Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:32 - ಕನ್ನಡ ಸತ್ಯವೇದವು C.L. Bible (BSI)

32 ಅವರ ಒಂಟೆಗಳು ಕೊಳ್ಳೆಯಾಗುವುವು. ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವುವು. ಮುಂದಲೆಗೂದಲು ಕತ್ತರಿಸಿಕೊಳ್ಳುವ ಆ ಜನರನ್ನು ಎಲ್ಲ ಕಡೆಯ ಗಾಳಿಗೂ ತೂರುವೆನು. ಎಲ್ಲ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ವೈರಿಯು ಅವರ ಒಂಟೆಗಳನ್ನು ಮತ್ತು ಅವರ ದನಗಳ ಮಂದೆಗಳನ್ನು ಅಪಹರಿಸುವನು. ವೈರಿಯು ಅವರ ದೊಡ್ಡದೊಡ್ಡ ಮಂದೆಗಳನ್ನು ಅಪಹರಿಸುವನು. ತಮ್ಮ ಗಡ್ಡದ ಕೂದಲಿನ ಮೂಲೆಗಳನ್ನು ಕತ್ತರಿಸಿಕೊಂಡ ಜನರನ್ನು ನಾನು ಭೂಮಂಡಲದ ಎಲ್ಲೆಡೆಗಳಲ್ಲಿ ಚದರಿಸುವೆನು. ಎಲ್ಲಾ ಕಡೆಯಿಂದಲೂ ಅವರ ಮೇಲೆ ವಿಪತ್ತುಗಳನ್ನು ಬರಮಾಡುವೆನು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರ ಒಂಟೆಗಳು ಕೊಳ್ಳೆಯಾಗುವುವು; ಅವರ ದನಗಳ ಸಮೂಹವು ಸುಲಿಗೆಯಾಗುವುದು; ಕಟ್ಟಕಡೆಯ ಮೂಲೆಗಳಲ್ಲಿ ಇರುವವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಸರ್ವಕಡೆಯಿಂದ ಅವರ ಮೇಲೆ ಆಪತ್ತನ್ನು ತರಿಸುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:32
8 ತಿಳಿವುಗಳ ಹೋಲಿಕೆ  

ಏಕೆಂದರೆ ಈ ಎಲ್ಲ ಜನಾಂಗದವರು, ಇಸ್ರಯೇಲ್ ವಂಶದವರು ಕೂಡ, ಹೃದಯದಲ್ಲಿ ಸುನ್ನತಿಯಿಲ್ಲದವರು. ಇದು ಸರ್ವೇಶ್ವರನಾದ ನಾನು ಆಡುವ ಮಾತು.”


ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.’


ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ ಅವರನ್ನು ಆಯಾ ಗಾಳಿಗೆ ತೂರಿಬಿಡುವೆನು. ಏಲಾಮಿನಿಂದ ದೇಶಭ್ರಷ್ಟರಾದವರು ಆಶ್ರಯ ಹುಡುಕದ ರಾಜ್ಯವೇ ಇರದು.


ಸಮುದ್ರದ ಆಚಿನ ಕರಾವಳಿಯ ಅರಸರು, ದೆದಾನ್ಯರು, ತೇಮಾ, ಬೂಜ್ ನಾಡಿನವರು, ಮುಂದಲೆಗೂದಲು ಕತ್ತರಿಸಿಕೊಳ್ಳುವವರೆಲ್ಲರು;


ನಿನ್ನಲ್ಲಿನ ಮೂರನೆಯ ಒಂದು ಭಾಗದ ಜನರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲೆ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


“ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲ ಜನಾಂಗಗಳಲ್ಲಿಯೂ ಸರ್ವೇಶ್ವರ ನಿಮ್ಮನ್ನು ಚದುರಿಸುವರು; ಅಲ್ಲಿ ನಿಮಗಾಗಲಿ ನಿಮ್ಮ ಪಿತೃಗಳಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


“ಈಜಿಪ್ಟರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೊವಾಬ್ಯರು, ಮುಂದಲೆ ಕೂದಲನ್ನು ಕತ್ತರಿಸಿಕೊಳ್ಳುವ ಅರಣ್ಯವಾಸಿಗಳು, ಅಂತು ದೇಹದಲ್ಲಿ ಮಾತ್ರ ಸುನ್ನತಿಯುಳ್ಳವರು, ಇವರೆಲ್ಲರನ್ನು ದಂಡಿಸುವ ದಿನಗಳು ಬರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು