Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:4 - ಕನ್ನಡ ಸತ್ಯವೇದವು C.L. Bible (BSI)

4 “ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲೆ ಭರವಸೆಯಿಟ್ಟ ಭ್ರಷ್ಟನಾಡೇ, “ನನ್ನ ಕಣಿವೆಗಳಲ್ಲಿ ನೀರು ತುಂಬಿಹರಿಯುತ್ತಿದೆ’ ಎಂದು ಏಕೆ ಕೊಚ್ಚಿಕೊಳ್ಳುತ್ತಿರುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ‘ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ, ‘ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು’ ಏಕೆ ಕೊಚ್ಚಿಕೊಳ್ಳುತ್ತೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಮೇಲೆ ಯಾರು ತಾನೆ ಬಿದ್ದಾರು ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸವಿಟ್ಟಿರುವ ಭ್ರಷ್ಟದೇಶವೇ, ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು ಏಕೆ ಕೊಚ್ಚಿಕೊಳ್ಳುತ್ತೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ನಿನ್ನ ಬಲದ ಬಗ್ಗೆ ಜಂಬ ಕೊಚ್ಚಿಕೊಳ್ಳುತ್ತಿರುವೆ, ಆದರೆ ನೀನು ನಿನ್ನ ಬಲವನ್ನು ಕಳೆದುಕೊಳ್ಳುತ್ತಿರುವೆ. ನಿನ್ನ ಹಣ ನಿನ್ನನ್ನು ರಕ್ಷಿಸುವದೆಂದು ನೀನು ನಂಬಿರುವೆ. ಯಾರೂ ನಿನ್ನ ಮೇಲೆ ಧಾಳಿಮಾಡುವ ವಿಚಾರ ಸಹ ಇಟ್ಟುಕೊಂಡಿಲ್ಲವೆಂದು ನೀನು ತಿಳಿದುಕೊಂಡಿರುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹಿಂದಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ, ನಿನ್ನ ಬೊಕ್ಕಸಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯವಾಗಿ ಏಕೆ ಹೆಚ್ಚಳ ಪಡುತ್ತೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:4
18 ತಿಳಿವುಗಳ ಹೋಲಿಕೆ  

ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ಕಣಿವೆಯಲ್ಲಿನ ನಗರಿಯೇ, ಬಯಲಿನ ಬಂಡೆಯಲ್ಲಿರುವ ಪುರಿಯೇ, ‘ನಮ್ಮ ಮೇಲೆ ಯಾರಿಳಿದು ಬಂದಾರು? ನಮ್ಮ ನಿವಾಸಗಳಿಗೆ ಯಾರು ನುಗ್ಗಿಯಾರು?’ ಎನ್ನುವವರೇ, ಇಗೋ ನಾನೆ ನಿಮಗೆ ವಿರುದ್ಧವಾಗಿದ್ದೇನೆ.


ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.


“ಮೋವಾಬೇ, ನಿನ್ನ ಸಾಧನೆಗಳಲ್ಲೇ, ಧನರಾಶಿಗಳಲ್ಲೇ ಭರವಸೆಯಿಟ್ಟೆ. ಆದುದರಿಂದ ನೀನು ಇದೀಗಲೆ ಶತ್ರುಗಳ ಕೈವಶವಾಗುವೆ. ಕೆಮೋಷ್ ಎಂಬ ನಿನ್ನ ದೇವತೆಯೂ ಅದರ ಭಕ್ತ ಯಾಜಕರೂ ಹಾಗೂ ರಾಜ್ಯಾಧಿಕಾರಿಗಳು ಸೆರೆಗೆ ಹೋಗುವರು ಒಟ್ಟಿಗೆ.


“ಭ್ರಷ್ಟರಾದ ಜನರೇ, ನನಗೆ ಅಭಿಮುಖರಾಗಿರಿ, ನಾನು ನಿಮಗೆ ಅಧಿಪತಿ. ನಿಮ್ಮಲ್ಲಿ ಒಂದು ಪಟ್ಟಣಕ್ಕೆ ಒಬ್ಬನಂತೆ, ಗೋತ್ರಕ್ಕೆ ಇಬ್ಬರಂತೆ ಆರಿಸಿ ಸಿಯೋನಿಗೆ ಕರೆತರುವೆನು.


ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II


ಅವರ ಭರವಸೆ ಸಿರಿಸಂಪತ್ತಿನಲಿ I ಅವರ ಹಿರಿಮೆ ಅಧಿಕಾಸ್ತಿಪಾಸ್ತಿಯಲಿ II


ಅಹಂಭಾವದಿಂದಾಕೆ ಮೆರೆದುದಕೆ ಪೀಡಿಸಿ ಕಾಡಿಸಿರಿ ಸರಿಯಾದ ಅಳತೆಯಲ್ಲೇ. ಹೃದಯದಲಿ ಹೇಳುತಿಹಳು ಅವಳಿಂತು : ರಾಣಿಯಂತೆ ನಾ ಕುಳಿತಿಹೆನು ವಿಧವೆಯಲ್ಲ ನಾನೇನು ಕಾಣೆನೆಂದಿಗೂ ದುಃಖವನು.


ಇಸ್ರಯೇಲಿನವರು ಹತೋಟಿಗೆ ಬಾರದ ಹೋರಿಯಂತೆ ಮೊಂಡಾಗಿದ್ದಾರೆ. ಸರ್ವೇಶ್ವರ ಅವರನ್ನು ಈಗ ವಿಶಾಲವಾದ ಹುಲ್ಲುಗಾವಲುಗಳಲ್ಲಿ ಕುರಿಗಳಂತೆ ಮೇಯಿಸಲು ಸಾಧ್ಯವೇ?


ಪರ್ವತಾಗ್ರಗಳಲ್ಲಿ ನೆಲೆಗೊಂಡ ಜನತೆಯೇ, ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನತೆಯೇ, ನಿನ್ನ ಭೀಕರತ್ವವೆಲ್ಲಿ? ನಿನ್ನೆದೆಯ ಗರ್ವ ನಿನ್ನನ್ನು ಮೋಸಗೊಳಿಸಿದೆ. ಹದ್ದಿನಂತೆ ನೀನು ಉನ್ನತಸ್ಥಾನದಲ್ಲಿ ಗೂಡನ್ನು ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ನನ್ನ ನುಡಿ,” ಎನ್ನುತ್ತಾರೆ ಸರ್ವೇಶ್ವರ.


ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಸ್ವಂತ ಆಲೋಚನೆಗಳನ್ನು ಅನುಸರಿಸಿದರು. ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆದುಕೊಂಡರು. ಮುಂದೆ ಸಾಗದೆ ಹಿಂದಿರುಗಿಯೇ ಹೋದರು.


ಐಶ್ವರ್ಯವಂತನಿಗೆ ಐಶ್ವರ್ಯವೇ ಬಲವಾದ ಡೆಂಕಣ; ಬಡವನ ಅಳಿವಿಗೆ ಬಡತನವೇ ಕಾರಣ.


“ನಂಬಿಕೆ ದ್ರೋಹಿಯಾದ ಕುವರಿಯೇ, ಎಂದಿನವರೆಗೆ ಅತ್ತಿತ್ತ ಅಲೆದಾಡುತ್ತಿರುವೆ? ಸರ್ವೇಶ್ವರನಾದ ನಾನು ಅಪೂರ್ವವಾದುದನ್ನು ಉಂಟಾಗಿಸಿರುವೆ: ಇಗೋ, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು