ಯೆರೆಮೀಯ 49:24 - ಕನ್ನಡ ಸತ್ಯವೇದವು C.L. Bible (BSI)24 ದಮಸ್ಕಸ್ ಕುಂದಿದೆ, ಓಡಿಹೋಗಲು ಸಿದ್ಧವಿದೆ. ಅದಕ್ಕೆ ನಡುಕ ಹುಟ್ಟಿದೆ. ಪ್ರಸವವೇದನೆಗೆ, ಕಷ್ಟಸಂಕಟಕ್ಕೆ ಅದು ಒಳಗಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನಾವ್ಯಥೆಗಳಿಗೆ ಒಳಗಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ದಮಸ್ಕ ನಗರವು ನಿಬರ್ಲವಾಗಿದೆ. ಜನರು ಓಡಿಹೋಗಬಯಸುತ್ತಾರೆ, ಜನರು ಗಾಬರಿಗೊಂಡಿದ್ದಾರೆ. ಪ್ರಸವವೇದನೆಪಡುವ ಸ್ತ್ರೀಯಂತೆ ಸಂಕಟಪಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ದಮಸ್ಕವು ನಿತ್ರಾಣವಾಯಿತು; ಓಡಿಹೋಗುವುದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡಿದುಕೊಂಡಿದೆ; ಹೆರುವ ಸ್ತ್ರೀಯ ಹಾಗೆ ಸಂಕಟವೂ, ವೇದನೆಗಳೂ ಅದನ್ನು ಹಿಡಿದಿವೆ. ಅಧ್ಯಾಯವನ್ನು ನೋಡಿ |