Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:29 - ಕನ್ನಡ ಸತ್ಯವೇದವು C.L. Bible (BSI)

29 ಶತ್ರುಗಳು ಅವರ ಗುಡಾರಗಳನ್ನೂ ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಗುಡಾರದ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ ತೆಗೆದುಕೊಂಡು ಹೋಗುವರು. ದಿಗಿಲು ನಿಮ್ಮ ಸುತ್ತಮುತ್ತಲು ಆವರಿಸಿದೆ ಎಂದು ಅವರಿಗೆ ಕೂಗಿ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ‘ಸುತ್ತಮುತ್ತಲು ದಿಗಿಲು’ ಎಂಬುದಾಗಿ ಅವರ ಕಡೆಗೆ ಕೂಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಶತ್ರುಗಳು ಅವರ ಗುಡಾರಗಳನ್ನೂ ಹಿಂಡುಗಳನ್ನೂ ಅಪಹರಿಸಿಕೊಳ್ಳುವರು, ಅವರ ಪರದೆಗಳನ್ನೂ, ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ಸುತ್ತುಮುತ್ತಲು ದಿಗಿಲು ಎಂಬದಾಗಿ ಅವರ ಕಡೆಗೆ ಕೂಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅವರ ಗುಡಾರಗಳನ್ನು ಮತ್ತು ಹಿಂಡುಗಳನ್ನು ತೆಗೆದುಕೊಂಡು ಹೋಗಲಾಗುವುದು. ಅವರ ಗುಡಾರಗಳನ್ನು, ಅವರ ಎಲ್ಲಾ ವಸ್ತುಗಳನ್ನು ಎತ್ತಿಕೊಂಡು ಹೋಗಲಾಗುವುದು. ಅವರ ಶತ್ರುಗಳು ಒಂಟೆಗಳನ್ನು ತೆಗೆದುಕೊಂಡು ಹೋಗುವರು. ‘ನಮ್ಮ ಸುತ್ತಲೂ ಭಯಂಕರ ಘಟನೆಗಳು ನಡೆಯುತ್ತಿವೆ’ ಎಂದು ತಮ್ಮತಮ್ಮಲ್ಲಿಯೇ ಕೂಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವರ ಗುಡಾರಗಳನ್ನೂ, ಅವರ ಮಂದೆಗಳನ್ನೂ ತೆಗೆದುಕೊಳ್ಳುವರು. ಅವರ ಗುಡಾರದ ಪರದೆಗಳನ್ನೂ, ಅವರ ಎಲ್ಲಾ ಸಾಮಾನುಗಳನ್ನೂ, ಅವರ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯ, ಎಂದು ಅವರಿಗೆ ಕೂಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:29
21 ತಿಳಿವುಗಳ ಹೋಲಿಕೆ  

“ಆದರೆ, ನನ್ನ ಕಣ್ಣಿಗೆ ಕಾಣುತ್ತಿರುವುದೇನು? ಅವರು ಓಡುತ್ತಿರುವರು ನೋಡು, ಧೈರ್ಯಗೆಟ್ಟು, ಬೆನ್ನುಗೊಟ್ಟು. ಅವರ ಶೂರರು ಹಿಂದಿರುಗದೆ ಓಡುತ್ತಿರುವರು ಪೆಟ್ಟುತಿಂದು, ದಿಗಿಲು ಕವಿದಿದೆ ಸುತ್ತ ಮುತ್ತಲು,” ಸರ್ವೇಶ್ವರನ ವಾಣಿ ಇದು.


ಊರ ಹೊರಗೆ ಹೋಗುವಂತಿಲ್ಲ, ದಾರಿಯಲ್ಲಿ ನಡೆಯುವಂತಿಲ್ಲ. ಸುತ್ತಮುತ್ತಲೂ ಶತ್ರುವಿನ ಕತ್ತಿ, ಎಲ್ಲೆಲ್ಲೂ ದಿಗಿಲು ಎಂದರೆ ದಿಗಿಲು!”


ಇಗೋ, ತಳಮಳಗೊಂಡಿವೆ ಕೂಷಾನಿನ ಗುಡಾರಗಳು ನಡುಗುತ್ತಿವೆ ಮಿದ್ಯಾನ್ ನಾಡಿನ ಡೇರೆಗಳು.


ಅಯ್ಯೋ ತಂಗಬೇಕಲ್ಲಾ ಮೇಷೆಕಿನವರ ಮಧ್ಯದಲಿ II ಅಕಟಾ ಇರಬೇಕಲ್ಲಾ ಕೇದಾರಿನ ಪಾಳೆಯಗಳಲಿ II


ನಾವು ಮಕೆದೋನಿಯವನ್ನು ತಲುಪಿದ ಮೇಲೂ ದೇಹಕ್ಕೆ ಕಿಂಚಿತ್ತಾದರೂ ವಿಶ್ರಾಂತಿ ಸಿಗಲಿಲ್ಲ. ಎಲ್ಲಾ ಕಡೆಗಳಿಂದಲೂ ನಮಗೆ ತೊಂದರೆ ತಾಪತ್ರಯಗಳು ಬಂದುವು. ಹೊರಗೆ ಕಲಹ, ಒಳಗೆ ತಳಮಳ;


ನಾವು ಇಕ್ಕಟ್ಟುಬಿಕ್ಕಟ್ಟುಗಳಿಗೆ ಒಳಗಾಗಿದ್ದರೂ ನಜ್ಜುಗುಜ್ಜಾಗಲಿಲ್ಲ; ಸಂಶಯ ಸಂದೇಹಗಳಿಗೊಳಗಾದರೂ ನಿರಾಶೆಗೊಳ್ಳಲಿಲ್ಲ.


ದಮಸ್ಕಸ್ ಕುಂದಿದೆ, ಓಡಿಹೋಗಲು ಸಿದ್ಧವಿದೆ. ಅದಕ್ಕೆ ನಡುಕ ಹುಟ್ಟಿದೆ. ಪ್ರಸವವೇದನೆಗೆ, ಕಷ್ಟಸಂಕಟಕ್ಕೆ ಅದು ಒಳಗಾಗಿದೆ.


ನನ್ನ ಗುಡಾರ ಹಾಳಾಗಿದೆ, ಹಗ್ಗಗಳು ಕಿತ್ತುಹೋಗಿವೆ. ಮಕ್ಕಳು ನನ್ನನ್ನು ಬಿಟ್ಟು ಕಾಣದೆಹೋಗಿದ್ದಾರೆ ಗುಡಾರ ಹಾಕಲು, ಪರದೆ ಬಿಗಿಯಲು, ಯಾರೂ ಇಲ್ಲವಾಗಿದ್ದಾರೆ.”


ನಾಶನದ ಮೇಲೆ ನಾಶನದ ಸುದ್ದಿ, ನಾಡೆಲ್ಲ ಕಾಡಾಯಿತು. ದಿಢೀರೆಂದು ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ತುಂಡುತುಂಡಾದವು !


ನಿನ್ನಲ್ಲಿ ಕೂಡುವುವು ಕೇದಾರಿನ ಸಕಲ ಮಂದೆಗಳು ಬಲಿಯರ್ಪಣೆಗೊದಗುವುವು ನೆಬಾಯೋತಿನ ಟಗರುಗಳು. ಏರುವುವು ನನಗೆ ಸಮರ್ಪಕವಾದ ಹೋಮವಾಗಿ ಬಲಿಪೀಠವನು. ಚಂದಗೊಳಿಸುವೆನು ನನ್ನ ಸುಂದರವಾದ ಆಲಯವನು.


ಅದು ಎಂದಿಗೂ ನಿವಾಸಕ್ಕೆ ಯೋಗ್ಯವಾಗದು. ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಮಾಡರು. ಯಾವ ಅರಬ್ಬಿಯನೂ ಅಲ್ಲಿ ಗುಡಾರಹಾಕನು. ಕುರುಬರು ಅಲ್ಲಿ ಮಂದೆಗಳನ್ನು ತಂಗಿಸರು.


ನನಗೆ ವಿರುದ್ಧ ಜನರಾಡುವ ಗುಸುಗುಸು ಮಾತು ಕೇಳಿ ಬರುತಿದೆ I ಭಯಭೀತಿ ಎನ್ನನಾವರಿಸಿದೆ, ಒಳಸಂಚು, ಪ್ರಾಣಹರಣ ನಡೆಯುತಿವೆ II


ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಮತ್ತು ಐನೂರು ಕತ್ತೆಗಳು ಅವನಿಗಿದ್ದವು. ಜೊತೆಗೆ, ಆತನಿಗಿದ್ದ ಸೇವಕರೋ ಹಲವಾರು. ಮೂಡಣ ನಾಡಿನವರಲ್ಲಿ ಆತನೇ ದೊಡ್ಡ ಐಶ್ವರ್ಯವಂತ.


ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ಮಿದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ ಇವುಗಳ ಹೊರತಾಗಿ ಅವನು ಇಸ್ರಯೇಲರಿಂದ ಕೇಳಿ ತೆಗೆದುಕೊಂಡ ಮುರುವುಗಳ ಬಂಗಾರವೇ 20 ಕಿಲೋಗ್ರಾಂ ತೂಕವಾಗಿತ್ತು.


ಆಗ ಜೆಬಹನು ಹಾಗು ಚಲ್ಮುನ್ನನು ಗಿದ್ಯೋನನಿಗೆ, “ನೀನೇ ಎದ್ದು ಬಂದು ನಮ್ಮ ಮೇಲೆ ಬೀಳು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದೆ ಅಲ್ಲವೆ?” ಎನ್ನಲು ಅವನೆದ್ದು ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಕೊಂದುಹಾಕಿ ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.


ಮಿದ್ಯಾನ್ಯರೂ ಅಮಾಲೇಕ್ಯರೂ ಪೂರ್ವದೇಶದವರೂ ಮಿಡಿತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.


ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಮೇತ ಮಿಡತೆಗಳಂತೆ ಗುಂಪು ಗುಂಪಾಗಿ ಬರುತ್ತಿದ್ದರು. ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪುಗಳಿಂದ ನಾಡೆಲ್ಲ ನಾಶವಾಗುತ್ತಿತ್ತು.


ತರುವಾಯ ಅವರು ಊಟಕ್ಕೆ ಕುಳಿತುಕೊಂಡರು. ಅಷ್ಟರಲ್ಲಿ, ಇಷ್ಮಾಯೇಲರ ಗುಂಪೊಂದು ಗಿಲ್ಯಾದಿನಿಂದ ಬರುವುದು ಅವರ ಕಣ್ಣಿಗೆ ಕಾಣಿಸಿತು. ಇವರು ತಮ್ಮ ಒಂಟೆಗಳ ಮೇಲೆ ಪರಿಮಳ ಪದಾರ್ಥ, ಸುಗಂಧ ತೈಲ, ರಸಗಂಧ ಇವುಗಳನ್ನು ಹೇರಿಕೊಂಡು, ಈಜಿಪ್ಟಿಗೆ ಪ್ರಯಾಣಮಾಡುತ್ತಿದ್ದರು.


ಸೇನಾಧೀಶ್ವರ ಸರ್ವೇಶ್ವರನೆಂಬ ದೇವರು ಹೇಳುವುದನ್ನು ಕೇಳು - ನಿನ್ನ ನೆರೆಹೊರೆಯವರೆಲ್ಲರು ನಿನಗೆ ಭಯಾಸ್ಪದವಾಗುವಂತೆ ಮಾಡುವೆನು. ನಿನ್ನವರಲ್ಲಿ ಪ್ರತಿಯೊಬ್ಬನನ್ನು ನಿಂತಲ್ಲಿಂದಲೆ ಅಟ್ಟಲಾಗುವುದು. ಚದರಿಹೋದವರನ್ನು ಕೂಡಿಸಲು ಯಾರೂ ಇಲ್ಲದಂತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು