ಯೆರೆಮೀಯ 49:5 - ಕನ್ನಡ ಸತ್ಯವೇದವು C.L. Bible (BSI)5 ಸೇನಾಧೀಶ್ವರ ಸರ್ವೇಶ್ವರನೆಂಬ ದೇವರು ಹೇಳುವುದನ್ನು ಕೇಳು - ನಿನ್ನ ನೆರೆಹೊರೆಯವರೆಲ್ಲರು ನಿನಗೆ ಭಯಾಸ್ಪದವಾಗುವಂತೆ ಮಾಡುವೆನು. ನಿನ್ನವರಲ್ಲಿ ಪ್ರತಿಯೊಬ್ಬನನ್ನು ನಿಂತಲ್ಲಿಂದಲೆ ಅಟ್ಟಲಾಗುವುದು. ಚದರಿಹೋದವರನ್ನು ಕೂಡಿಸಲು ಯಾರೂ ಇಲ್ಲದಂತಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದುರಿದವರನ್ನು ಒಟ್ಟು ಸೇರಿಸುವುದಕ್ಕೆ ಯಾರೂ ಇಲ್ಲದಂತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ - ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದರಿದವರನ್ನು ಕೂಡಿಸುವದಕ್ಕೆ ಯಾರೂ ಇಲ್ಲವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ಸರ್ವಶಕ್ತನಾದ ಯೆಹೋವನು ಹೀಗೆನ್ನುವನು, “ನಾನು ಎಲ್ಲೆಡೆಗಳಿಂದಲೂ ನಿಮಗೆ ಆಪತ್ತುಗಳನ್ನು ತರುವೆನು. ನೀವೆಲ್ಲರೂ ಭಯದಿಂದ ಓಡಿಹೋಗುವಿರಿ. ಯಾರೂ ನಿಮ್ಮನ್ನು ಪುನಃ ಒಂದಡೆ ಸೇರಿಸಲಾರರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇಗೋ, ನಾನು ನಿನ್ನ ಸುತ್ತಲಿರುವವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಅನ್ನುತ್ತಾರೆ. “ಆಗ ನಿಮ್ಮಲ್ಲಿ ಪ್ರತಿಯೊಬ್ಬನನ್ನೂ ಅಟ್ಟಲಾಗುವುದು; ಓಡಿಹೋದವರನ್ನು ಕೂಡಿಸುವವನು ಒಬ್ಬನೂ ಇರುವುದಿಲ್ಲ. ಅಧ್ಯಾಯವನ್ನು ನೋಡಿ |