Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:39 - ಕನ್ನಡ ಸತ್ಯವೇದವು C.L. Bible (BSI)

39 ಇದು ಸರ್ವೇಶ್ವರನಾದ ನನ್ನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ನೀಗಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಇದು ಯೆಹೋವನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆದರೂ ಕಟ್ಟಕಡೆಯಲ್ಲಿ ಏಲಾವಿುನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 “ಆದರೆ ಭವಿಷ್ಯದಲ್ಲಿ ನಾನು ಏಲಾಮಿಗೆ ಒಳ್ಳೆಯದನ್ನು ಮಾಡುವೆನು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 “ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವುದೇನೆಂದರೆ, ನಾನು ಏಲಾಮಿನ ಸಮೃದ್ಧಿಯನ್ನು ತಿರುಗಿ ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:39
15 ತಿಳಿವುಗಳ ಹೋಲಿಕೆ  

ಆದರೂ ಬರಲಿರುವಾ ದಿನದಂದು ತಪ್ಪಿಸುವೆನು ಮೋವಾಬಿನ ದುರವಸ್ಥೆಯನ್ನು ಎನ್ನುತ್ತಾರೆ ಸರ್ವೇಶ್ವರ. - ಇತಿ ಮೋವಾಬನ್ನು ಕುರಿತ ತೀರ್ಪು.


ಕಾಲಾಂತ್ಯದೊಳು ಸರ್ವೇಶ್ವರನ ದೇವಾಲಯವಿರುವ ಪರ್ವತ ಬೆಳೆದು ನೆಲೆಗೊಳ್ಳುವುದು ಸರ್ವ ಪರ್ವತಗಳಿಗಿಂತ ಉನ್ನತೋನ್ನತ ಹರಿದು ಬರುವುವಾಗ ಜನಾಂಗಗಳು ಪ್ರವಾಹದಂತೆ ಅದರತ್ತ.


ಸನಾತನ ಸೌಭಾಗ್ಯಕ್ಕೆ ಮರಳಿಸುವೆನು ನನ್ನ ಜನರಾದ ಇಸ್ರಯೇಲರನು. ವಾಸಮಾಡುವರವರು ಪಾಳುಬಿದ್ದ ಪಟ್ಟಣಗಳನು ಮತ್ತೆ ಕಟ್ಟಿಕೊಂಡು. ಕುಡಿಯುವರು ಸಮೃದ್ಧಿಯಾಗಿ ದ್ರಾಕ್ಷಾತೋಟಗಳನ್ನು ಮಾಡಿಕೊಂಡು. ತಿನ್ನುವರು ಯಥೇಚ್ಛವಾಗಿ ಫಲವೃಕ್ಷಗಳನು ಬೆಳೆಸಿಕೊಂಡು.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ಅಂತ್ಯಕಾಲದಲ್ಲಿ ನಿನ್ನ ಜನರಿಗೆ ಬರಲಿರುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆ. ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವಿದೆ,” ಎಂದು ಹೇಳಿದನು.


ಆದರೆ ರಹಸ್ಯಗಳನ್ನು ವ್ಯಕ್ತಪಡಿಸಬಲ್ಲವರು ಒಬ್ಬರಿದ್ದಾರೆ. ಅವರೇ ಪರಲೋಕದಲ್ಲಿರುವ ದೇವರು. ಬರಲಿರುವ ಕಾಲದಲ್ಲಿ ನಡೆಯತಕ್ಕದ್ದನ್ನು ರಾಜ ನೆಬೂಕದ್ನೆಚ್ಚರರಾದ ನಿಮಗೆ ಅವರೇ ತಿಳಿಯಪಡಿಸಿದ್ದಾರೆ. ನೀವು ಕಂಡ ಕನಸು, ಹಾಸಿಗೆಯ ಮೇಲೆ ಮಲಗಿದ್ದಾಗ ನಿಮ್ಮ ಮನಸ್ಸಿಗೆ ತೋಚಿದ ಸ್ವಪ್ನಗಳು ಹೀಗಿವೆ:


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಯೇಲ್ ವಂಶದವರಿಗೆಲ್ಲ ಕೃಪೆತೋರುವೆನು.


ನನ್ನ ಜನರಾದ ಇಸ್ರಯೇಲರ ಮೇಲೆ ಬಿದ್ದು ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವೆ. ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು, ನಾನೇ ಸರ್ವೇಶ್ವರ ಎಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ನಾಡಿನ ಮೇಲೆ ಬೀಳಮಾಡುವೆನು.


ಈಜಿಪ್ಟಿನ ದುರವಸ್ಥೆಯನ್ನು ತಪ್ಪಿಸಿ, ಅವರ ಜನ್ಮಭೂಮಿಯಾದ ದಕ್ಷಿಣ ಈಜಿಪ್ಟಿಗೆ ಪುನಃ ಬರಮಾಡುವೆನು. ಅಲ್ಲೇ ಅವರು ನಿಕೃಷ್ಟ ರಾಜ್ಯದವರಾಗಿರುವರು.


ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ನೀಗಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ಸರ್ವೇಶ್ವರನ ಶ್ರೀನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು, ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದು ಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದು ಬರುವುವು.


ಯೋಬನು ತನ್ನ ಮಿತ್ರರಿಗೋಸ್ಕರ ಪ್ರಾರ್ಥಿಸಿದ ಬಳಿಕ ಸರ್ವೇಶ್ವರಸ್ವಾಮಿ ಅವನ ದುಸ್ಥಿತಿಯನ್ನು ಹೋಗಲಾಡಿಸಿದರು. ಅವನ ಆಸ್ತಿಪಾಸ್ತಿಯನ್ನು ಮೊದಲಿಗಿಂತ ಇಮ್ಮಡಿಯಾಗಿಸಿದರು.


ಆದರೆ ಅವರನ್ನು ಕಿತ್ತುಹಾಕಿದ ಮೇಲೆ ಮತ್ತೆ ಅವರಿಗೆ ಕನಿಕರಿಸುವೆನು. ಪ್ರತಿಯೊಬ್ಬನನ್ನು ಅವನವನ ಆಸ್ತಿಪಾಸ್ತಿಗೆ ಅವನವನ ನಾಡಿಗೆ ಮರಳಿ ಬರಮಾಡುವೆನು.


ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ನಾಡಿನ ಅರಸನನ್ನೂ ಅಧಿಕಾರಿಗಳನ್ನೂ ಅಳಿಸಿಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು