಾರ್ಗವನ್ನು ಅವಲಂಬಿಸುವವರು ಹೆಂಗಸರೇ ಆಗಿರಲಿ, ಗಂಡಸರೇ ಆಗಿರಲಿ, ದಮಸ್ಕಸಿನಲ್ಲಿದ್ದರೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದು ತರಬೇಕೆಂದಿದ್ದನು. ಇದಕ್ಕೆ ಬೇಕಾದ ಪತ್ರಗಳನ್ನು ಕೇಳುವುದಕ್ಕಾಗಿ ಪ್ರಧಾನಯಾಜಕನ ಬಳಿಗೆ ಹೋದನು. ದಮಸ್ಕಸಿನಲ್ಲಿರುವ ಪ್ರಾರ್ಥನಾಮಂದಿರದ ಅಧಿಕಾರಿಗಳಿಗೆ ತೋರಿಸಲು ಆ ಪತ್ರಗಳನ್ನು ಪಡೆದನು.


ಕಲ್ನೆ ಪಟ್ಟಣಕ್ಕೆ ಹೋಗಿ ನೋಡಿ. ಅಲ್ಲಿಂದ ಪ್ರಖ್ಯಾತ ಪಟ್ಟಣವಾದ ಹಮಾತಿಗೆ ನಡೆಯಿರಿ. ಹಮಾತಿನಿಂದ ಫಿಲಿಷ್ಟಿಯರ ಊರಾದ ಗತ್ ನಗರಕ್ಕೆ ಇಳಿದುಹೋಗಿರಿ. ಅವು ನಿಮ್ಮ ರಾಜ್ಯಗಳಿಗಿಂತ ದೊಡ್ಡವೋ? ಅವುಗಳ ಪ್ರಾಂತ್ಯ, ನಿಮ್ಮ ಪ್ರಾಂತ್ಯಕ್ಕಿಂತ ಹಿರಿದೋ?


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ್ ಮತ್ತು ಇವ್ವಾ ಎಂಬ ನಗರಗಳ ಅರಸರ ಗತಿ ಏನಾಯಿತು?” ಎಂದು ಪತ್ರ ಬರೆದು ದೂತರ ಸಮೇತ ಕಳುಹಿಸಿದನು.


ಈ ಕಾರಣ ಜೋಲುಬೀಳುವುವು ಎಲ್ಲರ ಕೈಗಳು; ಕರಗಿ ನೀರಾಗುವುವು ಎಲ್ಲರ ಹೃದಯಗಳು.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಆಗ ಆಸನು ಸರ್ವೇಶ್ವರನಾಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಸಿರಿಯಾದ ಅರಸ ಬೆನ್ಹದದನಿಗೆ ಕಳುಹಿಸಿ,


ಅಸ್ಸೀರಿಯಾದ ಅರಸನು ಸಮಾರಿಯಾ ಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಯೇಲರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರಿಯಾ ನಾಡನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು.


ದಾವೀದನು ಚೋಬದವರನ್ನು ಸಂಹರಿಸಿದಾಗ ಈ ರೆಜೋನನು ಚೋಬದ ಅರಸನೂ ತನ್ನ ಒಡೆಯನೂ ಆದ ಹದದೆಜೆರನನ್ನು ಬಿಟ್ಟು ಓಡಿಹೋಗಿ, ಕೆಲವು ಮಂದಿಯನ್ನು ಕೂಡಿಸಿಕೊಂಡು, ತಾನು ಅವರ ನಾಯಕನಾಗಿ, ಅವರೊಡನೆ ದಮಸ್ಕಕ್ಕೆ ಬಂದು ಅಲ್ಲಿ ಅರಸನಾದನು.


ಆಗ ಸಿಂಹಹೃದಯಿಗಳಾದ ಶೂರರ ಎದೆಯೂ ಕರಗಿ ನೀರಾಗುವುದು. ನಿಮ್ಮ ತಂದೆ ರಣವೀರನೆಂದೂ ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಯೇಲರು ಬಲ್ಲರಷ್ಟೆ.


ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನ ಹಮಾತಿನ ಅರಸನಾದ ತೋವಿಗೆ ಮುಟ್ಟಿತು.


ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗೆಡಿಸಿದರು. ನಾನಾದರೋ ನನ್ನ ದೇವರಾದ ಸರ್ವೇಶ್ವರನನ್ನೇ ಸಂಪೂರ್ಣವಾಗಿ ನಂಬಿ ಶ್ರದ್ಧೆಯಿಂದ ಅನುಸರಿಸಿದೆ.


ಇದನ್ನೆಲ್ಲಾ ಕೇಳಿ ನಮ್ಮ ಎದೆ ಒಡೆದುಹೋಗಿದೆ. ನಿಮ್ಮನ್ನು ಎದುರಿಸುವ ಧೈರ್ಯ ಯಾರಿಗೂ ಇಲ್ಲ. ನಿಮ್ಮ ದೇವರಾದ ಸರ್ವೇಶ್ವರರೊಬ್ಬರೇ ಪರಲೋಕದಲ್ಲೂ ಭೂಲೋಕದಲ್ಲೂ ದೇವರು.


ಮತ್ತು ‘ಯಾವನಾದರೂ ಧೈರ್ಯ ಕಡಿಮೆಯಾಗಿ ಅಂಜಿಕೊಂಡರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು’, ಎಂದು ಹೇಳಬೇಕು.


ಕಳವಳಗೊಂಡರು ಎದೋಮ್ಯರ ಕುಲನಾಯಕರು ಗಡಗಡನೆ ನಡುಗುತ್ತಿಹರು ಮೋವಾಬ್ಯರ ಮುಖಂಡರು. ಕರಗಿ ನೀರಾಗಿ ಹೋದರು ಕಾನಾನ್ ನಾಡಿನವರು.


ದಮಸ್ಕದ ಅಬಾನಾ ಹಾಗು ಪರ್ಪರ್ ಎಂಬ ನದಿಗಳು ಇಸ್ರಯೇಲರ ಎಲ್ಲಾ ನದಿ ಹೊಳೆಗಳಿಗಿಂತ ಉತ್ತಮವಾಗಿವೆಯಲ್ಲವೇ? ಸ್ನಾನದಿಂದ ವಾಸಿಯಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಿತ್ತಲ್ಲವೇ?” ಎಂದು ಹೇಳಿ, ಬಹಳ ಸಿಟ್ಟಿನಿಂದ ಹೊರಟುಹೋದನು.


ಕಾರಣ, ರಾಜಧಾನಿಯಾದ ದಮಸ್ಕಸ್ಸಿಗಿಂತ ಸಿರಿಯ ಹೆಚ್ಚಲ್ಲ, ರಾಜನಾದ ರೆಚೀನನಿಗಿಂತ ದಮಸ್ಕಸ್‍ ಹೆಚ್ಚಲ್ಲ. ಇಸ್ರಯೇಲಿನ ಬಗ್ಗೆ ಹೇಳುವುದಾದರೆ, ಅದು ಅರವತ್ತೈದು ವರ್ಷದೊಳಗೆ ನುಚ್ಚುನೂರಾಗುವುದು, ಅಖಂಡ ರಾಷ್ಟ್ರವಾಗಿ ಉಳಿಯದು.


ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಊರುಗಳ ದೇವರುಗಳು ಏನಾದರು? ಅವರು ಸಮಾರ್ಯವನ್ನು ನನ್ನ ಅರಸನ ಕೈಯಿಂದ ಬಿಡಿಸಿಕೊಂಡರೋ?


ಬಾಬಿಲೋನಿಯದ ಸೈನಿಕರು ಅವರನ್ನು ಹಿಂದಟ್ಟುತ್ತಾ ಜೆರಿಕೋವಿನ ಬೈಲಿನಲ್ಲಿ ಚಿದ್ಕೀಯನನ್ನು ಹಿಡಿದರು. ಹಮಾತ್ ನಾಡಿನ ರಿಬ್ಲದಲ್ಲಿದ್ದ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಬಳಿಗೆ ಅವನನ್ನು ತೆಗೆದುಕೊಂಡು ಬಂದರು.


ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನು ಹಾಗೂ ಚಾಹರಿನ ಉಣ್ಣೆಯನ್ನು ನಿನ್ನಲ್ಲಿ ತುಂಬಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು