Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:31 - ಕನ್ನಡ ಸತ್ಯವೇದವು C.L. Bible (BSI)

31 ಅದಕ್ಕೆ ಬಾಗಿಲೂ ಇಲ್ಲ, ಬೀಗವೂ ಇಲ್ಲ’ ಎನ್ನುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಬಾಬೆಲಿನವರೇ, ಏಳಿರಿ. ಅಗುಳಿಯೂ, ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕವಾಗಿ ವಾಸಿಸುವ ಜನಾಂಗದ ಮೇಲೆ ಬೀಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 [ಬಾಬೆಲಿನವರೇ,] ಏಳಿರಿ. ಅಗುಳಿಯೂ ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕ ವಾಸಿಸುವ ಜನಾಂಗದ ಮೇಲೆ ಬೀಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಒಂದು ಜನಾಂಗವು ಯಾರೂ ತಮ್ಮನ್ನು ಸೋಲಿಸಲಾರರು ಎಂದು ನೆಮ್ಮದಿಯಿಂದಲೂ ಸಮಾಧಾನದಿಂದಲೂ ಇದೆ. ಅದು ತನ್ನ ರಕ್ಷಣೆಗಾಗಿ ಒಂದು ಕೋಟೆಯನ್ನಾಗಲಿ ಒಂದು ಬಾಗಿಲನ್ನಾಗಲಿ ಹೊಂದಿಲ್ಲ. ಆ ಜನರು ಪ್ರತ್ಯೇಕವಾಗಿ ವಾಸವಾಗಿದ್ದಾರೆ. ಆ ಜನಾಂಗದ ಮೇಲೆ ಧಾಳಿ ಮಾಡಿರಿ.” ಎಂದು ಯೆಹೋವನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ ಜನಾಂಗದ ಬಳಿಗೆ ಹೋಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. “ಅದಕ್ಕೆ ಬಾಗಿಲುಗಳು ಇಲ್ಲ; ಅಗುಳಿಗಳು ಇಲ್ಲ; ಅದರ ಜನರು ಅಪಾಯದಿಂದ ದೂರ ವಾಸಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:31
17 ತಿಳಿವುಗಳ ಹೋಲಿಕೆ  

ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ, ಹಳ್ಳಿಪಳ್ಳಿಗಳು ತುಂಬಿದ ದೇಶವನ್ನು ನುಗ್ಗಿ, ಅಗುಳಿ ಬಾಗಿಲು ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು,’ ಎಂದುಕೊಂಡು ಸೂರೆಗೈಯಲು ಆಶಿಸುವೆ;


ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ.


ಭೋಗಾಸಕ್ತಳೆ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ‘ಏಕೈಕಳು ನಾನೇ, ನನ್ನ ಹೊರತು ಇನ್ನಾರು ಇಲ್ಲ,’ ಎನ್ನುವವಳೇ, ‘ವಿಧವೆಯಾಗೆನು, ಪುತ್ರಶೋಕ ಎನಗಿರದು’ ಎನ್ನುವವಳೇ, ಇದನು ಕೇಳು :


ವಾಸಿಸಿರಿ ಇಸ್ರಯೇಲರೇ, ನಿರ್ಭಯರಾಗಿ ಯಕೋಬನ ಸಂತತಿಯೇ, ಸುರಕ್ಷಿತವಾಗಿ ಆಗಸದಿಂದ ಮಳೆಸುರಿಯುವ ನಾಡಿನಲ್ಲಿ ಧಾನ್ಯ, ದ್ರಾಕ್ಷಾರಸ ಸಮೃದ್ಧಿಯಾಗಿರುವಲ್ಲಿ!


ನಾನವರನ್ನು ಕಂಡೆ ಬೆಟ್ಟದ ಶಿಖರದಿಂದ ನೋಡಿದೆನವರನ್ನು ಗುಡ್ಡದೆತ್ತರದಿಂದ,


“ಇರುವ ನಗರ ನಾನೇ, ನನ್ನ ಹೊರತು ಇನ್ನಾರೂ ಇಲ್ಲ” ಎಂದು ಕೊಚ್ಚಿಕೊಂಡು ಯಾವ ಚಿಂತೆಯೂ ಇಲ್ಲದೆ, ನೆಮ್ಮದಿಯಿಂದ ಇದ್ದ ನಿನೆವೆಯ ಗತಿ ನೋಡಿ, ಎಂಥ ಹಾಳುಬಿದ್ದ ಊರಾಗಿದೆ! ಕಾಡುಮೃಗಗಳ ಬೀಡಾಗಿದೆ! ಹಾದುಹೋಗುವವರೆಲ್ಲ ಸಿಳ್ಳುಹಾಕಿ ಕೈತೋರಿಸಿ ಪರಿಹಾಸ್ಯಮಾಡುವಷ್ಟು ಕೀಳಾಗಿದೆ!


ಆ ಸ್ವಾಮಿ ಇಂತೆನ್ನುತ್ತಾನೆ: “ನಿನ್ನ ಶತ್ರುಗಳು ಎಷ್ಟು ಬಲಾಢ್ಯರಾಗಿದ್ದರೂ ಎಷ್ಟು ಅಧಿಕ ಸಂಖ್ಯೆಯಲ್ಲಿದ್ದರೂ ಅವರು ನಾಶಕ್ಕೊಳಗಾಗುವರು; ಆ ದುರಾಲೋಚಕನು ಇಲ್ಲವಾಗುವನು. ನನ್ನ ಜನರೇ, ನಾನು ನಿಮ್ಮನ್ನು ಬಾಧಿಸಿದ್ದುಂಟು, ಆದರೆ ಇನ್ನು ಮುಂದೆ ಬಾಧಿಸುವುದಿಲ್ಲ.


ನಾನು ಮಾಗೋಗ್ ದೇಶದ ಮೇಲೂ ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ನಿಶ್ಚಿತವಾಗುವುದು.


“ಆ ದಿನಗಳಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು, ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಸುಡಾನರನ್ನು ಹೆದರಿಸುವರು; ಈಜಿಪ್ಟಿನ ವಿನಾಶ ದಿನದಲ್ಲಿ ಸುಡಾನರಿಗೂ ಸಂಕಟವಾಗುವುದು; ಇಗೋ, ಆ ದಿನ ಬಂದಿತು!”


ಮೋವಾಬು ಚಿಕ್ಕತನದಿಂದಲೂ ನೆಮ್ಮದಿಯಾಗಿದೆ. ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ. ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ. ಅದು ಎಂದೂ ಸೆರೆಹೋಗಲಿಲ್ಲ. ಆದಕಾರಣ ಅದರ ರುಚಿ ಅದರಲ್ಲಿದೆ. ಅದರ ವಾಸನೆ ಮಾರ್ಪಡಲಿಲ್ಲ.


ಸುಖವಾಗಿರುವವರೇ, ಗಡಗಡನೆ ನಡುಗಿರಿ. ನಿಶ್ಚಿಂತರಾಗಿರುವವರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಗಳನ್ನು ಕಿತ್ತುಹಾಕಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.


ಸುಖಜೀವಿಗಳಾದ ಮಹಿಳೆಯರೇ, ಏಳಿ ನನ್ನ ಮಾತನ್ನು ಕೇಳಿ. ನಿಶ್ಚಿಂತೆಯಿಂದಿರುವ ಯುವತಿಯರೇ, ನನ್ನ ಧ್ವನಿಗೆ ಕಿವಿಗೊಡಿ.


ಬೇಸತ್ತಿದೆ ಮನ ಗರ್ವಿಗಳ ನಿಂದೆಯಿಂದ I ಸುಖಭೋಗಿಗಳು ಮಾಡುವ ಅಪಹಾಸ್ಯದಿಂದ II


ದುರ್ಜನರಿದೊ ನಿಶ್ಚಿಂತರಾಗಿಹರು I ಸಿರಿಮೇಲೆ ಸಿರಿಯ ಶೇಖರಿಸುತಿಹರು II


ಘೋಷಿಸಲಿ ಮರುಭೂಮಿಯೂ ಅದರ ನಗರಗಳೂ ಕೇದಾರಿನವರೂ ಗ್ರಾಮನಿವಾಸಿಗಳೂ ಜಯಘೋಷಮಾಡಲಿ ಸೆಲ ಪಟ್ಟಣದವರೂ ಸಂತೋಷದಿಂದ ಹರ್ಷಧ್ವನಿಗೈಯಲಿ ಆ ಪರ್ವತದ ತುತ್ತತುದಿಗಳಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು